ಆ್ಯಪ್ನಗರ

'ಯಡಿಯೂರಪ್ಪ ನಮಗೇನು ಕೊಡ್ತಿಯಪ್ಪ': ಸಿಎಂ ವಿರುದ್ಧ ರಾಯಚೂರು ನೆರೆ ಸಂತ್ರಸ್ತರ ಆಕ್ರೋಶ

ತಾಲೂಕಿನ ಸಾಲಗುಂದಾ ಗ್ರಾಮದಲ್ಲಿಎರಡು ದಿನಗಳ ಕಾಲ ಸುರಿದಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನೂರಾರು ಕುಟುಂಬಗಳು ಬೀದಿಗೆ ಬಂದಿವೆ.

Vijaya Karnataka Web 27 Sep 2019, 12:31 pm
ರಾಯಚೂರು: ಜಿಲ್ಲೆಯಾದ್ಯಂತ ಮಳೆರಾಯನ ಆರ್ಭಟಕ್ಕೆ ರೈತರ ಜಮೀನುಗಳಿಗೆ ನೀರು ನುಗಿದ್ದು, ಮನೆಗಳು ಜಲಾವೃತವಾಗಿವೆ. ತಾಲೂಕಿನ ಸಾಲಗುಂದಾ ಗ್ರಾಮದಲ್ಲಿಎರಡು ದಿನಗಳ ಕಾಲ ಸುರಿದಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನೂರಾರು ಕುಟುಂಬಗಳು ಬೀದಿಗೆ ಬಂದಿವೆ.

ನೆರೆಯಿಂದ ಕಂಗಾಲಾಗಿರು ಗ್ರಾಮಸ್ಥರು ಮುಖ್ಯಮಂತ್ರಿ ಬಿ ಎಸ್ ಯಡಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, 'ಮಳೆ ಹಾನಿ ಪರಿಹಾರವೇ ಕೊಟ್ಟಿಲ್ಲ. ಇನ್ನೂ ನಮಗೇನು ಕೊಡ್ತೀಯಪ್ಪ' ಎಂದು ಖಾರವಾಗಿ ಪ್ರಶ್ನೆಸಿದ್ದಾರೆ.

ಬೆಂಗಳೂರಲ್ಲಿ ಬುಧವಾರ ರಾತ್ರಿಯೂ ಧಾರಾಕಾರ ಮಳೆ

ಉತ್ತರ ಕರ್ನಾಟಕ ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಲು ಸಾಧ್ಯವಾಗಲಿಲ್ಲ. ನಮ್ಮಲ್ಲಿಗೂ ಬರಬೇಡ. ಅಕ್ಕಿ, ಜೋಳ ನಮ್ಮಲ್ಲಿವೆ. ನೀನೇನು ಕೊಡುವುದು ಬೇಡ ಎಂದು ಸಿಎಂ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಳ್ಳಾರಿಯಲ್ಲಿ ವರುಣನ ಆರ್ಭಟ: ಒಂದು ಸಾವು

ಗ್ರಾಮದ ಸುತ್ತಲೂ ಗುಡ್ಡ ಇರುವುದು ಮತ್ತು ನಾಲಾದ ನೀರೆಲ್ಲಾಗ್ರಾಮ ಹೊಕ್ಕಿದ್ದರಿಂದ ಜಕ್ಕಂಬಾವಿ, ಮಾರೆಮ್ಮ ದೇವಸ್ಥಾನದ ಹತ್ತಿರದಲ್ಲಿರುವ ನೂರಾರು ಮನೆಗಳು ಜಲಾವೃತಗೊಂಡಿವೆ. ಶಾಸಕ ವೆಂಕಟರಾವ್‌ ನಾಡಗೌಡ, ಸಹಾಯಕ ಆಯುಕ್ತ ರಾಜಶೇಖರ ಡಂಬಳ ಸೇರಿದಂತೆ ಪ್ರಮುಖ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಿರಾಶ್ರಿತರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ, ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಕಾಳಜಿಕೇಂದ್ರವನ್ನು ತೆರೆಯಲಾಗಿದೆ. ಮಳೆ ವಾತಾವರಣ ಮುಂದುವರಿದಿರುವುದರಿಂದ ಆತಂಕ ದೂರಾಗಿಲ್ಲ.

ಮಳೆ ಬಂದ ಸಂದರ್ಭದಲ್ಲಿ ಮನೆಗಳಿಗೆ ನೀರು ನುಗ್ಗುವುದು ಸಾಮಾನ್ಯವಾಗಿದೆ. ಆದರೆ ಈ ಮೊದಲು ನಾಲಾ ಇದ್ದ ಸ್ಥಳದಲ್ಲಿಇದೀಗ ಮನೆಗಳನ್ನು ಕಟ್ಟಿಕೊಳ್ಳಲಾಗಿದೆ. ನಾಲಾ ಒತ್ತುವರಿ ಮಾಡಿದ್ದರಿಂದಲೇ ಸಮಸ್ಯೆ ಉಲ್ಬಣಗೊಳ್ಳುತ್ತಿದೆ ಎಂಬುದು ಗ್ರಾಮಸ್ಥರ ಅಭಿಪ್ರಾಯ. ಗುಡ್ಡದಿಂದ ಬರುವ ನೀರು ನೇರವಾಗಿ ಹರಿದು ಹೋಗುವ ವ್ಯವಸ್ಥೆ ಇಲ್ಲಿಲ್ಲ. ಹೀಗಾಗಿ ಮನೆಗಳಿಗೆ ಹೊಕ್ಕು ಅವಾಂತರ ಸೃಷ್ಟಿಯಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ