ಆ್ಯಪ್ನಗರ

ರಾಯಚೂರು: ಅಸ್ತಮಾಕ್ಕೆ ಯುವಕ ಬಲಿ, ಶವ ಸಾಗಣೆಯಿಂದ ಸ್ಥಳೀಯರಲ್ಲಿ ಮೂಡಿದ ಆತಂಕ!

ರಾಯಚೂರಿನಲ್ಲಿ ಹೃದಯ ಸಂಬಂಧಿ ಕಾಯಿಲೆ ಹಾಗೂ ಅಸ್ತಮಾದಿಂದ ಬಳಲುತ್ತಿದ್ದ ಯುವಕನೋರ್ವ ಮೃತಪಟ್ಟಿದ್ದು, ಆರೋಗ್ಯ ಸಿಬ್ಬಂದಿ ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆ ನಡೆಸಿರುವುದು ಆತಂಕಕ್ಕೆ ಕಾರಣವಾಗಿದೆ.

Vijaya Karnataka Web 2 Jul 2020, 12:18 pm
ರಾಯಚೂರು: ಹೃದಯ ಸಂಬಂಧಿ ಕಾಯಿಲೆ ಹಾಗೂ ಅಸ್ತಮಾದಿಂದ ಬಳಲುತ್ತಿದ್ದ ಯುವಕನೋರ್ವ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಎಲ್ ಬಿಎಸ್ ನಗರದ 25 ವರ್ಷದ ಯುವಕ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ. ಆದರೆ ಅನುಮಾನಾಸ್ಪದ ರೀತಿಯಲ್ಲಿ ಅಂತ್ಯ ಸಂಸ್ಕಾರ ನಡೆದುದರಿಂದ ಎಲ್ ಬಿಎಸ್ ನಗರದ ನಿವಾಸಿಗಳಲ್ಲಿ ಆತಂಕ ಹೆಚ್ಚಿದೆ.
Vijaya Karnataka Web raichur
ಶವ ಸಾಗಿಸುತ್ತಿರುವ ಆರೋಗ್ಯ ಸಿಬ್ಬಂದಿ ಜತೆ ಮಕ್ಕಳು


ಕೊರೊನಾ ವೈರಸ್ ಸೋಂಕು ಖಚಿತಗೊಳ್ಳದಿದ್ದರೂ ಕೊರೊನಾ ಸಂಶಯದ ಮೇಲೆ ಪಿಪಿಇ ಕಿಟ್ ಧರಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ ಅಂತ್ಯಕ್ರಿಯೆ ನಡೆಸಿದ್ದಾರೆ. ಹೀಗಾಗಿ ಅನುಮಾನಾಸ್ಪದ ರೀತಿಯಲ್ಲಿ ಅಂತ್ಯ ಸಂಸ್ಕಾರ ನಡೆದುದರಿಂದ ಗೊಂದಲ ಉಂಟಾಗಿ ಜನರಲ್ಲಿ ಆತಂಕ ಹೆಚ್ಚಿದೆ.

ಅಂತ್ಯಕ್ರಿಯೆಗೆ ಶವ ಸಾಗಣೆ ಮಾಡಿದ ವೇಳೆ ಮಕ್ಕಳು ಕೂಡ ಬಳಿಯಲ್ಲೇ ಸಾಗಿದ್ದಾರೆ. ಹೀಗಾಗಿ ಸ್ಥಳೀಯರಲ್ಲಿ ಈಗ ಆತಂಕ ಮನೆ ಮಾಡಿದೆ. ಕೊರೊನಾ ಪ್ರೊಟೊಕಾಲ್ ಪ್ರಕಾರ ಆರೋಗ್ಯ ಇಲಾಖೆ ಸಿಬ್ಬಂದಿ ಯಿಂದ ಪಿಪಿಇ ಕಿಟ್ ಧರಿಸಿ ಶವ ವನ್ನು ಪ್ಲಾಸ್ಟಿಕ್ ನಿಂದ ಸುತ್ತಿ ಅಂಬ್ಯುಲೆನ್ಸ್ ನಲ್ಲಿ ಸಾಗಣೆ ಮಾಡಿದ್ದಾರೆ. ಬಳಿಕ ಅಂತ್ಯಕ್ರಿಯೆ ನಡೆಸಿದ್ದಾರೆ. ಹೀಗಾಗಿ ಭೀತಿ ಹೆಚ್ಚಿದೆ.

ಶವ ಸಾಗಣೆ ವೇಳೆ ಆ ಪ್ರದೇಶದ ಮಕ್ಕಳು ಸಿಬ್ಬಂದಿ ಬಳಿಯೇ ಸಾಗಿದ ವಿಡಿಯೋ ಕೂಡ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ