ಆ್ಯಪ್ನಗರ

ನೀರಿನ ಸಮಸ್ಯೆ ಪರಿಹಾರಕ್ಕೆ ಮನವಿ

ತಾಲೂಕಿನ ಬೂದಿವಾಳಕ್ಯಾಂಪ್‌ ಕ್ಯಾಂಪ್‌, ಅಮರಾಪುರ, ಉಪ್ಪಳ, ಕಲಮಂಗಿ, ಬೋಗಾಪುರ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘದಿಂದ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡರಿಗೆ ಮನವಿ ಸಲ್ಲಿಸಲಾಯಿತು.

Vijaya Karnataka 16 May 2019, 5:00 am
ಸಿಂಧನೂರು ; ತಾಲೂಕಿನ ಬೂದಿವಾಳಕ್ಯಾಂಪ್‌ ಕ್ಯಾಂಪ್‌, ಅಮರಾಪುರ, ಉಪ್ಪಳ, ಕಲಮಂಗಿ, ಬೋಗಾಪುರ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘದಿಂದ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡರಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web request a solution to the water problem
ನೀರಿನ ಸಮಸ್ಯೆ ಪರಿಹಾರಕ್ಕೆ ಮನವಿ


ಬೇಸಿಗೆ ಬಿಸಲು ಹೆಚ್ಚಿದ್ದರಿಂದ ನೀರಿನ ಸಮಸ್ಯೆ ತಲೆದೋರಿದೆ. ಆಯಾ ಗ್ರಾಮಗಳ ಹರಿಜನ ಕೇರಿ ಸೇರಿ ಹಲವು ಕಡೆಗಳಲ್ಲಿ ಸಮಸ್ಯೆ ಪರಿಹರಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮೌಖಿಕವಾಗಿ ವಿನಂತಿಸಲಾಗಿದೆ. ಆದರೆ ಯಾವುದೇ ರೀತಿಯ ಸೂಕ್ತ ಸ್ಪಂದನೆ ದೊರೆತಿಲ್ಲ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಬೇಕು. ಜನ, ಜಾನುವಾರುಗಳಿಗೆ ತೊಂದರೆಯಾಗದಂತೆ ಎಚ್ಚರಿಕೆವಹಿಸಬೇಕು ಎಂದು ಮನವಿ ಮಾಡಿದರು.

ಸಂಘಟನೆಯ ಅಧ್ಯಕ್ಷ ರಮೇಶ ಪಾಟೀಲ್‌ ಬೇರ್ಗಿ, ಆರ್‌ವೈಎಫ್‌ಐ ರಾಜ್ಯ ಸಂಚಾಲಕ ನಾಗರಾಜ ಪೂಜಾರ್‌, ರಾಘವೇಂದ್ರ ಉಪ್ಪಳ, ಟಿಯುಸಿಐ ಜಿಲ್ಲಾ ಉಪಾಧ್ಯಕ್ಷ ಬಿ.ಎನ್‌.ಯರದಿಹಾಳ, ರಾಮಣ್ಣ ನಾಯಕ, ಕೆ.ವೆಂಕಟೇಶ ಸೇರಿ ಇತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ