ಆ್ಯಪ್ನಗರ

ಶಿಷ್ಯವೇತನ ನೀಡದವರ ವಿರುದ್ಧ ಕ್ರಮಕ್ಕೆ ಆಗ್ರಹ

ತಾಲೂಕಿನ ವಡವಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಳೆದ 4 ವರ್ಷಗಳಿಂದ ಶಿಷ್ಯವೇತನ ಹಣ ಪಾವತಿಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಜೈ ಕನ್ನಡ ರಕ್ಷ ಣಾ ವೇದಿಕೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

Vijaya Karnataka 27 Jun 2018, 5:00 am
ರಾಯಚೂರು : ತಾಲೂಕಿನ ವಡವಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಳೆದ 4 ವರ್ಷಗಳಿಂದ ಶಿಷ್ಯವೇತನ ಹಣ ಪಾವತಿಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಜೈ ಕನ್ನಡ ರಕ್ಷ ಣಾ ವೇದಿಕೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
Vijaya Karnataka Web RAC-RCH26HD03


ಶಾಲೆಯ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಕಳೆದ 4 ವರ್ಷಗಳಿಂದ ಶಿಷ್ಯ ವೇತನ ಹಂಚಿಕೆಯಾಗಿಲ್ಲ. ಮಕ್ಕಳ ಖಾತೆಗೆ ಹಣ ಜಮಾ ಮಾಡುವಲ್ಲಿ ಮುಖ್ಯಗುರು ಹಾಗೂ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು ನಿರ್ಲಕ್ಷ ್ಯವಹಿಸಿದ್ದಾರೆ. ಬಾಯಿದೊಡ್ಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಬರುವ ವಡವಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿಯಿಂದ 8ನೇ ತರಗತಿಯವರೆಗೆ ಪರಿಶಿಷ್ಟ ಜಾತಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದು, ಶಿಷ್ಯವೇತನದಿಂದ ವಂಚಿತರಾಗಿದ್ದಾರೆ.

ಮುಖ್ಯಗುರುಗಳು ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಅನ್ಯಾಯವೆಸಗಿದ್ದು, ಪಾಲಕರು ಸೂಕ್ತ ದಾಖಲೆಗಳನ್ನು ಸಲ್ಲಿಸಿದ್ದರೂ ಗಮನಹರಿಸಿಲ್ಲ. ಸಮಾಜ ಕಲ್ಯಾಣ ಇಲಾಖೆಯಲ್ಲಿ ವಿಚಾರಿಸಿದರೆ ಖಾತೆಗೆ ಜಮಾ ಮಾಡಲಾಗುವುದು ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ.

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಹಣ ಬಿಡುಗಡೆ ಮಾಡಿದ್ದರೂ ಅಧಿಕಾರಿಗಳು ಸರಕಾರದ ಆದೇಶವನ್ನು ಉಲ್ಲಂಘನೆ ಮಾಡಿ ವಿದ್ಯಾರ್ಥಿಗಳಿಗೆ ವಂಚಿಸುತ್ತಿದ್ದಾರೆ. ಪ್ರತಿವರ್ಷ ಖಾತೆಗಳಿಗೆ ಹಣ ಜಮಾ ಮಾಡಬೇಕೆಂದು ಸರಕಾರವೇ ಆದೇಶ ನೀಡಿದೆ. ಆದರೆ, ಪರಿಶಿಷ್ಟ ವಿದ್ಯಾರ್ಥಿಗಳಿಗೆ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ದೂರಿದರು.

ಕೂಡಲೇ ಜಿಲ್ಲಾಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ವಿದ್ಯಾರ್ಥಿಗಳಿಗೆ ಶೀಘ್ರ ಶಿಷ್ಯವೇತನ ನೀಡಬೇಕು. ಅದಲ್ಲದೇ ನಿರ್ಲಕ್ಷ ್ಯವಹಿಸಿದ ಶಾಲಾ ಮುಖ್ಯಗುರು ಹಾಗೂ ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವೇದಿಕೆ ಪದಾಧಿಕಾರಿಗಳಾದ ಎ.ರಮೇಶ ವಡವಟ್ಟಿ, ಈಶ್ವರ, ಕೆ.ವೀರೇಶ, ಸವಾರೆಪ್ಪ, ಉರುಕುಂದಿ, ಪ್ರಸಾದ್‌, ನರಸಿಂಹಲು ವಡವಟ್ಟಿ ಸೇರಿದಂತೆ ವಿದ್ಯಾರ್ಥಿಗಳಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ