ಆ್ಯಪ್ನಗರ

ಮಕ್ಕಳ ಹಕ್ಕುಗಳ ರಕ್ಷಣೆಗೆ ಮನವಿ

ಜಿಲ್ಲೆಯಲ್ಲಿ ಮಕ್ಕಳ ಸಾಗಣೆ ವಿರುದ್ಧ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕೈಗೊಂಡು ಮಕ್ಕಳ ಹಕ್ಕುಗಳ ರಕ್ಷ ಣೆಗೆ ಮುಂದಾಗಬೇಕು ಎಂದು ಜಿಲ್ಲಾ ಮಕ್ಕಳ ಹಕ್ಕುಗಳ ಕ್ಲಬ್‌ ಒಕ್ಕೂಟದ ಪದಾಧಿಕಾರಿಗಳು, ಜಿಲ್ಲಾಧಿಕಾರಿ ಶರತ್‌ ಬಿ. ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

Vijaya Karnataka 11 Jan 2019, 7:06 pm
ರಾಯಚೂರು ; ಜಿಲ್ಲೆಯಲ್ಲಿ ಮಕ್ಕಳ ಸಾಗಣೆ ವಿರುದ್ಧ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕೈಗೊಂಡು ಮಕ್ಕಳ ಹಕ್ಕುಗಳ ರಕ್ಷ ಣೆಗೆ ಮುಂದಾಗಬೇಕು ಎಂದು ಜಿಲ್ಲಾ ಮಕ್ಕಳ ಹಕ್ಕುಗಳ ಕ್ಲಬ್‌ ಒಕ್ಕೂಟದ ಪದಾಧಿಕಾರಿಗಳು, ಜಿಲ್ಲಾಧಿಕಾರಿ ಶರತ್‌ ಬಿ. ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
Vijaya Karnataka Web request to protection of child rights
ಮಕ್ಕಳ ಹಕ್ಕುಗಳ ರಕ್ಷಣೆಗೆ ಮನವಿ


ಜಿಲ್ಲೆಯಲ್ಲಿ ಮಕ್ಕಳನ್ನು ಹೊಲಗದ್ದೆ, ಗ್ಯಾರೇಜ್‌, ಹೋಟೆಲ್‌ ಸೇರಿ ಇತರ ಕ್ಷೇತ್ರಗಳಲ್ಲಿ ದುಡಿಸಿಕೊಳ್ಳುತ್ತಿರುವುದು ಕಂಡು ಬರುತ್ತಿದೆ. ಕೆಲಸಗಳಿಗಾಗಿ ಆಟೊ ಹಾಗೂ ಟಂಟಂಗಳಲ್ಲಿ ಸಾಗಿಸಲಾಗುತ್ತಿದೆ. ಹಲವು ದಾಳಿ ನಡೆದರೂ ಮಕ್ಕಳನ್ನು ದುಡಿಸಿಕೊಳ್ಳುವುದು ನಿಲ್ಲುತ್ತಿಲ್ಲ.

ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ. ಮಕ್ಕಳ ಹಕ್ಕುಗಳ ರಕ್ಷ ಣೆಗೆ ಡಾನ್‌ಬಾಸ್ಕೊ ಸಮಾಜ ಸೇವಾ ಸಂಸ್ಥೆ, ರಾಯಚೂರು ಹಾಗೂ ದೇವದುರ್ಗದಲ್ಲಿ ಜಾಗೃತಿ ಕಾರ್ಯ ನಡೆಸುತ್ತಿದೆ. ಇತರ ಸಂಘ, ಸಂಸ್ಥೆಗಳೂ ಸಹಕಾರ ನೀಡಬೇಕು. ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ಸಂವಿಧಾನದ ಆಶಯದಡಿ 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷ ಣ ಒದಗಿಸವುದು ಸರಕಾರದ ಜವಾಬ್ದಾರಿಯಾಗಿದೆ ಎಂದರು.

ಜಿಲ್ಲಾಡಳಿತ ಶೀಘ್ರ ಮಾಹಿತಿ ಕಲೆಹಾಕಿ ಪರಿಶೀಲನೆ ನಡೆಸಿ ಮಕ್ಕಳನ್ನು ದುಡಿಸಿಕೊಳ್ಳುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು. ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿಮೂರ್ಲನೆಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕ್ಲಬ್‌ನ ಪದಾಧಿಕಾರಿಗಳಾದ ಅಕ್ಷ ತಾ, ಹನುಮಂತರೆಡ್ಡಿ, ಕೃಷ್ಣಮ್ಮ, ಖೈರೂನಿಸಾ, ಶಿವರಾಜ, ಭೀಮಮ್ಮ ಸೇರಿ ಇತರರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ