ಆ್ಯಪ್ನಗರ

ಆಮೆಗತಿಯಲ್ಲಿ ಸಾಗಿದ ರಸ್ತೆ ಕಾಮಗಾರಿ

ಗಂಗಾವತಿ-ಮುದಗಲ್ ಮುಖ್ಯ ರಸ್ತೆಯಿಂದ ಹೆಗ್ಗಾಪೂರ ತಾಂಡಾಕ್ಕೆ ಸಂಪರ್ಕ್ಕ ಕಲ್ಪಿಸುವ ರಸ್ತೆ ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.

ವಿಕ ಸುದ್ದಿಲೋಕ 22 Apr 2016, 5:22 am
ಮುದಗಲ್; ಗಂಗಾವತಿ-ಮುದಗಲ್ ಮುಖ್ಯ ರಸ್ತೆಯಿಂದ ಹೆಗ್ಗಾಪೂರ ತಾಂಡಾಕ್ಕೆ ಸಂಪರ್ಕ್ಕ ಕಲ್ಪಿಸುವ ರಸ್ತೆ ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.
Vijaya Karnataka Web road construction slow
ಆಮೆಗತಿಯಲ್ಲಿ ಸಾಗಿದ ರಸ್ತೆ ಕಾಮಗಾರಿ


ಕರ್ನಾಟಕ ಮೂಲ ಸೌಕರ್ಯ ಅನುದಾನದಡಿಯಲ್ಲಿ ಅಭಿವದ್ಧಿಪಡಿಸಲಾಗುತ್ತಿರುವ ರಸ್ತೆ ಕಾಮಗಾರಿಗೆ 2015-16ರಲ್ಲಿ ಒಂದು ಕೋಟಿ ರೂ.ಗೂ ಅಧಿಕ ಅನುದಾನ ಬಿಡುಗಡೆ ಮಾಡಲಾಗಿದೆ. ಲಿಂಗಸುಗೂರ ಮೂಲದ ಅಮ್ಮಾಪುರ ಎಂಬುವರು ರಸ್ತೆ ಕಾಮಗಾರಿ ಗುತ್ತಿಗೆ ಪಡೆದಿದ್ದಾರೆ. ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಒಂದು ವರ್ಷ ಕಳೆದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ ಎಂದು ನಾಗರಿಕರು ದೂರಿದ್ದಾರೆ.

ರಸ್ತೆ ಬದಿಯಲ್ಲಿ ಸ್ವಚ್ಛತೆ ಮಾಡಲಾಗಿದ್ದು, ರಸ್ತೆಗೆ ಕಂಕರ್ ಮತ್ತು ಮರಂ ಹಾಕಲಾಗಿದೆ. ಮೆಟಲಿಂಗ್ ಮತ್ತು ಡಾಂಬರೀಕರಣ ಕಾಮಗಾರಿ ಬಾಕಿ ಉಳಿದಿದೆ. ರಸ್ತೆ ಅಡ್ಡಾದಿಡ್ಡಿಯಾಗಿ ಮರಂ ಮತ್ತು ಕಂಕರ್‌ಗಳನ್ನು ಹಾಕಿರುವುದರಿಂದ ವಾಹನಗಳಿಗೆ ಮತ್ತು ಪಾದಚಾರಿಗಳಿಗೆ ತೊಂದರೆಯಾಗಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ರಸ್ತೆ ಕಾಮಗಾರಿ ಪರಿಶೀಲಿಸಿ ಸಂಬಂಧಿಸಿದ ಗುತ್ತಿಗೆದಾರರಿಗೆ ನೋಟಿಸ್ ಜಾರಿ ಮಾಡುವ ಮೂಲಕ ನಿಗದಿತ ಅವಧಿಯಲ್ಲಿ ರಸ್ತೆ ಕಾಮಗಾರಿ ಮುಗಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕೆಂದು ತಾಂಡಾ ನಿವಾಸಿಗಳು ಮನವಿ ಮಾಡಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ