ಆ್ಯಪ್ನಗರ

'ಕಠಿಣ ಕ್ರಮ ಕಾನೂನು ಕ್ರಮ ಕೈಗೊಳ್ಳಿ'

ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡಿರುವವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ಜೈಭೀಮ ಸಂಘರ್ಷ ಸಮಿತಿ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ದುರುಗೇಶ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

Vijaya Karnataka 16 Nov 2019, 3:05 pm
ರಾಯಚೂರು : ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡಿರುವವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ಜೈಭೀಮ ಸಂಘರ್ಷ ಸಮಿತಿ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ದುರುಗೇಶ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
Vijaya Karnataka Web take legal action
'ಕಠಿಣ ಕ್ರಮ ಕಾನೂನು ಕ್ರಮ ಕೈಗೊಳ್ಳಿ'


ಶಿಕ್ಷಣ ಇಲಾಖೆ ಕಾರ್ಯದರ್ಶಿ ಹಾಗೂ ಐಎಎಸ್‌ ಅಧಿಕಾರಿ ಉಮಾಶಂಕರ ಇವರು ಸಂವಿಧಾನವನ್ನು ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಬರೆದಿಲ್ಲವೆಂದು ಹೇಳಿರುವುದು ತೀವ್ರ ಬೇಸರ ತರಿಸಿದೆ. ಇವರ ಹೇಳಿಕೆ ಮಕ್ಕಳ ಮನಸ್ಸಿನಲ್ಲಿವಿಷಬೀಜ ಬಿತ್ತಲಿದೆ. ಇಂತಹವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಮಾಜದಲ್ಲಿಗೊಂದಲ ಸೃಷ್ಟಿಸುವ ಹೇಳಿಕೆ ನೀಡಿರುವ ಹಿನ್ನೆಲೆ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು. ಇಲ್ಲವಾದಲ್ಲಿಸಂಘದಿಂದ ಜಿಲ್ಲಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮನವಿ ಪತ್ರದಲ್ಲಿಎಚ್ಚರಿಸಿದರು.

ಪದಾಧಿಕಾರಿಗಳಾದ ವಿನೋದ ಚಾಗಭಾವಿ, ಹನುಮಪ್ಪ ಭೇರಿ, ಸಂಗಮೇಶ, ಈರಣ್ಣ, ಹನುಮಂತ, ಆಂಜನೇಯ, ರಾಮಣ್ಣ ಬುದ್ದಿನ್ನಿ, ಹನುಮಂತು, ಮಹಾಂತೇಶ ಕಾಡ್ಲೂರು, ರಮೇಶ, ಅನಂತರಾಜ್‌ ಸೇರಿ ಇತರರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ