ಆ್ಯಪ್ನಗರ

ಕಾಂಗ್ರೆಸ್‌ ಸರಕಾರದ ಯೋಜನೆಗಳನ್ನು ಮತದಾರರಿಗೆ ತಿಳಿಸಿ: ಖಂಡ್ರೆ

ಹಿಂದಿನ ಕಾಂಗ್ರೆಸ್‌ ಸರಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸವನ್ನು ಪಕ್ಷ ದ ಕಾರ್ಯಕರ್ತರು ನಿಷ್ಠೆಯಿಂದ ಮಾಡಿದರೆ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ಕಷ್ಟವೇನಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಹೇಳಿದರು.

Vijaya Karnataka 28 Aug 2018, 5:00 am
ಮಾನ್ವಿ : ಹಿಂದಿನ ಕಾಂಗ್ರೆಸ್‌ ಸರಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸವನ್ನು ಪಕ್ಷ ದ ಕಾರ್ಯಕರ್ತರು ನಿಷ್ಠೆಯಿಂದ ಮಾಡಿದರೆ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ಕಷ್ಟವೇನಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಹೇಳಿದರು.
Vijaya Karnataka Web RAC-RCH27MNV1


ಇಲ್ಲಿನ ಎಪಿಎಂಸಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು, ''ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಿಂದಿನ ಸರಕಾರದ ಯೋಜನೆಗಳನ್ನು ಮತದಾರರಿಗೆ ಸಮರ್ಪಕವಾಗಿ ಮನವರಿಕೆ ಮಾಡದ್ದರಿಂದ ಪಕ್ಷ ಕ್ಕೆ ಹಿನ್ನಡೆಯಾಯಿತು. ಹಿಂದಿನ ಸರಕಾರ ಜಾರಿಗೊಳಿಸಿದ್ದ ಕೃಷಿ ಭಾಗ್ಯ, ಮಾತೃಪೂರ್ಣ ಯೋಜನೆ, ಶೋಷಿತರಿಗೆ ಕಾನೂನು ಬದ್ಧಹಕ್ಕು, ರೈತರ ಸಾಲ ಮನ್ನಾ ಸೇರಿ ಹಲವು ಜನಪ್ರಿಯ ಕಾರ್ಯಕ್ರಮಗಳನ್ನು ಮತದಾರರಿಗೆ ತಿಳಿಸಬೇಕು. ಪ್ರಸಕ್ತ ಸ್ಥಳೀಯ ಸಂಸ್ಥೆ ಹಾಗೂ ಮುಂಬರುವ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಕಾರ್ಯಕರ್ತರು ಎಚ್ಚರವಹಿಸಬೇಕು'' ಎಂದರು.

ಪುರಸಭೆಗೆ 7.50ಕೋಟಿ ರೂ.: ''ನಾನು ಪೌರಾಡಳಿತ ಸಚಿವನಾಗಿದ್ದಾಗ ಪೌರಕಾರ್ಮಿಕರ ಮಾಸಿಕ ವೇತನವನ್ನು 14 ಸಾವಿರ ರೂ.ಗಳಿಗೆ ಹೆಚ್ಚಿಸಲಾಯಿತು. ನಗರೋತ್ಥಾನ ಯೋಜನೆಯಡಿ 3 ಸಾವಿರ ಕೋಟಿ ರೂ. ಮಂಜೂರು ಮಾಡಲಾಯಿತು. 10 ಸಾವಿರ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಲಾಗಿದೆ. ನಗರೋತ್ಥಾನ 3ನೇ ಯೋಜನೆಯಡಿ ಮಾನ್ವಿ ಪುರಸಭೆಗೆ 7.50 ಕೋಟಿ ರೂ. ನೀಡಲಾಗಿದೆ. ಪಟ್ಟಣದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಇದಕ್ಕೆ ಸಾಕ್ಷಿಯಾಗಿವೆ'' ಎಂದರು.

ಸಂಸದ ಬಿ.ವಿ.ನಾಯಕ ಮಾತನಾಡಿ, ''ಕಳೆದ 20 ವರ್ಷಗಳಿಂದ ಸ್ಥಳೀಯ ಪುರಸಭೆ ಕಾಂಗ್ರೆಸ್‌ ವಶದಲ್ಲಿದೆ. ಈ ಬಾರಿಯೂ ಇದು ಮುಂದುವರಿಯಬೇಕು'' ಎಂದರು. ಮಾಜಿ ಶಾಸಕ ಹಂಪಯ್ಯ ನಾಯಕ ಪ್ರಾಸ್ತಾವಿಕ ಮಾತನಾಡಿದರು.

ರಾಯಚೂರು ಗ್ರಾಮೀಣ ಶಾಸಕ ದದ್ದಲ ಬಸವನಗೌಡ, ಪಕ್ಷ ದ ಜಿಲ್ಲಾ ವೀಕ್ಷ ಕ ಅಲ್ಲಮಪ್ರಭು, ಉಪ ವೀಕ್ಷ ಕ ಸಿ.ವಿ.ಪಾಟೀಲ್‌, ಜಿ.ಪಂ. ಸದಸ್ಯ ಗಂಗಣ್ಣ ಸಾಹುಕಾರ, ಸೈಯದ್‌ ಇಲಿಯಾಸ್‌ ಖಾದ್ರಿ, ಬಿ.ಕೆ.ಅಮರೇಶಪ್ಪ, ಅಬೀದ್‌ ಖಾದ್ರಿ, ಲಕ್ಷ್ಮಿ ನಾರಾಯಣ ಯಾದವ್‌, ಹುಸೇನಪ್ಪ ಜಗ್ಲಿ, ಅಬ್ದುಲ್‌ ಗಫೂರ್‌ಸಾಬ್‌, ಖಾಲಿದ್‌ ಖಾದ್ರಿ ಸೇರಿ ಇತರರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ