ಆ್ಯಪ್ನಗರ

ಪ್ರಪಂಚಕ್ಕೆ ವಿಜ್ಞಾನಿಗಳ ಕೊಡುಗೆ ಅಪಾರ

ವಿಜ್ಞಾನಿಗಳಿಂದ ಆಧುನಿಕ ಜಗತ್ತಿಗೆ ತೆರೆದುಕೊಳ್ಳಲು ಸಾಧ್ಯವಾಗಿದ್ದು, ಪ್ರಪಂಚಕ್ಕೆ ವಿಜ್ಞಾನಿಗಳ ಕೊಡುಗೆ ಮಹತ್ವದ್ದು ಎಂದು ಅಧಿಕಾರಿ ರಾಜೇಂದ್ರ ಜಲ್ದಾರ್‌ ಹೇಳಿದರು.

Vijaya Karnataka 9 Jul 2018, 5:00 am
ರಾಯಚೂರು : ವಿಜ್ಞಾನಿಗಳಿಂದ ಆಧುನಿಕ ಜಗತ್ತಿಗೆ ತೆರೆದುಕೊಳ್ಳಲು ಸಾಧ್ಯವಾಗಿದ್ದು, ಪ್ರಪಂಚಕ್ಕೆ ವಿಜ್ಞಾನಿಗಳ ಕೊಡುಗೆ ಮಹತ್ವದ್ದು ಎಂದು ಅಧಿಕಾರಿ ರಾಜೇಂದ್ರ ಜಲ್ದಾರ್‌ ಹೇಳಿದರು.
Vijaya Karnataka Web the contribution of scientists to the world is immense
ಪ್ರಪಂಚಕ್ಕೆ ವಿಜ್ಞಾನಿಗಳ ಕೊಡುಗೆ ಅಪಾರ


ನಗರದ ಕೆಇಬಿ ಕಾಲೊನಿಯ ಸರಕಾರಿ ಪ್ರೌಢಶಾಲೆಯಲ್ಲಿ ರಾಜ್ಯ ವಿಜ್ಞಾನ ಪರಿಷತ್‌, ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಸಾರ್ವಜನಿಕ ಶಿಕ್ಷ ಣ ಇಲಾಖೆ, ಪದವೀ ಪೂರ್ವ ಶಿಕ್ಷ ಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಪ್ರೌಢಶಾಲಾ ಮತ್ತು ಪಿಯು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ಯುವ ವಿಜ್ಞಾನಿ ಸ್ಪರ್ಧೆ ಉದ್ಘಾಟಿಸಿ ಶನಿವಾರ ಮಾತನಾಡಿದರು.

ವಿಜ್ಞಾನಿಗಳು ಹಲವು ಸಂಶೋಧನೆಗಳ ಮೂಲಕ ಸಮಾಜಕ್ಕೆ ನಿಖರ, ಸ್ಪಷ್ಟ ಹಾಗೂ ಖಚಿತ ಮಾಹಿತಿ ನೀಡುವುದರ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ಪ್ರಯತ್ನಿಸುತ್ತಾರೆ. ಯುವ ಜನಾಂಗ ವಿಜ್ಞಾನಿಗಳಾಗಬೇಕೆಂಬ ತುಡಿತ ಹೆಚ್ಚಾಗಬೇಕಿದೆ. ವಿದ್ಯಾರ್ಥಿಗಳಿಗೆ ಅಂತಹ ಪರಿಸರವನ್ನು ಶಿಕ್ಷ ಕರು ನಿರ್ಮಿಸುವ ಮೂಲಕ ಯುವ ವಿಜ್ಞಾನಿಗಳ ಬೆಳವಣಿಗೆಗೆ ಕಾರಣಕರ್ತರಾಗಬೇಕು ಎಂದು ಹೇಳಿದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತು ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಡಾ.ಕುಂಟೆಪ್ಪ ಗೌರಿಪುರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಕುರಿತು ಆಸಕ್ತಿ ಮತ್ತು ಸಂಶೋಧನಾ ಮನೋಭಾವ ಬೆಳೆಸಬೇಕು. ರಸಪ್ರಶ್ನೆ , ಪ್ರಬಂಧ, ಸಂಶೋಧನೆ ಪ್ರಾತ್ಯಕ್ಷಿಕೆಗಳು ಹೊಸ ಆವಿಷ್ಕಾರಗಳÜ ಕುರಿತು ಸ್ಪರ್ಧೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ ಸದಸ್ಯ ಅರುಣಾ ಕುಮಾರಿ ಮಾತನಾಡಿ, ಜ್ಞಾನವು ವ್ಯವಸ್ಥಿತ ಮತ್ತು ಕ್ರಮಬದ್ಧವಾಗಿ ನಡೆಸುವ ವಿಧಾನವೇ ವಿಜ್ಞಾನ ಎನಿಸಿಕೊಳ್ಳುತ್ತದೆ. ಅವಲೋಕನದ ಮೇಲೆ ವಿಜ್ಞಾನವು ಅವಲಂಬಿತವಾಗಿರುತ್ತದೆ ಎಂದರು.

ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಚಂದ್ರಕಾಂತ ಹವಾಲ್ದಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ ಸದಸ್ಯ ವೆಂಕಟೇಶ ಬೇವಿನಬೆಂಚಿ, ಪ್ರಾಧ್ಯಾಪಕ ನಿಜಾನಂದ ರೆಡ್ಡಿ, ಕಾರ್ಯದರ್ಶಿ ಬಸಪ್ಪ ಗದ್ದಿ, ಛಾಯಾ, ತೇಜಸ್ವಿ ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ