Please enable javascript.ಎರಡು ದಿನದ ರಾಷ್ಟ್ರಮಟ್ಟದ ಕಾರ್ಯಾಗಾರ - Two-day national workshop - Vijay Karnataka

ಎರಡು ದಿನದ ರಾಷ್ಟ್ರಮಟ್ಟದ ಕಾರ್ಯಾಗಾರ

Vijaya Karnataka 27 Sep 2017, 5:00 am
Subscribe

ನವೋದಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮೆಕಾನಿಕಲ್‌ ಎಂಜಿನಿಯರಿಂಗ್‌ ವಿಭಾಗದ ವತಿಯಿಂದ ಅಪ್ಲಿಕೇಶನ್‌ ಆಫ್‌ ಎನ್‌ಡಿಟಿ ಇನ್‌ ಮೆಕಾನಿಕಲ್‌ ಇಂಡಸ್ಟ್ರೀಸ್‌ ಎಂಬ ವಿಷಯದ ಬಗ್ಗೆ ಎರಡು ದಿನದ ರಾಷ್ಟ್ರಮಟ್ಟದ ಕಾರ್ಯಾಗಾರಕ್ಕೆ ಇತ್ತೀಚೆಗೆ ಚಾಲನೆ ನೀಡಲಾಯಿತು.

two day national workshop
ಎರಡು ದಿನದ ರಾಷ್ಟ್ರಮಟ್ಟದ ಕಾರ್ಯಾಗಾರ

ರಾಯಚೂರು: ನವೋದಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮೆಕಾನಿಕಲ್‌ ಎಂಜಿನಿಯರಿಂಗ್‌ ವಿಭಾಗದ ವತಿಯಿಂದ ಅಪ್ಲಿಕೇಶನ್‌ ಆಫ್‌ ಎನ್‌ಡಿಟಿ ಇನ್‌ ಮೆಕಾನಿಕಲ್‌ ಇಂಡಸ್ಟ್ರೀಸ್‌ ಎಂಬ ವಿಷಯದ ಬಗ್ಗೆ ಎರಡು ದಿನದ ರಾಷ್ಟ್ರಮಟ್ಟದ ಕಾರ್ಯಾಗಾರಕ್ಕೆ ಇತ್ತೀಚೆಗೆ ಚಾಲನೆ ನೀಡಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮೆಹರ್‌ ಪ್ರೀತಂ ಕಾರ್ಯಾಗಾರದಲ್ಲಿ ಮಾತನಾಡಿ, ನಾನ್‌ ಡಿಸ್ಟ್ರಕ್ಟಿವ್‌ ಟೆಸ್ಟಿಂಗ್‌ ವಿಧಾನದಲ್ಲಿ ವಸ್ತುಗಳ ಗುಣಮಟ್ಟವನ್ನು ಅಳೆಯಲಾಗುತ್ತದೆ. ಪ್ರಸಕ್ತ ವಿದ್ಯಮಾನದಲ್ಲಿ ಎನ್‌ಡಿಟಿ ಕಾರ್ಯಕ್ಷೇತ್ರ ಮಹತ್ವದ್ದಾಗಿದೆ ಎಂದು ವಿವರಿಸಿದರು.

ಕಾರ್ಯಾಗಾರದಲ್ಲಿ ಕರ್ನಾಟಕ, ತೆಲಂಗಾಣ ಹಾಗೂ ಆಂಧ್ರಪ್ರದೇಶದಿಂದ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ನವೋದಯ ತಾಂತ್ರಿಕ ಮಹಾವಿದ್ಯಾಲಯದ ಮೂರು ಮತ್ತು ನಾಲ್ಕನೇ ವರ್ಷದ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ನವೋದಯ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ವಿ.ಮಲ್ಲಿಕಾರ್ಜುನ, ಉಪಪ್ರಾಂಶುಪಾಲ ಡಾ.ಕೆ.ಸುಮನ್‌ ಮತ್ತು ಮೆಕಾನಿಕಲ್‌ ಇಂಜಿನಿಯರಿಂಗ್‌ ವಿಭಾಗದ ಮುಖ್ಯಸ್ಥ ಡಾ.ರತ್ನಕುಮಾರ ಪಿ., ಮತ್ತು ಅವರ ಸಿಬ್ಬಂದಿ ವರ್ಗ ಹಾಜರಿದ್ದರು.

ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ