ಆ್ಯಪ್ನಗರ

ನೀತಿ ಸಹಿಂತೆ ಉಲ್ಲಂಘಿಸಿದರೆ ಕಠಿಣ ಕ್ರಮ

ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ವಿಧಾನ ಸಭೆ ಚುನಾವಣೆ ಸಾಮಾನ್ಯ ವೀಕ್ಷಕ ವಿಜಯಕುಮಾರ ಸಿಂಗ್‌ ಹೇಳಿದರು. ಇಲ್ಲಿನ ಮಿನಿ ವಿಧಾನ ಸೌಧ ಒಳ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಶುಕ್ರವಾರ ಮಾತನಾಡಿದರು.

Vijaya Karnataka 28 Apr 2018, 5:00 am
ದೇವದುರ್ಗ : ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ವಿಧಾನ ಸಭೆ ಚುನಾವಣೆ ಸಾಮಾನ್ಯ ವೀಕ್ಷಕ ವಿಜಯಕುಮಾರ ಸಿಂಗ್‌ ಹೇಳಿದರು. ಇಲ್ಲಿನ ಮಿನಿ ವಿಧಾನ ಸೌಧ ಒಳ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಶುಕ್ರವಾರ ಮಾತನಾಡಿದರು.
Vijaya Karnataka Web RAC-RCH27DEO01


ವಿಧಾನ ಸಭೆ ಚುನಾವಣೆ ದಿನಾಂಕ ಘೋಷಣೆಯಿಂದ ಇಲ್ಲಿವರೆಗೆ 114 ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. 75,065 ರೂ.ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಂಡು 13 ಪ್ರಕರಣ ದಾಖಲಿಸಲಾಗಿದೆ. 20 ಅಕ್ರಮ ಮರಳು ಸಾಗಣೆಯ ಪ್ರಕರಣ ದಾಖಲಿಸಲಾಗಿದೆ. ನಾಲ್ಕು ಹಾಗೂ ದ್ವಿ ಚಕ್ರ ಸೇರಿ ಒಟ್ಟು 80 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಬಿಜೆಪಿ ಅಭ್ಯರ್ಥಿ ಕೆ.ಶಿವನಗೌಡ ನಾಯಕರ ಮೇಲೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ ಎಂದರು. ಚುನಾವಣೆ ಆಯೋಗ ನಿಗದಿಪಡಿಸಿರುವ ಚುನಾವಣೆ ವೆಚ್ಚಕ್ಕಿಂತ ಹೆಚ್ಚು ವೆಚ್ಚವಾಗಿದ್ದು ಕಂಡು ಬಂದಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿ ಅನರ್ಹರಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮಕ್ಕಳ ಬಳಕೆ: ವಿಧಾನ ಸಭೆ ಚುನಾವಣೆ ಹಿನ್ನೆಲೆಯ ಪ್ರಚಾರ ಕಾರ್ಯದಲ್ಲಿ ನಾನಾ ಪಕ್ಷ ಗಳು ಮಕ್ಕಳನ್ನು ಬಳಕೆ ಮಾಡಿಕೊಳ್ಳುತ್ತಿರುವ ಮಾಹಿತಿ ಇದ್ದು, ಭಾವಚಿತ್ರ ಪಡೆದು ಸಂಬಂಧಿಸಿದ ಪಕ್ಷ ದ ನಾಯಕರಿಗೆ ನೋಟಿಸ್‌ ಜಾರಿ ಮಾಡಲು ಆರ್‌ಒಗೆ ತಿಳಿಸಲಾಗುವುದು. ವಿಧಾನ ಸಭೆ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಪ್ರಾಮಾಣಿಕ ಹಾಗೂ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು. ಈ ಸಂದರ್ಭ ಆರ್‌ಒ ಮಹಮ್ಮದ್‌ ಇರ್ಫಾನ್‌ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ