ಆ್ಯಪ್ನಗರ

ಅಪಘಾತ: ಸವಾರ ಸಾವು

ತಾಲೂಕಿನ ಕೋಡಂಬಳ್ಳಿ ಗ್ರಾಮದ ಬಳಿ ಹಲಗೂರು ರಸ್ತೆಯಲ್ಲಿ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಅಪೆ ಆಟೋ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ...

Vijaya Karnataka 22 Dec 2018, 5:00 am
ಚನ್ನಪಟ್ಟಣ: ತಾಲೂಕಿನ ಕೋಡಂಬಳ್ಳಿ ಗ್ರಾಮದ ಬಳಿ ಹಲಗೂರು ರಸ್ತೆಯಲ್ಲಿ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಅಪೆ ಆಟೋ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
Vijaya Karnataka Web accident the riders death
ಅಪಘಾತ: ಸವಾರ ಸಾವು


ರಸ್ತೆ ಅಪಘಾತದಲ್ಲಿ ಸಾವನ್ನಪ್ಪ್ಪಿರುವ ವಾಹನ ಸವಾರನನ್ನು ಮಂಗಾಡಹಳ್ಳಿ ಗ್ರಾಮದ ಲೇಟ್‌ ಸಿದ್ದಯ್ಯ ಎಂಬುವರ ಮಗ ಜಯರಾಮು(65) ಎಂದು ಗುರುತಿಸಲಾಗಿದೆ. ತಮ್ಮ ಗ್ರಾಮದಿಂದ ಕೋಡಂಬಳ್ಳಿ ಗ್ರಾಮಕ್ಕೆ ತೆರಳುವಾಗ ಅತಿವೇಗವಾಗಿ ಬಂದ ಅಪೆ ಆಟೋ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಘಟನೆಯಿಂದ ಗಂಭೀರ ಸ್ವರೂಪದ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರಕರಣದ ಬಗ್ಗೆ ಅಕ್ಕೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ