ಆ್ಯಪ್ನಗರ

ಪ್ರತಿಪಕ್ಷಗಳು ಹಗಲುಗನಸು ಬಿಡಲಿ, 2023ರ ನಂತರವೂ ನಮ್ಮದೇ ಸರಕಾರ: ಡಾ. ಅಶ್ವತ್ಥನಾರಾಯಣ

ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಮತೀಯ ಚಟುವಟಿಕೆ ನಡೆಯುತ್ತಿಲ್ಲ. ಪಕ್ಷದ ನಾಯಕರು, ಸದಸ್ಯರು ಎಲ್ಲರೂ ಒಟ್ಟಿಗೆ ಸೇರುವುದು ತಪ್ಪಲ್ಲ. ಎಲ್ಲರೂ ಶಿಸ್ತಿನ ಸಿಪಾಯಿಗಳು, ಯಾರೂ ಯಾವುದೇ ಭಿನ್ನಾಭಿಪ್ರಾಯದ ಹೇಳಿಕೆ ಕೊಟ್ಟಿಲ್ಲ

Vijaya Karnataka Web 29 May 2020, 9:04 pm
ರಾಮನಗರ: ಬಿಜೆಪಿಯಲ್ಲಿ ಭಿನ್ನಮತ ಇಲ್ಲ. ಸರಕಾರ ಉರುಳುವ ಬಗ್ಗೆ ಪ್ರತಿಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಲಿ. 2023ವರೆಗೆ ಮಾತ್ರ ಅಲ್ಲ, ಆ ನಂತರವೂ ನಮ್ಮದೇ ಸರಕಾರ ಅಧಿಕಾರಕ್ಕೆ ಬರುತ್ತದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.
Vijaya Karnataka Web ಅಶ್ವತ್ಥನಾರಾಯಣ
ಅಶ್ವತ್ಥನಾರಾಯಣ


ರಾಮನಗರದ ಜಿಲ್ಲಾ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.

ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಮತೀಯ ಚಟುವಟಿಕೆ ನಡೆಯುತ್ತಿಲ್ಲ. ಪಕ್ಷದ ನಾಯಕರು, ಸದಸ್ಯರು ಎಲ್ಲರೂ ಒಟ್ಟಿಗೆ ಸೇರುವುದು ತಪ್ಪಲ್ಲ. ಎಲ್ಲರೂ ಶಿಸ್ತಿನ ಸಿಪಾಯಿಗಳು, ಯಾರೂ ಯಾವುದೇ ಭಿನ್ನಾಭಿಪ್ರಾಯದ ಹೇಳಿಕೆ ಕೊಟ್ಟಿಲ್ಲ ಎಂದರು.

ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಸರಕಾರ ಉರುಳಿಸಿ ಅಧಿಕಾರಕ್ಕೆ ಬರುವ ಬಗ್ಗೆ ಪ್ರತಿಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಲಿ" ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ