ಆ್ಯಪ್ನಗರ

ಸಂಭ್ರಮ, ಸಡಗರದಿಂದ ಮಕರ ಸಂಕ್ರಾಂತಿ ಆಚರಣೆ

ಮಾಗಡಿ ಪಟ್ಟಣದಲ್ಲಿ ಸಾರ್ವಜನಿಕರು ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು...

Vijaya Karnataka 16 Jan 2019, 5:00 am
ಮಾಗಡಿ: ಮಾಗಡಿ ಪಟ್ಟಣದಲ್ಲಿ ಸಾರ್ವಜನಿಕರು ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು.
Vijaya Karnataka Web celebration of the celebration the bustling capricorn
ಸಂಭ್ರಮ, ಸಡಗರದಿಂದ ಮಕರ ಸಂಕ್ರಾಂತಿ ಆಚರಣೆ


ಸಂಕ್ರಾಂತಿ ಹಬ್ಬದ ಪ್ರಯುಕ್ತ ಪಟ್ಟಣದ ಶ್ರೀ ರಂಗನಾಥಸ್ವಾಮಿ, ಸೋಮೇಶ್ವರ ದೇವಾಲಯ, ಕಲ್ಯಾಗೇಟ್‌ ವರಸಿದ್ಧಿ ವಿನಾಯಕಸ್ವಾಮಿ, ಕಾಳಿಕಾಂಬ, ಹೊಸಪೇಟೆಯಲ್ಲಿರುವ ಶನೇಶ್ವರ ಸ್ವಾಮಿ ಸೇರಿದಂತೆ ಅನೇಕ ದೇವಾಲಯಗಳಲ್ಲಿ ವಿಶೇಷ ಅಲಂಕಾರ, ಅಭಿಷೇಕ, ಪೂಜಾ ಕಾರ್ಯಗಳು ನೆರವೇರಿದವು.

ಭಕ್ತರು ಮುಂಜಾನೆಯೇ ಎದ್ದು ಶುಚಿರ್ಭೂತರಾಗಿ ಮನೆಯಲ್ಲಿಯೇ ಎಳ್ಳು, ಬೆಲ್ಲವನ್ನು ವಿತರಿಸಿ ದೇವಾಲಯಗಳಿಗೆ ಬಂದು ದೇವರ ದರ್ಶನ ಪಡೆಯುವುದರ ಜೊತೆಗೆ ದೇವಾಲಯಗಳಿಗೆ ಬರುವ ಇತರೆ ಭಕ್ತರಿಗೂ ಸಹ ಎಳ್ಳು, ಬೆಲ್ಲವನ್ನು ಹಂಚುವ ಮೂಲಕ ಹಬ್ಬವನ್ನು ಆಚರಿಸಿದರು.

ಸಂಕ್ರಾಂತಿ ಹಬ್ಬದ ಬಗ್ಗೆ ಆಚರ್ಕ ಗೋಪಾಲದೀಕ್ಷಿತ್‌ ಮಾತನಾಡಿ, ''ಸನಾತನ ಹಿಂದೂ ಧರ್ಮದ ಬುನಾದಿಯಾಗಿರುವ ವೇದಗಳ ಅಂಗಗಳೆಂದೇ ಪ್ರಸಿದ್ಧವಾಗಿರುವ ಆರು ವೇದಾಂಗಗಳಲ್ಲಿ ಒಂದಾದ ಜೋತಿಷ್ಯವನ್ನು ವೇದಗಳ ಕಣ್ಣೆಂದು ಗುರುತಿಸುತ್ತಾರೆ. ವೇದಗಳ ಕಾಲದಿಂದಲೂ ಶುಭಕಾರ್ಯಗಳಿಗೆ ಮಹೂರ್ತಾದಿ ಕಾಲವನ್ನು ನಿರ್ಣಯಿಸಿ ಗ್ರಹಗಳ ಸ್ಥಿತಿ-ಗತಿ, ರಾಶ-ನಕ್ಷ ತ್ರ ಗ್ರಹಣ, ಆಸ್ತೋದಯಗಳನ್ನು ನಿರ್ಣಯಿಸಿ, ಶುಭಾಶಯ ಫಲಗಳನ್ನು ತೋರುತ್ತಾ, ಹಬ್ಬ-ಹರಿದಿನಗಳನ್ನು ಋುತುಗಳಿಗನುಸಾರವಾಗಿ ಲೆಕ್ಕಾಚಾರ ಹಾಕಿ ಗುರುತಿಸುತ್ತಿದ್ದು, ಈ ಶಾಸ್ತ್ರದಂತೆ, ಸೂರ್ಯನು ನಿರ್ಯಾಣ ಮಕರರಾಶಿಯನ್ನು ಪ್ರವೇಶಿಸಿದಾಗ ಮಕರ ಸಂಕ್ರಾಂತಿಯಾಗುತ್ತದೆ,'' ಎಂದು ವಿವರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ