ಆ್ಯಪ್ನಗರ

ರೆಸಾರ್ಟ್ ವಾಸ್ತವ್ಯ ಸಾಕು, ಕ್ಷೇತ್ರಕ್ಕೆ ವಾಪಸ್ ಕಳುಹಿಸಿ: ಕೈ ಶಾಸಕರ ಒತ್ತಾಯ

ಈ ಸಂಬಂಧ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಳಿ ಹೇಳಿಕೊಂಡಿರುವ ಶಾಸಕರು, ಇಂದೇ ತಮ್ಮ ಕ್ಷೇತ್ರಗಳಿಗೆ ಕಳುಹಿಸಿ ಕೊಡಿ ಎಂದು ದುಂಬಾಲು ಬಿದ್ದಿದ್ದಾರೆ.

Vijaya Karnataka Web 20 Jan 2019, 5:12 pm
ರಾಮನಗರ: ರೆಸಾರ್ಟ್ ವಾಸ್ತವ್ಯದಿಂದ ಕ್ಷೇತ್ರದ ಜನರು ಆಕ್ರೋಶ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ತಮ್ಮ ತಮ್ಮ ಕ್ಷೇತ್ರಗಳಿಗೆ ಮರಳಲು ಕಾಂಗ್ರೆಸ್ ಶಾಸಕರು ನಿರ್ಧರಿಸಿದ್ದಾರೆ.
Vijaya Karnataka Web cong


ಈ ಸಂಬಂಧ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಳಿ ಹೇಳಿಕೊಂಡಿರುವ ಶಾಸಕರು, ಇಂದೇ ತಮ್ಮ ಕ್ಷೇತ್ರಗಳಿಗೆ ಕಳುಹಿಸಿ ಕೊಡಿ ಎಂದು ದುಂಬಾಲು ಬಿದ್ದಿದ್ದಾರೆ.

ಇಂದು ಸಂಜೆ ನಡೆಯುವ ಸಭೆ ಬಳಿಕ ಈ ಸಂಬಂಧ ನಿರ್ಧಾರ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಸಭೆ ಮುಗಿಯುತ್ತಿದ್ದಂತೆ ಕ್ಷೇತ್ರದತ್ತ ವಾಪಸ್ ಆಗುತ್ತೇವೆ ಎಂದು ಬಹುತೇಕ ಶಾಸಕರು ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗುತ್ತಿದೆ.

ಕೈ ಶಾಸಕರ ಮಾರಾಮಾರಿ

ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಶಾಸಕರ ಪೈಕಿ ಬಳ್ಳಾರಿ ಜಿಲ್ಲೆ ಶಾಸಕರಾದ ಆನಂದ್ ಸಿಂಗ್ ಮತ್ತು ಕಂಪ್ಲಿ ಶಾಸಕ ಗಣೇಶ್ ನಡುವೆ ಶನಿವಾರ ರಾತ್ರಿ ಗಲಾಟೆ ಆಗಿದೆ ಎಂಬ ವಿಷಯ ಹೊರಬಿದ್ದಿದೆ.

ಶನಿವಾರ ವಿಧಾನ ಸೌಧದಲ್ಲಿ ನಡೆದ ಮೈನಿಂಗ್ ಸಂಬಂಧಿತ ಸಭೆಯಲ್ಲಿ ಶಾಸಕರಾದ ಆನಂದ್ ಸಿಂಗ್ ಮತ್ತು ಗಣೇಶ್ ನಡುವೆ ಮಾತಿನ ಚಕಮಕಿ ನಡೆದು ಮನಸ್ತಾಪ ಆಗಿತ್ತು ಎಂದು ಹೇಳಲಾಗಿದೆ.

ಘಟನೆಯಲ್ಲಿ ಗಾಯಗೊಂಡಿರುವ ಶಾಸಕ ಆನಂದ್ ಸಿಂಗ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ