ಆ್ಯಪ್ನಗರ

ನೀತಿ ಸಂಹಿತೆ ಪಾಲಿಸಲು ರಾಜಕೀಯ ಮುಖಂಡರಿಗೆ ಡಿಸಿ ಸೂಚನೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು, ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಕಟ್ಟುನಿಟ್ಟಾಗಿ ಮಾದರಿ ನೀತಿ ...

Vijaya Karnataka 13 Mar 2019, 5:00 am
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು, ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಕಟ್ಟುನಿಟ್ಟಾಗಿ ಮಾದರಿ ನೀತಿ ಸಂಹಿತೆಯನ್ನು ಪಾಲಿಸಬೇಕು ಎಂದು ಜಿಲ್ಲಾ ಜಿಲ್ಲಾಧಿಕಾರಿ ಕೆ. ರಾಜೇಂದ್ರ ನಿರ್ದೇಶನ ನೀಡಿದರು.
Vijaya Karnataka Web dcc notice to political leaders to adopt a code of conduct
ನೀತಿ ಸಂಹಿತೆ ಪಾಲಿಸಲು ರಾಜಕೀಯ ಮುಖಂಡರಿಗೆ ಡಿಸಿ ಸೂಚನೆ


ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗಾಗಿ ಲೋಕಸಭಾ ಚುನಾವಣಾ ಹಿನ್ನæ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

''ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಪಾರದರ್ಶಕತೆ ಹಾಗೂ ಸುಸೂತ್ರವಾಗಿ ನಡೆಸಲಾಗುತ್ತಿದೆ. ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ, ಕಾಲಕಾಲಕ್ಕೆ ಚುನಾವಣಾ ಆಯೋಗ ನೀಡುವ ಮಾರ್ಗಸೂಚಿಗಳನ್ನು ಜಿಲ್ಲಾಡಳಿತದ ವತಿಯಿಂದ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತದೆ,'' ಎಂದು ಹೇಳಿದರು.

''ಈ ವೇಳೆ ಜಿಲ್ಲೆಯ ವಿವಿಧ ರಾಜಕೀಯ ಪಕ್ಷ ಸೇರಿದಂತೆ ಅದರ ಮುಖಂಡರು ನಿಯಮಗಳನ್ನು ಪಾಲಿಸಬೇಕು,'' ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುಲ್ಲೈ ಮುಹಿಲನ್‌ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಪಿ. ವಿಜಯ್‌ ಸೇರಿದಂತೆ ಈ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ