ಆ್ಯಪ್ನಗರ

ಸಂತಾನ ಶಕ್ತಿ ಹರಣಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆ ಸಾವು: ಆಕ್ರೋಶ

ಜಿಲ್ಲಾ ಆಸ್ಪತ್ರೆಯಲ್ಲಿ ಸಂತಾನ ಶಕ್ತಿ ಹರಣ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಗೆ ಸರಿಯಾದ ಚಿಕಿತ್ಸೆ ನೀಡದೆ ಮಹಿಳೆಯ ಸಾವಿಗೆ ವೈದ್ಯರು ಕಾರಣರಾಗಿದ್ದಾರೆ ಎಂದು ಆರೋಪಿಸಿರುವ ಸಂಬಂಧಿಕರು ಜಿಲ್ಲಾಸ್ಪತ್ರೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

Vijaya Karnataka 4 Nov 2018, 4:01 pm
ರಾಮನಗರ: ಜಿಲ್ಲಾ ಆಸ್ಪತ್ರೆಯಲ್ಲಿ ಸಂತಾನ ಶಕ್ತಿ ಹರಣ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಗೆ ಸರಿಯಾದ ಚಿಕಿತ್ಸೆ ನೀಡದೆ ಮಹಿಳೆಯ ಸಾವಿಗೆ ವೈದ್ಯರು ಕಾರಣರಾಗಿದ್ದಾರೆ ಎಂದು ಆರೋಪಿಸಿರುವ ಸಂಬಂಧಿಕರು ಜಿಲ್ಲಾಸ್ಪತ್ರೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
Vijaya Karnataka Web death woman sentenced to stenosis energy outrage
ಸಂತಾನ ಶಕ್ತಿ ಹರಣಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆ ಸಾವು: ಆಕ್ರೋಶ


ಚನ್ನಪಟ್ಟಣದ ಹಾರೋಕೊಪ್ಪದ ರಂಜಿತಾ (23) ಮೃತರು, ಇದರಿಂದ ಕುಪಿತರಾಗಿದ್ದ ಸಂಬಂಧಿಕರು ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯರ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಸಂತಾನಹರಣ ಚಿಕಿತ್ಸೆಗೆಂದು ಶುಕ್ರವಾರ ಸಂಜೆ ರಾಮನಗರ ಜಿಲ್ಲಾಸ್ಪತ್ರೆಗೆ ಬಂದಿದ್ದಾರೆ. ರಂಜಿತರನ್ನು ಪರೀಕ್ಷಿಸಿ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ನಂತರ ರಂಜಿತ ಆರೋಗ್ಯದಲ್ಲಿ ಏರುಪೇರಾದ್ದರಿಂದ ನಡೆದದ್ದು ಏನು?: ರಂಜಿತಾ ಅವರನ್ನು ಶುಕ್ರವಾರ ರಾತ್ರಿಯೇ ವಿಕ್ಟೋರಿಯಾ ಆಸ್ಪತ್ರೆಗೆ ತೆಗೆದು ಕೊಂಡು ಹೋಗಲು ಸಂಬಂಧಿಕರಿಗೆ ತಿಳಿಸಿದ್ದಾರೆ. ವೈದ್ಯರ ಸಲಹೆಯಂತೆ ಕುಟುಂಬದವರು ರಂಜಿತರಾರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವಿಕ್ರೋರಿಯಾ ಆಸ್ಪತ್ರೆಯ ವೈದ್ಯರು ರಂಜಿತಾರನ್ನು ಪರೀಕ್ಷಿಸಿ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಶನಿವಾರ ಬೆಳಗ್ಗೆ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ವಿಕ್ಟೋರಿಯಾ ಅಸ್ಪತ್ರೆಯಲ್ಲಿ ನಡೆಸಲಾಯಿತು. ಮೃತದೇಹವನ್ನು ಮತ್ತೆ ರಾಮನಗರ ಜಿಲ್ಲಾಸ್ಪತ್ರೆಗೆ ತೆಗೆದುಕೊಂಡು ಬಂದ ಸಂಬಂಧಿಕರು, ಆಸ್ಪತ್ರೆಯ ಬಾಗಿಲು ಹಾಕಿ, ಶವವನ್ನಿಟ್ಟು ಪ್ರತಿಭಟನೆ ನಡೆಸಿದರು. ಈ ವೇಳೆ ಕುಟುಂಬಸ್ಥರ ದುಃಖ ಮುಗಿಲು ಮುಟ್ಟಿತ್ತು. ಈ ಸಂಬಂಧ ರಂಜಿತಾ ಕುಟುಂಬಸ್ಥರು ರಾಮನಗರ ಜಿಲ್ಲಾಸ್ಪತ್ರೆಯ ವೈದ್ಯರ ವಿರುದ್ಧ ಟೌನ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ