ಆ್ಯಪ್ನಗರ

ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಧರಣಿ

ತಾಲೂಕಿನ ರಸ್ತೆ ಜಕ್ಕಸಂದ್ರ ಬಳಿ ಇರುವ ಜೈನ್‌ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಕಾರ್ಯವೈಖರಿಯ ವಿರುದ್ಧ ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಧರಣಿ ನಡೆಸಿದ ಘಟನೆ ನಡೆಯಿತು.

Vijaya Karnataka 13 Dec 2018, 5:00 am
ಹಾರೋಹಳ್ಳಿ (ಕನಕಪುರ ತಾ.): ತಾಲೂಕಿನ ರಸ್ತೆ ಜಕ್ಕಸಂದ್ರ ಬಳಿ ಇರುವ ಜೈನ್‌ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಕಾರ್ಯವೈಖರಿಯ ವಿರುದ್ಧ ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಧರಣಿ ನಡೆಸಿದ ಘಟನೆ ನಡೆಯಿತು.
Vijaya Karnataka Web engineering student students
ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಧರಣಿ


ದ್ವಿತೀಯ ಮತ್ತು ತೃತೀಯ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ವಿನಾಕಾರಣ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಆಕ್ರೋಶಗೊಂಡ ವಿದ್ಯಾರ್ಥಿಗಳು ಆಡಳಿತ ಮಂಡಳಿಯ ವಿರುದ್ಧ ಘೋಷಣೆಗಳನ್ನು ಕೂಗಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಹಲವಾರು ವಿದ್ಯಾರ್ಥಿಗಳು ತಮ್ಮ ನೋವನ್ನು ತೋಡಿಕೊಂಡು ಯಾವುದೇ ವಿಶ್ವ ವಿದ್ಯಾಲಯದಲ್ಲಿ ಇಲ್ಲದಿರುವ ಕಾನೂನುಗಳನ್ನು ಜೈನ್‌ ಯೂನಿವರ್ಸಿಟಿ ಜಾರಿ ಮಾಡಿ ವಿದ್ಯಾರ್ಥಿಗಳಿಗೆ ಮಾರಕವಾಗುವ ಒತ್ತಡಗಳನ್ನು ಹೇರುತ್ತಿದ್ದಾರೆಂದು ಆರೋಪಿಸಿದರು.

ಬುಧವಾರ ನಡೆಯಬೇಕಿದ್ದ ಸೆಮಿಸ್ಟರ್‌ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿಗಳಿಗೆ ಹಾಲ್‌ಟಿಕೆಟ್‌ಗಳನ್ನು ನೀಡದೆ ಸಲ್ಲದ ವಿಷಯಗಳನ್ನು ಮುಂದಿಟ್ಟುಕೊಂಡು ಹಾಲ್‌ಟಿಕೆಟ್‌ ನೀಡಲು ಗೊಂದಲ ಏರ್ಪಡಿಸಿದ್ದಾರೆ. ವಿದ್ಯಾರ್ಥಿಗಳು ಕೇಳಿದರೆ ಕಳೆದ ಪರೀಕ್ಷೆಗಳಲ್ಲಿ ಕಡಿಮೆ ಅಂಕ ಪಡೆದಿರುವ ಬಗ್ಗೆ ದಂಡವನ್ನು ವಿಧಿಸಿ ಹಾಲ್‌ಟಿಕೆಟ್‌ ಪಡೆಯುವಂತೆ ಒತ್ತಾಯಿಸುತ್ತಾರೆ. ಅಲ್ಪಸ್ವಲ್ಪ ಹಣಕಟ್ಟಿ ಹಾಲ್‌ಟಿಕೆಟ್‌ ಪಡೆಯಲು ಮುಂದಾದರೆ ಐವತ್ತು ಸಾವಿರದಿಂದ ಒಂದು ಲಕ್ಷ ರೂ. ವರೆಗೂ ವಿದ್ಯಾರ್ಥಿಗಳಿಗೆ ದಂಡ ತೆÜರಬೇಕೆಂದು ಹೇಳುತ್ತಾರೆ. ಈ ಬಗ್ಗೆ ದಂಡ ಪಾವತಿಸಲು ವಿದ್ಯಾರ್ಥಿಗಳು ನಿರಾಕರಿಸಿದ ವೇಳೆ ತಾವು ದಾಖಲಾತಿ ಪಡೆಯುವ ವೇಳೆಯೇ ಈ ಬಗ್ಗೆ ಮುಚ್ಚಳಿಕೆ ಬರೆದುಕೊಟ್ಟಿದ್ದೆರೆಂದು ವಿದ್ಯಾರ್ಥಿಗಳನ್ನೇ ಬ್ಲಾಕ್‌ಮೇಲ್‌ ಮಾಡುತ್ತಿದ್ದಾರೆಂದು ಆರೋಪಿಸಿದರು.

ಸಂಸ್ಥೆ ಹಣ ಮಾಡುವ ದುರುದ್ದೇಶಗಳಿಂದ ವಿದ್ಯಾರ್ಥಿಗಳಿಗೆ ತೊಂದರೆ ಮಾಡುತ್ತಿದ್ದಾರೆ. ಇವರ ಅನ್ಯಾಯದ ಕಾನೂನುಗಳನ್ನು ಪ್ರಶ್ನೆಮಾಡುವ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಅವರಿಗೆ ಕಿರುಕುಳ ನೀಡುವ ಸನ್ನಿವೇಶವಿರುವುದರಿಂದ ಯಾವುದೇ ವಿದ್ಯಾರ್ಥಿಗೂ ಆಡಳಿತ ಮಂಡಳಿಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಆಡಳಿತ ಮಂಡಳಿಯ ವಿರುದ್ಧ ಆರೋಪಿಸಿದರು.

ಪೋಷಕರು ತಮ್ಮ ಮಕ್ಕಳನ್ನು ಉನ್ನತ ಕಲಿಕೆಗಾಗಿ ಇಂತಹ ಸಂಸ್ಥೆಗಳಿಗೆ ಸೇರಿಸಿದರೆ ಅವರ ಮೇಲೆ ಸಲ್ಲದ ಕಾನೂನುಗಳನ್ನು ಜಾರಿಮಾಡಿ ಸುಲಿಗೆ ಮಾಡುವಂತಹ ಇಂತಹ ಸಂಸ್ಥೆಯ ವಿರುದ್ಧ ಸರಕಾರ ಕಾನೂನು ಕ್ರಮ ಜರುಗಿಸಬೇಕು. ಕೂಡಲೇ ಉನ್ನತ ಶಿಕ್ಷ ಣ ಸಚಿವರು ಇತ್ತ ಗಮನಹರಿಸಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ತೊಂದರೆಯನ್ನು ತಪ್ಪಿಸಬೇಕು. ಇಲ್ಲದೇ ಹೋದಲ್ಲಿ ನಮ್ಮ ಸಂಸ್ಥೆಯ ವತಿಯಿಂದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ