ಆ್ಯಪ್ನಗರ

ಗಣೇಶನ ವಿಸರ್ಜನೆ ಮೆರವಣಿಗೆ ವೇಳೆ ಘರ್ಷಣೆ; ಓರ್ವನಿಗೆ ಗಾಯ

ಹಾರೋಹಳ್ಳಿ ಪಟ್ಟಣದ ಕೋಟೆ ಬಡಾವಣೆಯಲ್ಲಿಪ್ರತಿಷ್ಠಾಪಿಸಿದ್ದ ಗಣೇಶನ ವಿಸರ್ಜನೆ ಮೆರವಣಿಗೆಯಲ್ಲಿನೃತ್ಯ ಮಾಡುವ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ. ಬುಧವಾರ ರಾತ್ರಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂಭಾಗ ಘಟನೆ ನಡೆದಿದೆ.

Vijaya Karnataka 19 Sep 2019, 3:50 pm
ಹಾರೋಹಳ್ಳಿ (ಕನಕಪುರ ತಾ.): ಹಾರೋಹಳ್ಳಿ ಪಟ್ಟಣದ ಕೋಟೆ ಬಡಾವಣೆಯಲ್ಲಿಪ್ರತಿಷ್ಠಾಪಿಸಿದ್ದ ಗಣೇಶನ ವಿಸರ್ಜನೆ ಮೆರವಣಿಗೆಯಲ್ಲಿನೃತ್ಯ ಮಾಡುವ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ. ಬುಧವಾರ ರಾತ್ರಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂಭಾಗ ಘಟನೆ ನಡೆದಿದೆ.
Vijaya Karnataka Web friction if ganeshas dissolution procession injury to a man
ಗಣೇಶನ ವಿಸರ್ಜನೆ ಮೆರವಣಿಗೆ ವೇಳೆ ಘರ್ಷಣೆ; ಓರ್ವನಿಗೆ ಗಾಯ


ಕೋಟೆ ಬಡಾವಣೆಯ ಶಾಮ್‌ ಎಂಬಾತನಿಗೆ ಮೆರವಣಿಗೆಯಲ್ಲಿದ್ದ ಕೆಲವು ಕಿಡಿಗೇಡಿಗಳು ಕುಡಿದ ಮತ್ತಿನಲ್ಲಿಚಾಕುವಿನಿಂದ ತಿವಿದು ಗಾಯಗೊಳಿಸಿದ್ದಾರೆ. ಕೂಡಲೇ ಆತನನ್ನು ಹಾರೋಹಳ್ಳಿ ಸಂಜೀವಿನಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಟೆಯಲ್ಲಿಪ್ರತಿಷ್ಠಾಪಿಸಿದ್ದ ಗಣೇಶನನ್ನು ಸಂಜೆ ಮೆರವಣಿಗೆಯಲ್ಲಿಕರೆತರುತ್ತಿದ್ದ ವೇಳೆ ಯುವಕರ ಗುಂಪು ತಮಟೆ ತಾಳಕ್ಕೆ ಕುಣಿದು ಕುಪ್ಪಳಿಸುತ್ತಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಘರ್ಷಣೆಗೆ ತಿರುಗಿದೆ. ಮೆರವಣಿಗೆಯಲ್ಲಿಪೊಲೀಸ್‌ ಬಂದೋಬಸ್‌್ತ ಇದ್ದರೂ ಸಹ ಹೊರ ಊರಿನ ಕನಕಪುರದಿಂದ ಬಂದಿದ್ದ ಕೆಲವು ಕಿಡಿಗೇಡಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಶಾಮ್‌ ಪೋಷಕರು ಹಾರೋಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಘಟನೆಗೆ ಕಾರಣದ ಆರೋಪಿಗಳ ಪತ್ತೆಗೆ ತೀವ್ರ ಶೋಧ ನಡೆಸುತ್ತಿದ್ದಾರೆ.

ಆಗ್ರಹ:
ಶಾಂತವಾಗಿ ನಡೆಯಬೇಕಿದ್ದ ಗಣೇಶನ ಉತ್ಸವದಲ್ಲಿಹೊರಗಿನಿಂದ ಬಂದು ಶಾಂತಿ ಕದಡಲು ಯತ್ನಸಿರುವ ಇಂತಹ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಸ್ಥಳೀಯ ನಾಗರೀಕರು ಪೊಲೀಸರನ್ನು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ