ಆ್ಯಪ್ನಗರ

ರಾಮನಗರದ ಕಪಾಲ ಬೆಟ್ಟದಲ್ಲಿ ಏಸುವಿನ ಪ್ರತಿಮೆ ನಿರ್ಮಾಣ ಕಾಮಗಾರಿ ಸ್ಥಗಿತ

ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆಗೆ ಇತ್ತೀಚೆಗೆ ಮಾಜಿ ಸಚಿವ ಡಿಕೆ ಶಿವಕುಮಾರ್ ಶಿಲಾನ್ಯಾಸ ಮಾಡಿದ್ದರು. ಈ ಪ್ರತಿಮೆ ನಿರ್ಮಾಣಕ್ಕೆ ಸಾಕಷ್ಟು ಪರ ವಿರೋಧ ಚರ್ಚೆ ಆರಂಭವಾಗಿದೆ. ಸದ್ಯ, ಪ್ರತಿಮೆಯ ಕಾಮಗಾರಿಯೇ ಸ್ಥಗಿತಗೊಂಡಿದೆ.

Vijaya Karnataka Web 31 Dec 2019, 1:11 pm
ರಾಮನಗರ: ಕನಕಪುರದ ಕಪಾಲ ಬೆಟ್ಟದಲ್ಲಿ ಏಸುವಿನ ಪ್ರತಿಮೆ ನಿರ್ಮಾಣ ವಿಚಾರಕ್ಕೆ ಹಲವು ಪರ ವಿರೋಧಗಳು ಕೇಳಿಬರುತ್ತಿವೆ. ಈ ಮಧ್ಯೆ, ಪ್ರತಿಮೆ ನಿರ್ಮಾಣ ಕಾಮಗಾರಿಯನ್ನೇ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.
Vijaya Karnataka Web jesus christ kapala betta


ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹಾರೋಬೆಲೆಯ ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ. ಕನಕಪುರ ತಹಶೀಲ್ದಾರ್ ಆನಂದಯ್ಯ, ರಾಮನಗರ ಎಸಿ ದಾಕ್ಷಾಯಿಣಿ ಸ್ಥಳಕ್ಕೆ ನೀಡಿದ್ದ ದಿನದಿಂದಲೇ ಕೆಲಸ ಸ್ಥಗಿತಗೊಂಡಿದೆ.

ರಾಮನಗರ ಜಿಲ್ಲೆಯಲ್ಲಿರುವ ಕಪಾಲ ಬೆಟ್ಟಕ್ಕೆ ಡಿಸೆಂಬರ್ 28ರಂದು ಅಧಿಕಾರಿಗಳು ಭೇಟಿ ನೀಡಿದ್ದರು. ಅಂದಿನಿಂದಲೇ ಕೆಲಸ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ. ಬೆಟ್ಟದ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರು ಸಹ ಸದ್ಯ ಸ್ಥಳದಲ್ಲಿ ಯಾರೂ ಇಲ್ಲ.

ಈ ಸುದ್ದಿ ಓದಿ: ಕಪಾಲಿ ಗುಡ್ಡದಲ್ಲಿ ಏಸು ಪ್ರತಿಮೆ, ಎಚ್ಚರಿಕೆಯ ನಡೆಗೆ ಬಿಜೆಪಿ ತೀರ್ಮಾನ

ಇನ್ನು, ಕಪಾಲ ಬೆಟ್ಟ ಸದ್ಯ ಪೊಲೀಸ್ ಭದ್ರತೆಯಲ್ಲಿದ್ದು, ಸಾತನೂರು ಪೊಲೀಸರು ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹಾರೋಬೆಲೆಯಲ್ಲಿರುವ ಈ ಬೆಟ್ಟಕ್ಕೆ ಭದ್ರತೆ ನೀಡಿದ್ದಾರೆ.

ಇದನ್ನೂ ಓದಿ: ಏಸು ಪ್ರತಿಮೆ ವಿವಾದ: ಕನಕಪುರ ತಹಸೀಲ್ದಾರ್ ದಿಢೀರ್ ವರ್ಗಾವಣೆ

ಇನ್ನೊಂದೆಡೆ, ಏಸು ಕ್ರಿಸ್ತ ಪ್ರತಿಮೆ ನಿರ್ಮಾಣ ವಿಚಾರ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಕನಕಪುರ ತಹಶೀಲ್ದಾರ್ ಆನಂದಯ್ಯ ದಿಢೀರ್ ವರ್ಗಾವಣೆಯಾಗಿದ್ದಾರೆ. ಯಳಂದೂರು ತಹಶೀಲ್ದಾರ್ ಆಗಿದ್ದ ವರ್ಷ ಅವರನ್ನು ಕನಕಪುರ ತಹಶೀಲ್ದಾರ್ ಆಗಿ ನೇಮಕ ಮಾಡಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಆರ್.ಉಮಾದೇವಿ ಸೋಮವಾರ ರಾತ್ರಿ ಆದೇಶ ಹೊರಡಿದ್ದಾರೆ‌.

ಏಸು ಪ್ರತಿಮೆ ತಾಣ 'ಕಪಾಲಿ ಬೆಟ್ಟ'ಕ್ಕೆ ಅಧಿಕಾರಿಗಳ ಬೇಟಿ: ವಿವಾದಿತ ಸ್ಥಳ ಪರಿಶೀಲನೆ

ಆದರೂ ಕಪಾಲಿ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಿಸುವ ವಿವಾದಕ್ಕೆ ಸಂಬಂಧಪಟ್ಟಂತೆ ಎಚ್ಚರಿಕೆಯ ಹೆಜ್ಜೆಯಿಡಲು ಬಿಜೆಪಿ ನಿರ್ಧರಿಸಿದೆ. ಈ ವಿಚಾರದಲ್ಲಿ ಅನಗತ್ಯ ಟೀಕೆ-ಟಿಪ್ಪಣಿ ಮಾಡಿ ಕಾಂಗ್ರೆಸ್‌ಗೆ ರಾಜಕೀಯ ಅಸ್ತ್ರ ಕೊಡಬಾರದು ಎಂದು ಸಂಪುಟದ ಸಹೋದ್ಯೋಗಿಗಳಿಗೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಸೂಚಿಸಿದ್ದಾರೆ. ಇತ್ತೀಚೆಗಷ್ಟೇ ಮಾಜಿ ಸಚಿವ ಡಿಕೆ ಶಿವಕುಮಾರ್ ಏಸು ಪ್ರತಿಮೆಗೆ ಶಿಲಾನ್ಯಾಸ ಮಾಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ