ಆ್ಯಪ್ನಗರ

ಡಿ.ಕೆ.ಸುರೇಶ್ 3 ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ : ತಮ್ಮನ ಬಗ್ಗೆ ಅಣ್ಣ ನುಡಿದ ಭವಿಷ್ಯ !

Bangalore Rural DK Suresh will win with huge margin : ಸಹೋದರ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಮೂರು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ.

Authored byಬಾಲರಾಜ್ ತಂತ್ರಿ | Vijaya Karnataka Web 21 Apr 2024, 10:22 pm

ಹೈಲೈಟ್ಸ್‌:

  • ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ.ಸುರೇಶ್ ಭಾರೀ ಅಂತರದಿಂದ ಗೆಲುವು ಸಾಧಿಸಲಿದ್ದಾರೆ
  • ಸತತವಾಗಿ ಸಹೋದರನ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿರುವ ಡಿಕೆಶಿ
  • ದೇವೇಗೌಡ್ರು, ಕುಮಾರಸ್ವಾಮಿ ಏನು ಮಾಡಿದ್ದಾರೆಂದು ಪ್ರಶ್ನಿಸಿದ ಡಿಕೆಶಿ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web dk brothers (1)
DK Suresh will win with huge margin, confident brother DK Shivakumar
ರಾಮನಗರ : ಈ ಕ್ಷೇತ್ರದಲ್ಲಿ ಕುಮಾರಸ್ವಾಮಿ, ದೇವೇಗೌಡರು ಸಂಸದರಾಗಿದ್ದರು. ಸುರೇಶ್ ಪ್ರತಿ ಪಂಚಾಯ್ತಿಗೆ ಭೇಟಿ ನೀಡಿ ಪಂಚಾಯ್ತಿ ಸದಸ್ಯನಂತೆ ಕೆಲಸ ಮಾಡಿಕೊಂಡು ಬಂದಿದ್ದಾರೆ. ಆದರೆ ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ರಾಮನಗರ, ಮಾಗಡಿ ಭಾಗದ ಬಡವರಿಗಾಗಿ ಏನಾದರೂ ಮಾಡಿದ್ದಾರಾ? ಬಡವರಿಗೆ ನಿವೇಶನ ಹಂಚಿದ್ದಾರಾ? ಕುಡಿಯುವ ನೀರನ್ನು ಕೊಟ್ಟಿದ್ದಾರಾ? ಡಿ.ಕೆ.ಸುರೇಶ್ ಕನಿಷ್ಠ ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ಮಾಗಡಿಯಲ್ಲಿ ಡಿ.ಕೆ. ಸುರೇಶ್ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಸಂಸದರಾಗಿದ್ದಾರೆ, 2 ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಅವರ ತಂದೆ ಒಮ್ಮೆ ಮುಖ್ಯಮಂತ್ರಿ, ಒಮ್ಮೆ ಪ್ರಧಾನಿಯಾಗಿದ್ದಾರೆ. ಈ ಭಾಗದ ಜನ ದೇವೇಗೌಡರು, ಅವರ ಮಗ ಹಾಗೂ ಸೊಸೆಗೆ ಅಧಿಕಾರ ಕೊಟ್ಟಿದ್ದಾರೆ.
’ಎಚ್‌ಡಿಕೆ ನೀಚ ರಾಜಕಾರಣಿ, ಸುಳ್ಳಿನ ಡಾಕ್ಟರೇಟ್ ಕೊಡಬೇಕು’ : ಮುಗಿಯದ ಡಿಕೆಶಿ Vs ಗೌಡ್ರ ಕುಟುಂಬ ಗದ್ದಲ

ಈಗ ಅಳಿಯನನ್ನು ಕರೆದುಕೊಂಡು ಬಂದಿದ್ದಾರೆ. ಜೆಡಿಎಸ್ ಪಕ್ಷ ಇದ್ದರೂ ಗೌಡರ ಅಳಿಯನನ್ನು ದಳದಿಂದ ಯಾಕೆ ನಿಲ್ಲಿಸಲಿಲ್ಲ. ಅವರ ಪಕ್ಷ ಹಾಗೂ ಚಿಹ್ನೆಗೆ ಶಕ್ತಿ ಇಲ್ಲವೇ? ಇನ್ನು ಕುಮಾರಸ್ವಾಮಿ ಇಲ್ಲಿನ ಜನರನ್ನು ಬಿಟ್ಟು ಮಂಡ್ಯದಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಡಿಕೆಶಿ ಲೇವಡಿ ಮಾಡಿದ್ದಾರೆ.


" ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಜಾತ್ಯಾತೀತ ತತ್ವದ ಮೇಲೆ ನಾವು ಜೆಡಿಎಸ್ ಪಕ್ಷಕ್ಕೆ ಬೇಷರತ್ ಬೆಂಬಲ ನೀಡಿ ಎಲ್ಲರ ವಿರೋಧದ ನಡುವೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದೆವು. ಆದರೆ ಅದನ್ನು ಉಳಿಸಿಕೊಳ್ಳಲು ಕುಮಾರಸ್ವಾಮಿ ಅವರಿಂದ ಸಾಧ್ಯವಾಗಲಿಲ್ಲ. ಕುಮಾರಸ್ವಾಮಿ ಅವರು ತಮ್ಮ ಬೆನ್ನಿಗೆ ಚೂರಿ ಹಾಕಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಿಜೆಪಿ ನಾಯಕರನ್ನು ಕರೆದುಕೊಂಡು ನಮ್ಮ ಆದಿ ಚುಂಚನಗಿರಿ ಮಠಕ್ಕೆ ಕರೆದುಕೊಂಡು ಹೋಗಿದ್ದಾರೆ ".


ಎಲ್ಲರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದರು
" ನಾನು ವಿಷ ಹಾಕಿದೆ ಎಂದು ಹೇಳುತ್ತಿದ್ದಾರೆ. ನಾನು ಯಾವ ರೀತಿ ವಿಷ ಹಾಕಿದೆ ಎಂದು ಅವರು ಹೇಳಬೇಕಲ್ಲವೇ? ಸುರೇಶ್ ಅವರು ಸಂಸದರಾಗಿದ್ದಾಗ ನಾನು ಇಂಧನ ಸಚಿವರಾಗಿದ್ದಾಗ ಇಲ್ಲಿ ಶಾಸಕರಿಲ್ಲದಿದ್ದರೂ ಪ್ರತಿ ಇಬ್ಬರು ರೈತರನ್ನು ಸೇರಿಸಿ ಒಂದೊಂದು ಟ್ರಾನ್ಸ್ ಫಾರಂ ಅನ್ನು ಉಚಿತವಾಗಿ ಹಾಕಿಸಬೇಕು ಎಂದು ಕೇಳಿದರು. ನಾನು ಇಲ್ಲಿನ ರೈತರಿಗೆ ಈ ಸೌಲಭ್ಯ ಕಲ್ಪಿಸಿದ್ದೇವೆ. ಅದರಿಂದ ನಿಮಗೆ ಪ್ರಯೋಜನ ಆಗಿದೆಯಲ್ಲವೇ? ನೀವು ನಮಗೆ ಅಧಿಕಾರ ನೀಡುವುದೇ ನಿಮಗೆ ಅನುಕೂಲವಾಗಲಿ, ಒಳ್ಳೆಯದಾಗಲಿ " ಎಂದು ಡಿ.ಕೆ.ಶಿವಕುಮಾರ್ ಹೇಳಿದರು.


ಇಲ್ಲಿ ಹಾಲು ಉತ್ಪಾದಕರಿದ್ದೀರಿ. ನಮ್ಮ ಸರ್ಕಾರ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಹೆಚ್ಚಳ ಮಾಡಲಿಲ್ಲವೇ. ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದರು. ನಿಮ್ಮಲ್ಲಿ ಯಾರಿಗಾದರೂ ಆ ಹಣ ಬಂತೇ? ವರ್ಷಕ್ಕೆ 22 ಕೋಟಿ ಉದ್ಯೋಗ ನೀಡುತ್ತೇವೆ ಎಂದರು. ನಿಮಗೆ ಉದ್ಯೋಗ ಕೊಟ್ಟರಾ?


ರೈತರ ಆದಾಯ ಡಬಲ್ ಮಾಡುತ್ತೇವೆ ಎಂದರು
ರೈತರ ಆದಾಯ ಡಬಲ್ ಮಾಡುತ್ತೇವೆ ಎಂದರು. ನಿಮ್ಮ ಆದಾಯ ಡಬಲ್ ಆಯಿತಾ? ನಮ್ಮ ಪಕ್ಷ ಕಳೆದ ಚುನಾವಣೆಗೂ ಮುನ್ನ ಐದು ಗ್ಯಾರಂಟಿ ಯೋಜನೆ ಪ್ರಕಟಿಸಿತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ ಕೊಟ್ಟ ಮಾತಿನಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಅನುಮೋದನೆ ಕೊಟ್ಟೆವು ಎಂದು ಸರ್ಕಾರದ ಕೆಲಸವನ್ನು ಮತ್ತೆ ಜನರ ಮುಂದೆ ಇಟ್ಟರು.


ಕುಮಾರಸ್ವಾಮಿ ಅವರು ಇಂತಹ ಯಾವುದಾದರೂ ಒಂದು ಕೆಲಸ ಮಾಡಿದ್ದಾರಾ? ಸುರೇಶ್ ಅವರು ಸತ್ತೇಗಾಲದಿಂದ ಮಾಗಡಿಗೆ ನೀರು ತಂದರೆ ಕುಮಾರಸ್ವಾಮಿ ನಾನು ತಂದಿದ್ದೇನೆ ಎಂದು ಹೇಳುತ್ತಿದ್ದಾರೆ. ಇನ್ನು ಈ ಭಾಗದ ಹಳ್ಳಿಯ ಮಕ್ಕಳು ಶಿಕ್ಷಣಕ್ಕಾಗಿ ನಗರ ಪ್ರದೇಶಕ್ಕೆ ಹೋಗುವುದನ್ನು ತಪ್ಪಿಸಲು ಪಂಚಾಯ್ತಿ ಮಟ್ಟದಲ್ಲಿ ಉತ್ತಮ ಗುಣಮಟ್ಟದ ಶಾಲೆಗಳನ್ನು ನಿರ್ಮಾಣ ಮಾಡುತ್ತಿದ್ದೇವೆ.


3 ಲಕ್ಷ ಮತಗಳ ಅಂತರದಲ್ಲಿ ಡಿ.ಕೆ. ಸುರೇಶ್ ಅವರನ್ನು ಜನ ಗೆಲ್ಲಿಸಲಿದ್ದಾರೆ
ನಮ್ಮ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಶಾಲೆಗೆ 10 ಕೋಟಿ ರೂ ವೆಚ್ಚದಲ್ಲಿ 3 ಅಂತಾರಾಷ್ಟ್ರೀಯ ಮಟ್ಟದ ಶಾಲೆಗಳನ್ನು ನಿರ್ಮಿಸಲು ಮುಂದಾಗಿದ್ದೇವೆ. ಇಡೀ ದೇಶದಲ್ಲಿ ಇಂತಹ ಯೋಜನೆ ಇಲ್ಲ. ಇಡೀ ರಾಜ್ಯದಲ್ಲಿ ಇಂತಹ 2 ಸಾವಿರ ಶಾಲೆ ಮಾಡಲು ಮುಂದಾಗಿದ್ದೇವೆ. ಹೀಗೆ ನಿಮ್ಮ ಬದುಕಿನಲ್ಲಿ ಬದಲಾವಣೆ ಮಾಡಲು ನಾವು ಮುಂದಾಗಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಅವರು ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿದರು.


" ಕೋವಿಡ್ ಸಂದರ್ಭದಲ್ಲಿ ಸುರೇಶ್ ಅರು ಮನೆ ಮನೆಗೆ ಫುಡ್ ಕಿಟ್, ಔಷಧಿ, ತರಕಾರಿ ಹಂಚಿದರು. ಕೊನೆಗೆ ಅನಾಥ ಶವಗಳಿಗೆ ಅಂತ್ಯಸಂಸ್ಕಾರ ಮಾಡಿದರು. ಕುಮಾರಸ್ವಾಮಿ ಎಂದಾದರೂ ಮನೆಯಿಂದ ಆಚೆ ಬಂದಿದ್ದಾರಾ? ಮತ್ತೆ ಯಾವ ಕಾರಣಕ್ಕೆ ಅವರು ಬಂದು ಮತ ಕೇಳುತ್ತಿದ್ದಾರೆ? ಜನಪ್ರತಿನಿಧಿಯಾದವರು ಜನರ ಕಷ್ಟಕ್ಕೆ ಆಗದಿದ್ದರೆ, ಆತ ಮತ್ತೆ ಯಾವ ಕಾರಣಕ್ಕೆ ಜನಪ್ರತಿನಿಧಿಯಾಗಬೇಕು? ಈ ಭಾಗದ ಜನರು 3 ಲಕ್ಷ ಮತಗಳ ಅಂತರದಲ್ಲಿ ಡಿ.ಕೆ. ಸುರೇಶ್ ಅವರನ್ನು ಗೆಲ್ಲಿಸಲಿದ್ದಾರೆ " ಎನ್ನುವ ಖಚಿತ ವಿಶ್ವಾಸದ ಮಾತನ್ನು ಡಿ.ಕೆ.ಶಿವಕುಮಾರ್ ಆಡಿದ್ದಾರೆ.
ಲೇಖಕರ ಬಗ್ಗೆ
ಬಾಲರಾಜ್ ತಂತ್ರಿ
ಬಾಲರಾಜ್ ತಂತ್ರಿ ಅವರು ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು ಹನ್ನೆರಡಕ್ಕೂ ಹೆಚ್ಚು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ರಾಜ್ಯ, ರಾಷ್ಟ್ರೀಯ ಸುದ್ದಿಗಳು, ಮನೋರಂಜನೆ ಇವರ ಪ್ರಮುಖ ಆಸಕ್ತಿಯ ವಿಭಾಗಗಳು. ರಾಜಕೀಯ ಮತ್ತು ಮನೋರಂಜನಾ ಕ್ಷೇತ್ರದ ಹತ್ತು ಹಲವರ ವಿಡಿಯೋ ಸಂದರ್ಶನ ಮಾಡಿದ ಅನುಭವವೂ ಇವರಿಗಿದೆ. ರಾಜ್ಯ ಮತ್ತು ರಾಷ್ಟ್ರ ರಾಜಕೀಯದ ಆಗುಹೋಗುಗಳ ಬಗ್ಗೆ ವಿಶ್ಲೇಷಣೆ/ಬೈಲೈನ್ ಸುದ್ದಿಯನ್ನು ಬರೆಯುವುದರಲ್ಲಿ ಪರಿಣತರು. ಕನ್ನಡ ಸಿನಿಮಾಗಳ ಅಭಿಮಾನಿಯಾಗಿರುವ ಇವರ ಪ್ರಮುಖ ಹವ್ಯಾಸ ಪ್ರವಾಸ, ಕ್ರೀಡೆ, ಹಳೆಯ ಸಿನಿಮಾ ಹಾಡುಗಳನ್ನು ಕೇಳುವುದು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ