ಆ್ಯಪ್ನಗರ

ಮೇಕೆದಾಟು : ಕೇಂದ್ರದ ಮೇಲೆ ಒತ್ತಡ ಹೇರಲು ದೆಹಲಿಗೆ ನಿಯೋಗ, ರಮೇಶ್ ಜಾರಕಿಹೊಳಿ‌

ಮೇಕೆದಾಟು ಯೋಜನೆ ವಿಚಾರದಲ್ಲಿ ಕೇಂದ್ರದ ಮೇಲೆ ಒತ್ತಡ ಹೇರಲು ದೆಹಲಿಗೆ ನಿಯೋಗದ ಜೊತೆಗೆ ಹೋಗುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದಿಷ್ಟು.

Vijaya Karnataka Web 14 Sep 2020, 5:04 pm
ರಾಮನಗರ: ಜಿಲ್ಲೆಯ ಮುಗ್ಗೂರು ಮತ್ತು ಹನೂರು ಅರಣ್ಯ ವಲಯದಲ್ಲಿರುವ ಒಂಟಿಗುಂಡುವಿನ ಬಳಿ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣ ಮಾಡಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗಿದ್ದು, ಕೇಂದ್ರ ಸರ್ಕಾರ ಅನುಮತಿ ನೀಡಿದ ಕೂಡಲೇ ಯೋಜನೆ‌ ಪ್ರಾರಂಭಿಸಲಾಗುವುದು‌ ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ಅವರು ತಿಳಿಸಿದರು.
Vijaya Karnataka Web ramesh jarakiholi


ಮೇಕೆದಾಟು ಯೋಜನಾ ಪ್ರದೇಶಕ್ಕೆ‌ ಭೇಟಿ‌ ನೀಡಿ, ಸ್ಥಳ ಪರಿಶೀಲನೆ ಮಾಡಿದ ಸಚಿವರು, ಅಣೆಕಟ್ಟು ನಿರ್ಮಾಣ ಸಂಬಂಧ ಕೇಂದ್ರದ ಜಲಶಕ್ತಿ ಸಚಿವಾಲಯ ಈಗಾಗಲೇ ಅನುಮತಿ ನೀಡಿದ್ದು, ಪರಿಸರ ಮತ್ತು ಅರಣ್ಯ ಇಲಾಖೆಗಳ ಅನುಮತಿಗಾಗಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದರು.

ಮೇಕೆದಾಟು ಅಣೆಕಟ್ಟನ್ನು 9000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ವಾಸ್ತವ ಅಂಶಗಳ ಮನವರಿಕೆಗಾಗಿ ಮತ್ತು ತ್ವರಿತ ಅನುಮೋದನೆಗೆ ಕೇಂದ್ರ ಸರ್ಕಾರದ ಮೇಲೆ‌ ಒತ್ತಡ ಹೇರುವ ದೃಷ್ಟಿಯಿಂದ ದೆಹಲಿಗೆ ತೆರಳುವುದಾಗಿ ಸಚಿವರು ಹೇಳಿದರು.

ಸಚಿವ ರಮೇಶ್ ಜಾರಕಿಹೊಳಿ‌ ಅವರು ಪರಿವೀಕ್ಷಣೆ ನಡೆಸಿ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಎಂ ಎಲ್ ಸಿ ಸಿಪಿ ಯೋಗೇಶ್ವರ್, ಕಾವೇರಿ ನೀರಾವರಿ ನಿಗಮದ ಎಂಡಿ ಜೈಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ