ಆ್ಯಪ್ನಗರ

ಸಿಇಟಿ ಪರೀಕ್ಷೆಗೆ ಜಿಲ್ಲೆಯಲ್ಲಿ ಸಕಲ ಸಿದ್ದತೆ

ಜಿಲ್ಲೆಯ 5 ಕೇಂದ್ರಗಳಲ್ಲಿ ಏ. 29 ಹಾಗೂ 30ರಂದು ನಡೆಯಲಿರುವ ಸಿ.ಇ.ಟಿ ಪರೀಕ್ಷೆಗೆ ಸಕಲ ಸಿದ್ದತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ. ಕೆ. ರಾಜೇಂದ್ರ ಅವರು ತಿಳಿಸಿದ್ದಾರೆ.

Vijaya Karnataka 25 Apr 2019, 5:09 pm
ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮಹತ್ವದ ಸಭೆ | ಪರೀಕ್ಷೆ ಬರೆಯಲಿದ್ದಾರೆ ಜಿಲ್ಲೆಯ 1892 ವಿದ್ಯಾರ್ಥಿಗಳು
Vijaya Karnataka Web preparation of cet examination begins in district
ಸಿಇಟಿ ಪರೀಕ್ಷೆಗೆ ಜಿಲ್ಲೆಯಲ್ಲಿ ಸಕಲ ಸಿದ್ದತೆ


ರಾಮನಗರ: ಜಿಲ್ಲೆಯ 5 ಕೇಂದ್ರಗಳಲ್ಲಿ ಏ. 29 ಹಾಗೂ 30ರಂದು ನಡೆಯಲಿರುವ ಸಿ.ಇ.ಟಿ ಪರೀಕ್ಷೆಗೆ ಸಕಲ ಸಿದ್ದತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ. ಕೆ. ರಾಜೇಂದ್ರ ಅವರು ತಿಳಿಸಿದ್ದಾರೆ.

ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಸಿ.ಇ.ಟಿ ಪರೀಕ್ಷೆ ನಡೆಯುತ್ತಿದ್ದು, 1892 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸಾಮಾನ್ಯ ಪ್ರವೇಶ ಪರೀಕ್ಷೆಗಳು (ಸಿ.ಇ.ಟಿ) ನಡೆಯುವ ಕೇಂದ್ರಗಳಲ್ಲಿ ಯಾವುದೇ ಅಕ್ರಮ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ನಿಷೇಧಾಜ್ಞೆ ಜಾರಿ:

ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಿ.ಇ.ಟಿ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ ಸುತ್ತಳತೆಯಲ್ಲಿ 144ನೇ ಕಲಂ ಜಾರಿಗೊಳಿಸಲು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್‌ ಅಂಗಡಿಗಳನ್ನು ಮುಚ್ಚಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರಿಗೆ ಆದೇಶಿಸಿದರು.

ಬಿಗಿ ಭದ್ರತೆ ಕಲ್ಪಿಸಲು ಆದೇಶ:

ಪ್ರತಿ ಪರೀಕ್ಷಾ ಕೇಂದ್ರಕ್ಕೂ ಇಬ್ಬರು ಆರಕ್ಷ ಕ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಮತ್ತು ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷ ಕರು ಸಮೀಪದ ಪೋಲಿಸ್‌ ವೃತ್ತ ನಿರೀಕ್ಷ ಕರರ ಸಂಪರ್ಕದಲ್ಲಿದ್ದು, ಯಾವುದೇ ಪರೀಕ್ಷಾ ಅವ್ಯವಹಾರ ನಡೆಯದಂತೆ ನಿಗಾವಹಿಸುವಂತೆ ತಿಳಿಸಿದರು.

ಮೂಲಸೌಕರ‍್ಯಕ್ಕೆ ಒತ್ತು:

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯು ನೀರು, ಶೌಚಾಲಯ ಮುಂತಾದ ಅಗತ್ಯ ವ್ಯವಸ್ಥೆ ಹಾಗೂ ತುರ್ತು ಸಂದರ್ಭದಲ್ಲಿ ಪ್ರಾಥಮಿಕ ಚಿಕಿತ್ಸೆ ಹಾಗೂ ಆರೋಗ್ಯ ಸೇವೆಗಳು ವಿದ್ಯಾರ್ಥಿಗಳಿಗೆ ದೊರಕುವಂತೆ ಮಾಡಲು ಪ್ರತಿ ಆರೋಗ್ಯ ಕೇಂದ್ರಗಳಿಗೆ ಆರೋಗ್ಯ ಸಹಾಯಕಿಯರನ್ನು ನಿಯೋಜಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಅಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ:

ಪ್ರತಿ ಪರೀಕ್ಷಾ ಕೇಂದ್ರಕ್ಕೂ ಸಹಾಯಕ ಆಯುಕ್ತರ ಗ್ರೇಡ್‌ ಅಧಿಕಾರಿಯನ್ನು ವೀಕ್ಷ ಕರನ್ನಾಗಿ ನೇಮಿಸಿ ಮತ್ತು ಪ್ರತಿ ತಾಲ್ಲೂಕಿಗೂ ಮೂರು ಬಿ-ಗ್ರೇಡ್‌ ದರ್ಜೆಯ ಅಧಿಕಾರಿಗಳನ್ನು ಪರೀಕ್ಷಾ ಕಾರ್ಯದ ನಿಮಿತ್ತ ನಿಯೋಜಿಸುವಂತೆ ಹಾಗೂ ಪ್ರಶ್ನೆಪತ್ರಿಕೆಗಳನ್ನು ಮಾರ್ಗಧಿಕಾರಿಗಳಿಂದ ಪಡೆದು ಖಜಾನೆಯಲ್ಲಿ ಠೇವಣಿ ಇರಿಸುವುದು, ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಜವಬ್ದಾರಿಯನ್ನು ನಿಭಾಯಿಸುಂತೆ ಅಧಿಕಾರಿಗಳಿಗೆ ಹೇಳಿದರು. ಓ.ಎಂ.ಆರ್‌ ಶೀಟ್‌ಗಳನ್ನು ಮಾರ್ಗಾಧಿಕಾರಿಗಳಿಗೆ ನೀಡುವ ಜವಬ್ದಾರಿ ಜಿಲ್ಲಾಧಿಕಾರಿಗಳ ಕಚೇರಿಗೆ ಸೇರಿದ್ದಾಗಿದ್ದು ಅದಕ್ಕೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಪ್ರಶ್ನೆ ಪತ್ರಿಕೆಗೆ ಬಿಗಿ ಭದ್ರತೆ:

ಪ್ರಶ್ನೆ ಪತ್ರಿಕೆಗಳನ್ನು ಮತ್ತು ಉತ್ತರ ಪತ್ರಿಕೆಗಳನ್ನು ಖಜಾನೆಯಿಂದ ಪರೀಕ್ಷಾ ಕೇಂದ್ರಕ್ಕೆ, ಪರೀಕ್ಷಾ ಕೇಂದ್ರದಿಂದ ಖಜಾನೆಗೆ ಕೊಂಡೊಯ್ಯುವಾಗ ಪೋಲಿಸ್‌ ಬಂದೋಬಸ್ತ್‌ ವ್ಯವಸ್ಥೆಯನ್ನು ಮಾಡುವಂತೆ ಜಿಲ್ಲಾ ಪೊಲೀಸ್‌ ಇಲಾಖೆಗೆ ನಿರ್ದೇಶನ ನೀಡಿದರು. ಕರ್ನಾಟಕ ರಾಜ್ಯ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಕೈಪಿಡಿಯಂತೆ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ಜರುಗಿಸಲು ಕ್ರಮವಹಿಸುವಂತೆ ಆದೇಶಿಸಿದರು.

ಹಿರಿಯ ಅಧಿಕಾರಿಗಳ ಉಪಸ್ಥಿತಿ:

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಪಿ ವಿಜಯ್‌, ಪದವಿ ಪೂರ್ವ ಶಿಕ್ಷ ಣ ಇಲಾಖೆಯ ಉಪ ನಿರ್ದೇಶರು, ಜಿಲ್ಲಾ ಖಜಾನಾಧಿಕಾರಿ, ಸಾರ್ವಜನಿಕ ಶಿಕ್ಷ ಣ ಇಲಾಖೆಯ ಕ್ಷೇತ್ರ ಶಿಕ್ಷ ಣಾಧಿಕಾರಿಗಳು, ರಾಮನಗರ ಹಾಗೂ ಚನ್ನಪಟ್ಟಣ ತಹಶೀಲ್ದಾರರು, ಪರೀಕ್ಷಾ ಕೇಂದ್ರದ ಉಪಮುಖ್ಯ ಅಧೀಕ್ಷ ಕರು, ಪ್ರಶ್ನೆ ಪತ್ರಿಕಾ ಪಾಲಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ