ಆ್ಯಪ್ನಗರ

ರೆಸಾರ್ಟ್ ರಾಜಕಾರಣ: ಬಿಜೆಪಿ ಮಾಡಿದ್ದನ್ನೇ ನಾವು ಮಾಡುತ್ತಿದ್ದೇವೆ ಎಂದ ಡಿಕೆಸಿ

ಬಿಜೆಪಿ ನಾಯಕರು ಅಧಿಕಾರದಲ್ಲಿದ್ದಾಗ ರೆಸಾರ್ಟ್ ರಾಜಕೀಯ ಮಡಿದ್ದರು. ಅದನ್ನೇ ಈಗ ನಾವು ಮಾಡುತ್ತಿದ್ದೇವೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Vijaya Karnataka Web 30 Jul 2017, 1:40 pm
ರಾಮನಗರ: ಗುಜರಾತ್ ಶಾಸಕರ ರೆಸಾರ್ಟ್‌ ವಾಸ್ತವ್ಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು, ಅಧಿಕಾರದಲ್ಲಿದ್ದಾಗ ಬಿಜೆಪಿಯವರು ಮಾಡಿದ್ದನ್ನೇ, ಈಗ ನಾವು ಮಾಡುತ್ತಿದ್ದೇವೆ ಎಂದಿದ್ದಾರೆ.
Vijaya Karnataka Web resort politics d k shivakumar reply
ರೆಸಾರ್ಟ್ ರಾಜಕಾರಣ: ಬಿಜೆಪಿ ಮಾಡಿದ್ದನ್ನೇ ನಾವು ಮಾಡುತ್ತಿದ್ದೇವೆ ಎಂದ ಡಿಕೆಸಿ


ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಾದ್ಯಂತ ಕುದುರೆ ವ್ಯಾಪಾರ ನಡೆಯುತ್ತಿದೆ. ಅಧಿಕಾರ ಬಳಸಿಕೊಂಡು ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಇದನ್ನು ತಪ್ಪಿಸಲು ಗುಜಾರಾತ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ ಎಂದು ಹೇಳಿದರು.

ಗುಜರಾತ್‌ನಲ್ಲಿ ಕಾಂಗ್ರೆಸ್ ಶಾಸಕರ ಮೇಲೆ ಒತ್ತಡ ಇದೆ. ಹಾಗಾಗಿ ರಾಜ್ಯದ ಐತಿಹಾಸಿಕ ಸ್ಥಳಗಳಿಗೆ ಅವರು ಪ್ರವಾಸಕ್ಕೆ ಬಂದಿದ್ದಾರೆ. ಬಂದಿರುವ ಶಾಸಕರು ದಡ್ಡರಲ್ಲ ಹಾಗೂ ಹಚಿಕ್ಕಮಕ್ಕಳೂ ಅಲ್ಲ. ಅವರಿಗೆ ಯಾವುದೇ ಕಿರುಕುಳ ನೀಡುತ್ತಿಲ್ಲ. ಸದ್ಯದಲ್ಲಿಯೇ ಅವರು ಮಾಧ್ಯಮದ ಮುಂದೆ ಬರಲಿದ್ದಾರೆ ಎಂದು ತಿಳಿಸಿದರು.

ಗುಜರಾತ್‌ನಿಂದ ಬಂದಿರುವ ಶಾಸಕರು ಮಹಾತ್ಮಾ ಗಾಂಧಿ ಹಾಗೂ ಸರ್ಧಾರ ನಾಡಿನಿಂದ ಬಂದವರು. ಅವರಿಗೆ ಪಕ್ಷದ ಮೇಲೆ ಸ್ವಾಭಿಮಾನ ಇದೆ. ಎಲ್ಲರೂ ಕಾಂಗ್ರೆಸ್ ಪಕ್ಷದಲ್ಲಿಯೇ ಇರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಒಟ್ಟು 42 ಶಾಸಕರು ಬೆಂಗಳೂರಿಗೆ ಬಂದಿದ್ದಾರೆ. ಶಾಸಕರ ಮುಂದಿನ ಪ್ರವಾಸ ಎಲ್ಲಿಗೆ ಅನ್ನುವುದನ್ನು ನಿರ್ಧರಿಸಿಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ