ಆ್ಯಪ್ನಗರ

ಕೊಲೆಗಾರನಿಗೆ ಜಿವಾವಧಿ ಶಿಕ್ಷೆ ವಿಧಿಸಿದ ಕೋರ್ಟ್‌

ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ ಆರೋಪಿಗೆ 14 ವರ್ಷ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಿ ಇಲ್ಲಿನ ಮೂರನೇ ಹೆಚ್ಚುವರಿ ಮತ್ತು ಸೆಷನ್ಸ್‌ ...

Vijaya Karnataka 26 Apr 2019, 5:00 am
ರಾಮನಗರ: ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ ಆರೋಪಿಗೆ 14 ವರ್ಷ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಿ ಇಲ್ಲಿನ ಮೂರನೇ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯವು ಬುಧವಾರ ಆದೇಶ ನೀಡಿದೆ.
Vijaya Karnataka Web the court sentenced the murderer to death
ಕೊಲೆಗಾರನಿಗೆ ಜಿವಾವಧಿ ಶಿಕ್ಷೆ ವಿಧಿಸಿದ ಕೋರ್ಟ್‌


ಚನ್ನಪಟ್ಟಣ ನಿವಾಸಿ ನದ್ದು ಅಲಿಯಾಸ್‌ ನದೀಮ್‌ ಶಿಕ್ಷೆಗೆ ಗುರಿಯಾದವರು. ಪ್ರಕರಣದ ಎರಡನೇ ಆರೋಪಿಯಾಗಿದ್ದ ಮುಜಾಮಿಲ್‌ಗೆ 1 ವರ್ಷ ಜೈಲು ವಾಸ ಹಾಗೂ 500 ದಂಡ ವಿಧಿಸಲಾಗಿದ್ದು, ಮೂರನೇ ಆರೋಪಿ ಸದ್ದಾಂ ಅವರನ್ನು ನ್ಯಾಯಾಲಯವು ಖುಲಾಸೆ ಮಾಡಿತು.

ಹಿನ್ನೆಲೆ: ಚನ್ನಪಟ್ಟಣದ ಡೈರಾ ಶಾಲೆಯ ಬಳಿ 2017ರ ಸೆಪ್ಟೆಂಬರ್‌ 21ರಂದು ಕಲಾ ನಗರ ನಿವಾಸಿ ಫೈಜಲ್‌ ಎಂಬುವರನ್ನು ಕ್ಷುಲಕ ಕಾರಣಕ್ಕೆ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಚನ್ನಪಟ್ಟಣ ಪೂರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಗೋಪಾಲಕೃಷ್ಣ ರೈ ಅವರು ಬುಧವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ