ಆ್ಯಪ್ನಗರ

ಕುಡಿದ ಮತ್ತಿನಲ್ಲಿ ಸ್ನೇಹಿತನ ಕೊಲೆ

ಕುಡಿದ ಮತ್ತಿನಲ್ಲಿ ಆರಂಭವಾದ ಸ್ನೇಹಿತರಿಬ್ಬರ ಜಗಳ ಕೊನೆಗೆ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.

Vijaya Karnataka 14 Dec 2018, 5:00 am
ರಾಮನಗರ: ಕುಡಿದ ಮತ್ತಿನಲ್ಲಿ ಆರಂಭವಾದ ಸ್ನೇಹಿತರಿಬ್ಬರ ಜಗಳ ಕೊನೆಗೆ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
Vijaya Karnataka Web the murder of a friend in the drunkard
ಕುಡಿದ ಮತ್ತಿನಲ್ಲಿ ಸ್ನೇಹಿತನ ಕೊಲೆ


ಯುವಕ ಚಂದ್ರಬಾಬು (22) ಮೃತನು. ಅದೇ ಗ್ರಾಮದ ಸ್ನೇಹಿತ ರಂಜಿತ್‌ (27) ಡ್ಯಾಗರ್‌ನಿಂದ ಇರಿದು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಬುಧವಾರ ರಾತ್ರಿ ಕುಡಿದ ಮತ್ತಿನಲ್ಲಿದ್ದ ಈ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ. ನಂತರ ಇದು ತಾರಕಕ್ಕೇರಿ ರಂಜಿತ್‌ ತನ್ನ ಸ್ನೇಹಿತ ಚಂದ್ರುವಿಗೆ ಡ್ಯಾಗರ್‌ನಿಂದ ಮನಸೋ ಇಚ್ಛೆ ಇರಿದು ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಚಂದ್ರುನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ, ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ. ಮೃತ ದೇಹವನ್ನು ಕೆಂಗೇರಿ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ಕುಂಬಳಗೂಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ