ಆ್ಯಪ್ನಗರ

ದೇವಾಲಯದಲ್ಲಿ ಕಳ್ಳತನ

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನ ಪಂಚಮುಖಿ ಆಂಜನೇಯ ಸ್ವಾಮಿ ದೇವಾಲಯದ ಹುಂಡಿ ಒಡೆದು ಲಕ್ಷಾಂತರ ಹಣ ದೋಚಿರುವ ಘಟನೆ ಶನಿವಾರ ಬೆಳಗಿನ ಜಾವ ...

Vijaya Karnataka 31 Mar 2019, 5:00 am
ರಾಮನಗರ: ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನ ಪಂಚಮುಖಿ ಆಂಜನೇಯ ಸ್ವಾಮಿ ದೇವಾಲಯದ ಹುಂಡಿ ಒಡೆದು ಲಕ್ಷಾಂತರ ಹಣ ದೋಚಿರುವ ಘಟನೆ ಶನಿವಾರ ಬೆಳಗಿನ ಜಾವ ಜರುಗಿದೆ.
Vijaya Karnataka Web theft in the temple
ದೇವಾಲಯದಲ್ಲಿ ಕಳ್ಳತನ


ತಡರಾತ್ರಿ ದೇವಾಲಯದ ಆವರಣಕ್ಕೆ ಆಗಮಿಸಿದ ಖದೀಮರು, ದೇವಾಲಯದ ಹುಂಡಿ ಒಡೆದು ಸುಮಾರು. 50 ಸಾವಿರಕ್ಕೂ ಹೆಚ್ಚಿನ ಮೊತ್ತ ಹಣ ದೋಚಿದ್ದಾರೆ ಎನ್ನಲಾಗುತ್ತಿದೆ. ಕಳೆದು ಒಂದು ವರ್ಷದ ಅಂತರದಲ್ಲಿ ಮೂರನೇ ಬಾರಿ ಕಳ್ಳತವಾಗಿದೆ.

ದೇವಾಲಯದ ಆಡತಳಿತ ಮಂಡಳಿ ಕಾವಲಿಗೆ ಪೊಲೀಸ್‌ ಸಿಬ್ಬಂದಿ ಮೊರೆಹೋಗಿದ್ದರು. ರಾತ್ರಿ ವೇಳೆ ಪಹರೆ ಹೆಚ್ಚುಸುವಂತೆ ಮನವಿ ಕೂಡ ಮಾಡಿದ್ದರು. ಆದರೆ, ಸಿಬ್ಬಂದಿ ನಿರ್ಲಕ್ಷ ತನಕ್ಕೆ ಮೂರನೇ ಬಾರಿ ಕಳ್ಳತನವಾಗಿದೆ.

ಸಿಸಿ ಟಿವಿ ಅಳವಡಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲೇ ದೇವಾಲಯದ ಇದೆ. ಆದರೂ, ಕಳ್ಳತನದಂತಹ ಪ್ರಕರಣ ತಡೆಗಟ್ಟಲು ಪೊಲೀಸ್‌ ಇಲಾಖೆ ವಿಫಲವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಟೌನ್‌ ಪೊಲೀಸ್‌ ಠಾಣೆಯ ಸಿಬ್ಬಂದಿ ಭೇಟಿ ನೀಡಿದ್ದಾರೆ. ದೇವಾಲಯದ ಆವರಣದಲ್ಲಿನ ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ