ಆ್ಯಪ್ನಗರ

ತುಂಗಾ ತೀರ ಅಭಿವೃದ್ಧಿಗೆ ರೂ. 130 ಕೋಟಿ

ಸ್ಮಾರ್ಟ್‌ ಸಿಟಿ ಯೋಜನೆ ಅಡಿ ಅಂದಾಜು 130 ಕೋಟಿ ರೂ. ವೆಚ್ಚದಲ್ಲಿ ತುಂಗಾ ನದಿ ತೀರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಇನ್ನು 15 ದಿನಗಳೊಳಗೆ ಕಾರ್ಯಾದೇಶ ನೀಡುವುದಾಗಿ ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್‌ ತಿಳಿಸಿದರು.

Vijaya Karnataka 26 Jul 2019, 5:00 am
ಶಿವಮೊಗ್ಗ : ಸ್ಮಾರ್ಟ್‌ ಸಿಟಿ ಯೋಜನೆ ಅಡಿ ಅಂದಾಜು 130 ಕೋಟಿ ರೂ. ವೆಚ್ಚದಲ್ಲಿ ತುಂಗಾ ನದಿ ತೀರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಇನ್ನು 15 ದಿನಗಳೊಳಗೆ ಕಾರ್ಯಾದೇಶ ನೀಡುವುದಾಗಿ ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್‌ ತಿಳಿಸಿದರು.
Vijaya Karnataka Web 130 crore to development tunga canal
ತುಂಗಾ ತೀರ ಅಭಿವೃದ್ಧಿಗೆ ರೂ. 130 ಕೋಟಿ


ಪಾಲಿಕೆ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿ ಮಾತನಾಡಿದ ಅವರು, ನಗರದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ ಎಂದು ಹೇಳಿದರು.

ತುಂಗಾ ನದಿಯ ಹಳೆಯ ಸೇತುವೆಯಿಂದ ಹೊಸ ಸೇತುವೆವರೆಗಿನ 2.6 ಕಿ.ಮೀ. ಪ್ರದೇಶದ 6.5 ಹೆಕ್ಟೆರ್‌ ವ್ಯಾಪ್ತಿಯಲ್ಲಿ ನಾಗರಿಕರಿಗೆ ಅನುಕೂಲವಾಗುವ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಒಟ್ಟಾರೆ, ತುಂಗಾ ತೀರದ ಚಹರೆಯೇ ಬದಲಾಗಲಿದೆ ಎಂದು ಮಾಹಿತಿ ನೀಡಿದರು.

ಅನುಷ್ಠಾನ ಹಂತದಲ್ಲಿ 37 ಕಾಮಗಾರಿ:

ಟ್ಯಾಂಕ್‌ ಮೊಹಲ್ಲಾ ಪಾರ್ಕ್‌ ಹಾಗೂ ಇ-ಲೈಬ್ರರಿ ಆರಂಭಿಸಲು ಮೂಲಸೌಕರ್ಯ ಕಲ್ಪಿಸುವ ಕಾರ್ಯ ಪೂರ್ಣಗೊಂಡಿವೆ. ಒಂದು ವರ್ಷದಿಂದ ಯೋಜನೆ ತ್ವರಿತವಾಗಿ ಅನುಷ್ಠಾನಗೊಳ್ಳುತ್ತಿದೆ. ಪ್ರಸ್ತುತ 839 ಕೋಟಿ ರೂ. ವೆಚ್ಚದ 37 ಕಾಮಗಾರಿಗಳು ಅನುಷ್ಠಾನ ಹಂತದಲ್ಲಿವೆ. ಲಕ್ಷ್ಮಿ ಟಾಕೀಜ್‌ ಬಳಿಯಿಂದ ಎನ್‌ಟಿ ರಸ್ತೆವರೆಗೆ ವರ್ತುಲ ರಸ್ತೆಯ ಕೊನೆಯ ಹಂತವನ್ನು ಜೋಡಿಸುವ ರಸ್ತೆ ನಿರ್ಮಾಣ ಕಾರ್ಯವನ್ನು ಸದ್ಯದಲ್ಲೇ ಆರಂಭಿಸಲಾಗುವುದು ಎಂದರು.

ಇನ್ನುಳಿದಂತೆ ಖಾಸಗಿ ಬಸ್‌ ನಿಲ್ದಾಣ ಅಭಿವೃದ್ಧಿ, 100 ಇ-ರಿಕ್ಷಾ ಖರೀದಿ, ಡಿಜಿಟಲ್‌ ಡಿಸ್‌ಪ್ಲೇ ಬೋರ್ಡ್‌ಗಳ ಅಳವಡಿಕೆ, 17 ಉದ್ಯಾನವನಗಳ ಅಭಿವೃದ್ಧಿ, 35 ಸರಕಾರಿ ಶಾಲೆಗಳಲ್ಲಿ ಸ್ಮಾರ್ಟ್‌ ಎಜ್ಯುಕೇಶನ್‌ ಸೌಲಭ್ಯ, ಬೈಕ್‌ ಶೇರಿಂಗ್‌ ಸೌಲಭ್ಯ, ಕನ್ಸರ್ವೆನ್ಸಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಒಟ್ಟು 120 ಕೋಟಿ ರೂ. ವೆಚ್ಚದಲ್ಲಿ 11 ಕಾಮಗಾರಿಗಳ ಅನುಷ್ಠಾನ ಅಂತಿಮ ಹಂತದಲ್ಲಿವೆ. ಬಹುಮಹಡಿ ವಾಹನ ಪಾರ್ಕಿಂಗ್‌, ನೆಹರೂ ಸ್ಟೇಡಿಯಂನಲ್ಲಿ ಅಭಿವೃದ್ಧಿ ಕಾಮಗಾರಿಗಳು, ಸ್ಮಾರ್ಟ್‌ ಬಸ್‌ ಶೆಲ್ಟರ್‌ ನಿರ್ಮಾಣ ಕಾಮಗಾರಿ ಪ್ರಸ್ತಾವನೆಗಳು ಡಿಪಿಆರ್‌ ಹಂತದಲ್ಲಿವೆ ಎಂದು ಹೇಳಿದರು.

ಸ್ಮಾರ್ಟ್‌ ಸಿಟಿ ಯೋಜನೆಯ ಸೂಪರಿಡೆಂಟ್‌ ಎಂಜಿನಿಯರ್‌ ಪರಸಪ್ಪ ಬಸಪ್ಪ, ಎಇ ಗಣೇಶ್‌ ಉಪಸ್ಥಿತರಿದ್ದರು.

===
ತುಂಗಾ ತೀರದಲ್ಲೇನಿರಲಿದೆ?

ವಾಕಿಂಗ್‌ ಟ್ರ್ಯಾಕ್‌, ಕಮರ್ಷಿಯಲ್‌ ಪ್ಲಾಜಾ, ಸೈಕಲ್‌ ಟ್ರ್ಯಾಕ್‌, ಪಾದಾಚಾರಿ ರಸ್ತೆ, ಮಾಹಿತಿ ಕೇಂದ್ರ, ಜೆಟ್ಟಿಗಳು, ಗಣಪತಿ ವಿಸರ್ಜನೆಗೆ ಕೆರೆ, ಬಯಲು ರಂಗಮಂದಿರ, ವೀಕ್ಷ ಣಾ ಗೋಪುರ, ಮಕ್ಕಳ ಆಟಿಕೆ, ಉದ್ಯಾನ, ಶಿವಮೊಗ್ಗದ ಇತಿಹಾಸ ಬಿಂಬಿಸುವ ಮ್ಯೂರಲ್‌ ಪೇಂಟಿಂಗ್‌, ಲೈಟಿಂಗ್‌, ಕ್ರಾಸಿಂಗ್‌ ಬ್ರಿಡ್ಜ್‌, ಜಿಮ್‌,

===

ಶಿವಮೊಗ್ಗದ ಪ್ರಮುಖ ಶಾಲಾ ಕಾಲೇಜು ಹಾಗೂ ಗ್ರಂಥಾಲಯಗಳಲ್ಲಿ ಡಿಜಿಟಲ್‌ ಮತ್ತು ವಚ್ರ್ಯುವಲ್‌ ಲೈಬ್ರರಿ ಯೋಜನೆ ಜಾರಿಗೊಳಿಸಲಾಗುತ್ತಿದೆ. ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಮಾಹಿತಿಯನ್ನು ವಿದ್ಯಾರ್ಥಿಗಳು ಮಾತ್ರವಲ್ಲದೆ ಸಾರ್ವಜನಿಕರು ಇದರಿಂದ ಸುಲಭವಾಗಿ ಪಡೆಯಲು ಸಾಧ್ಯವಾಗಲಿದೆ. ಹಲವು ಪ್ರಸಿದ್ಧ ನಗರಗಳಲ್ಲಿ ನದಿ ದಂಡೆ ಅಭಿವೃದ್ಧಿಪಡಿಸಿದ ಮಾದರಿಯಲ್ಲಿ ಇದನ್ನು ಪ್ರವಾಸಿ ತಾಣವಾಗಿಸುವ ನಿಟ್ಟಿನಲ್ಲಿ ಕಾಮಗಾರಿಗಳನ್ನು ಮಾಡಲಾಗುವುದು.

- ಚಾರುಲತಾ ಸೋಮಲ್‌, ಆಯುಕ್ತರು, ಮಹಾನಗರ ಪಾಲಿಕೆ, ಶಿವಮೊಗ್ಗ


===

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ