ಆ್ಯಪ್ನಗರ

ಪೌರತ್ವ ಕಾಯಿದೆ ತಿದ್ದುಪಡಿ ಕೈಬಿಡಿ

ನಾಗರಿಕ ಪೌರತ್ವ ತಿದ್ದುಪಡಿ ಕಾಯಿದೆ ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾಗಿ ಜಾರಿಗೊಳಿಸಲು ಮುಂದಾಗಿರುವ ಕೇಂದ್ರ ಸರಕಾರದ ನಡೆಯನ್ನು ಖಂಡಿಸಿ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ ಕಾರ್ಯಕರ್ತರು ಮಂಗಳವಾರ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿದರು.

Vijaya Karnataka 18 Dec 2019, 5:00 am
ಭದ್ರಾವತಿ: ನಾಗರಿಕ ಪೌರತ್ವ ತಿದ್ದುಪಡಿ ಕಾಯಿದೆ ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾಗಿ ಜಾರಿಗೊಳಿಸಲು ಮುಂದಾಗಿರುವ ಕೇಂದ್ರ ಸರಕಾರದ ನಡೆಯನ್ನು ಖಂಡಿಸಿ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ ಕಾರ್ಯಕರ್ತರು ಮಂಗಳವಾರ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿದರು.
Vijaya Karnataka Web 17BDVT1_46
ಭದ್ರಾವತಿಯಲ್ಲಿಪೌರತ್ವ ತಿದ್ದುಪಡಿ ಕಾಯಿದೆ ಹಿಂಪಡೆಯಲು ಒತ್ತಾಯಿಸಿ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ ಕಾರ್ಯಕರ್ತರು ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿದರು.


ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡುವುದರ ಮೂಲಕ ಭಾರತ ದೇಶದ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡಿದೆ. ದೇಶಕಟ್ಟುವಲ್ಲಿಮುಸ್ಲಿಂ ಸೇವೆ ಇನ್ನಿತರ ಧರ್ಮದವರ ಪಾತ್ರ ಹಿರಿದಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿಸಹಸ್ರಾರು ಸಂಖ್ಯೆಯಲ್ಲಿಮುಸ್ಲಿಮರು ತ್ಯಾಗ ಬಲಿದಾನ ಮಾಡಿದ್ದಾರೆ. ಸಂವಿಧಾನ 14, 15 ಹಾಗು 25 ಅನ್ವಯ ಈ ಕಾಯ್ದೆ ಸಂವಿಧಾನಕ್ಕೆ ವಿರುದ್ಧವಾಗಿದೆ. ಧರ್ಮದ ಆಧಾರದಡಿ ದೇಶವನ್ನು ವಿಭಜಿಸುತ್ತದೆ. ಅಲ್ಲದೆ ದೇಶದ ಅಲ್ಪ ಸಂಖ್ಯಾತರಾಗಿರುವ ಮುಸ್ಲಿಂ ಸಮುದಾಯದಲ್ಲಿಮಸೂದೆ ಭಯವನ್ನು ಉಂಟುಮಾಡುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿಎಸ್‌ಡಿಪಿಐ ಜಿಲ್ಲಾಧ್ಯಕ್ಷ ಸಾಲೀಮ್‌ ಖಾನ್‌ ನೇತೃತ್ವದಲ್ಲಿಮುಖಂಡರಾದ ಮೊಹಮದ್‌ ತಾಹಿರ್‌, ಸಯ್ಯದ್‌ ಹಫೀಜ್‌, ಶಾಹಿದ್‌ ಅಫ್ನಾನ್‌, ಇಮ್ರಾನ್‌ ಗೌಸ್‌, ಗೌಸ್‌ ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು.

-----
ಧರ್ಮದ ಆಧಾರಿತ ಪೌರತ್ವ ಬೇಡ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ದೇಶ ಹಿಂದುಳಿದ ಸಮುದಾಯವನ್ನು ಹತ್ತಿಕಲು ಪ್ರಯತ್ನಿಸುತ್ತಿದೆ. ಜಾತ್ಯತೀತ ಮತ್ತು ಧರ್ಮ ನಿರಪೇಕ್ಷ ದೇಶ ಎಂದು ಘೋಷಿಸಿಕೊಂಡಿರುವ ದೇಶದಲ್ಲಿಧರ್ಮದ ಆಧಾರದ ಮೇಲೆ ಪೌರತ್ವ ನಿರ್ಧರಿಸುವುದು ಸರಿಯಾದ ಕ್ರಮವಲ್ಲ. ಅದ್ದರಿಂದ ತಿದ್ದುಪಡಿ ಕಾಯಿದೆಯನ್ನು ಕೂಡಲೆ ಕೈಬಿಡಬೇಕೆಂದು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ