ಆ್ಯಪ್ನಗರ

ಭದ್ರಾವತಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಎಸಿ ಭೇಟಿ

ಭದ್ರಾ ಜಲಾಶಯದಿಂದ ಭದ್ರಾನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಬಿಟ್ಟ ಹಿನ್ನೆಲೆಯಲ್ಲಿ ಕೆಲವೆಡೆ ಪ್ರವಾಹ ಎದುರಾಗಿದ್ದು, ಶುಕ್ರವಾರ ಬೆಳಗ್ಗೆ ಉಪವಿಭಾಗಾಧಿಕಾರಿ ದಾಸೇಗೌಡ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

Vijaya Karnataka 11 Aug 2018, 5:00 am
ಭದ್ರಾವತಿ: ಭದ್ರಾ ಜಲಾಶಯದಿಂದ ಭದ್ರಾನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಬಿಟ್ಟ ಹಿನ್ನೆಲೆಯಲ್ಲಿ ಕೆಲವೆಡೆ ಪ್ರವಾಹ ಎದುರಾಗಿದ್ದು, ಶುಕ್ರವಾರ ಬೆಳಗ್ಗೆ ಉಪವಿಭಾಗಾಧಿಕಾರಿ ದಾಸೇಗೌಡ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
Vijaya Karnataka Web SMR-10BDVT3


ಹೊಸಸೇತುವೆ ಗುರುವಾರ ಸಂಜೆ ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ನದಿಯ ಇಕ್ಕೆಲ್ಲಗಳಲ್ಲಿರುವ ಅಡಕೆ, ತೆಂಗು, ಬಾಳೆ ಹಾಗೂ ತರಕಾರಿ ಕೈ ತೋಟಗಳು ಜಲಾವೃತಗೊಂಡಿತ್ತು. ಕವಲಗುಂದಿ ತಗ್ಗು ಪ್ರದೇಶದಲ್ಲಿನ ಒಟ್ಟು 4 ಮನೆಗಳಿಗೆ ನೀರು ನುಗ್ಗಿದ್ದು, 25 ಜನರನ್ನು ಸಮೀಪದ ವಿದ್ಯಾರ್ಥಿ ನಿಲಯಕ್ಕೆ ಸ್ಥಳಾಂತರಿಸಲಾಗಿದೆ.

ಹಳೇನಗರದ ಗುಂಡೂರಾವ್‌ ಶೆಡ್‌ ಹಾಗೂ ಎಕಿನ್‌ ಷಾ ಕಾಲೊನಿನ ಮನೆ ಮುಳುಗಡೆಯಾಗಿದ್ದು, ಕುಟುಂಬದವರನ್ನು ಸ್ಥಳೀಯ ಗಂಜಿಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಪ್ರತಿ ಬಾರಿ ನದಿಗೆ ನೀರು ಬಿಟ್ಟ ಸಂದರ್ಭ ತಗ್ಗು ಪ್ರದೇಶದ ನಿವಾಸಿಗಳು ಪ್ರವಾಹ ಭೀತಿ ಎದುರಿಸುವಂತಾಗಿದೆ. ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಉಪವಿಭಾಗಾಧಿಕಾರಿಗಳಿಗೆ ಸ್ಥಳೀಯರು ಮನವಿ ಮಾಡಿದರು.

ತಹಸೀಲ್ದಾರ್‌ ಎಂ.ಆರ್‌. ನಾಗರಾಜ್‌, ಕಂದಾಯಾಧಿಕಾರಿ ಪ್ರಶಾಂತ್‌, ಗ್ರಾಮ ಲೆಕ್ಕಾಧಿಕಾರಿ ಪ್ರೇಮ್‌ಕುಮಾರ್‌ ಸೇರಿದಂತೆ ತಾಲೂಕು ಕಚೇರಿ ಸಿಬ್ಬಂದಿ ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ