ಆ್ಯಪ್ನಗರ

ಮಿಂಚಿನ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ: 16ಸಾವಿರ ಅರ್ಜಿ ಸ್ವೀಕಾರ

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಇತ್ಯಾದಿಗಳಿಗಾಗಿ ಭಾನುವಾರ ಜಿಲ್ಲಾದ್ಯಂತ ಹಮ್ಮಿಕೊಂಡಿದ್ದ ಮಿಂಚಿನ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಟ್ಟು 16ಸಾವಿರ ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಲೋಕೇಶ್‌ ತಿಳಿಸಿದ್ದಾರೆ.

Vijaya Karnataka 10 Apr 2018, 5:00 am
ಶಿವಮೊಗ್ಗ : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಇತ್ಯಾದಿಗಳಿಗಾಗಿ ಭಾನುವಾರ ಜಿಲ್ಲಾದ್ಯಂತ ಹಮ್ಮಿಕೊಂಡಿದ್ದ ಮಿಂಚಿನ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಟ್ಟು 16ಸಾವಿರ ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಲೋಕೇಶ್‌ ತಿಳಿಸಿದ್ದಾರೆ.
Vijaya Karnataka Web acceptance of 16000 applications
ಮಿಂಚಿನ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ: 16ಸಾವಿರ ಅರ್ಜಿ ಸ್ವೀಕಾರ


ಜಿಲ್ಲೆಯ ಎಲ್ಲ 1721 ಮತಗಟ್ಟೆಗಳಲ್ಲಿ ಚುನಾವಣಾಧಿಕಾರಿ ಹಾಗೂ ಸಿಬ್ಬಂದಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಹಾಜರಿದ್ದು, ಅರ್ಜಿಗಳನ್ನು ಸ್ವೀಕರಿಸಿದರು. ಈ ಕುರಿತು ಜಿಲ್ಲಾದ್ಯಂತ ವ್ಯಾಪಕ ಪ್ರಚಾರ ಕಾರ್ಯ ಕೈಗೊಳ್ಳಲಾಗಿದ್ದು, ಚುನಾವಣಾಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಕುರಿತು ಪರಿಶೀಲನೆ ನಡೆಸುವಂತೆ ಅವರು ಸೂಚನೆ ನೀಡಿದ್ದಾರೆ.

ಜಿಲ್ಲೆಯ ಒಟ್ಟು 7ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ 9983 ಮಂದಿ, ಅರ್ಜಿ ನಮೂನೆ 7ರ ಅಡಿ 2389, ನಮೂನೆ 8ರ ಅಡಿ 2966 ಮತ್ತು 8ಎ ಅಡಿ 893 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರದಲ್ಲಿ ಹೆಸರು ಸೇರ್ಪಡೆಗೆ 1429ಮಂದಿ, ಭದ್ರಾವತಿಯಲ್ಲಿ 1134ಮಂದಿ, ಶಿವಮೊಗ್ಗದಲ್ಲಿ 3146, ತೀರ್ಥಹಳ್ಳಿ 646, ಶಿಕಾರಿಪುರದಲ್ಲಿ 1505, ಸೊರಬದಲ್ಲಿ 968 ಮತ್ತು ಸಾಗರದಲ್ಲಿ ಹೊಸದಾಗಿ ಹೆಸರು ಸೇರ್ಪಡೆಗೆ 1155 ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ಒಟ್ಟಾರೆಯಾಗಿ ಶಿವಮೊಗ್ಗ ಗ್ರಾಮಾಂತರದಲ್ಲಿ 2382, ಭದ್ರಾವತಿ 1580, ಶಿವಮೊಗ್ಗ 5305, ತೀರ್ಥಹಳ್ಳಿ 910, ಶಿಕಾರಿಪುರ 2593, ಸೊರಬ 1606 ಮತ್ತು ಸಾಗರದಲ್ಲಿ 1855 ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಇತ್ಯಾದಿ ಕಾರ್ಯಗಳನ್ನು ಕೈಗೊಳ್ಳಲು ಏ. 14ರ ವರೆಗೆ ಸಮಯಾವಕಾಶವಿದೆ. ಮುಂಬರುವ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಇದು ಕಡೆ ಅವಕಾಶವಾಗಿದ್ದು, ಎಲ್ಲರೂ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಮತಗಟ್ಟೆಗಳಿಗೆ ಭೇಟಿ: ಜಿಲ್ಲಾಧಿಕಾರಿ ಅವರು ಸೋಮವಾರ ನಗರದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆ, ತಿದ್ದುಪಡಿಗೆ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿದರು. ಹೊಸದಾಗಿ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ತಕ್ಷ ಣ ವಿಲೇವಾರಿ ಮಾಡಿ ವರದಿ ನೀಡುವಂತೆ ಅವರು ಸೂಚಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ