ಆ್ಯಪ್ನಗರ

ಅಪಘಾತ: ಸಣ್ಣಪುಟ್ಟ ಗಾಯ

ಖಾಸಗಿ ಬಸ್‌ ಮತ್ತು ಟ್ಯಾಂಕರ್‌ ಮುಖಾಮುಖಿ ಡಿಕ್ಕಿಯಾಗಿದ್ದು, ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ರಾಣೆಬೆನ್ನೂರು- ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿಶುಕ್ರವಾರ ಸಂಜೆ ಸಂಭವಿಸಿದೆ.

Vijaya Karnataka 8 Sep 2019, 5:00 am
ಹೊಸನಗರ: ಖಾಸಗಿ ಬಸ್‌ ಮತ್ತು ಟ್ಯಾಂಕರ್‌ ಮುಖಾಮುಖಿ ಡಿಕ್ಕಿಯಾಗಿದ್ದು, ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ರಾಣೆಬೆನ್ನೂರು- ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿಶುಕ್ರವಾರ ಸಂಜೆ ಸಂಭವಿಸಿದೆ.
Vijaya Karnataka Web accident minor injury
ಅಪಘಾತ: ಸಣ್ಣಪುಟ್ಟ ಗಾಯ


ಭಟ್ಕಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಮಂಗಳೂರಿಗೆ ಸಾಗುತ್ತಿದ್ದ ಟ್ಯಾಂಕರ್‌ ತಾಲೂಕಿನ ಕಾರಣಗಿರಿ ಸಮೀಪದ ಅರೋಡಿಯಲ್ಲಿಮುಖಾಮುಖಿ ಡಿಕ್ಕಿ ಹೊಡೆದಿದೆ. ಬಸ್‌ ಚಾಲಕ ನಾಗರಾಜ, ಟ್ಯಾಂಕರ್‌ ಚಾಲಕ ಜಯಪ್ರಕಾಶ ಹಾಗೂ ಬಸ್‌ನ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆದಿದ್ದಾರೆ. ಅಪಘಾತದ ರಭಸಕ್ಕೆ ಬಸ್‌ ಮತ್ತು ಟ್ಯಾಂಕರ್‌ ಮುಂಭಾಗ ನಜ್ಜುಗುಜ್ಜಾಗಿದೆ. ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ