ಆ್ಯಪ್ನಗರ

ಏ.1ರಿಂದ ಆಗುಂಬೆ ಘಾಟ್‌ ಬಂದ್‌

ಆಗುಂಬೆ ಘಾಟಿಯ ತಿರುವುಗಳಲ್ಲಿ ಕುಸಿದಿರುವ ಗುಡ್ಡಗಳ ಶಾಶ್ವತ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್‌ 1ರಿಂದ 3ರ ವರೆಗೆ ವಾಹನಗಳ ಸಂಚಾರವನ್ನು ಸಂಪೂರ್ಣ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

Vijaya Karnataka 30 Mar 2019, 5:00 am
ಶಿವಮೊಗ್ಗ : ಆಗುಂಬೆ ಘಾಟಿಯ ತಿರುವುಗಳಲ್ಲಿ ಕುಸಿದಿರುವ ಗುಡ್ಡಗಳ ಶಾಶ್ವತ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್‌ 1ರಿಂದ 3ರ ವರೆಗೆ ವಾಹನಗಳ ಸಂಚಾರವನ್ನು ಸಂಪೂರ್ಣ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
Vijaya Karnataka Web agumbe ghat bandh
ಏ.1ರಿಂದ ಆಗುಂಬೆ ಘಾಟ್‌ ಬಂದ್‌


ರಾಷ್ಟ್ರಿಯ ಹೆದ್ದಾರಿ 169ಎ ವ್ಯಾಪ್ತಿಯಲ್ಲಿ ಬರುವ ಆಗುಂಬೆ ಘಾಟಿಯ 33.70 ಮತ್ತು 37.018 ಕಿ.ಮೀ. ಗಳಲ್ಲಿ ಮಳೆಗಾಲದಲ್ಲಿ ಗುಡ್ಡ ಕುಸಿದಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗವು ಕಾಮಗಾರಿ ಕೈಗೊಳ್ಳುತ್ತಿದೆ. ಕಾಮಗಾರಿಗೆ ಅವಕಾಶ ನೀಡುವ ಉದ್ದೇಶದಿಂದ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ನಿಷೇಧ ವಿಧಿಸಲಾಗಿದೆ.

ಬದಲಿ ಮಾರ್ಗ: ಸಾಮಾನ್ಯ ಬಸ್‌ಗಳು, ಜೀಪು, ವ್ಯಾನ್‌, ಮಿನಿ ವ್ಯಾನ್‌, ದ್ವಿಚಕ್ರ ವಾಹನಗಳು ತೀರ್ಥಹಳ್ಳಿ-ಕೊಪ್ಪ-ಶೃಂಗೇರಿ-ಮಾಳಾಘಾಟ್‌-ಕಾರ್ಕಳ- ಉಡುಪಿ(ರಾ.ಹೆ.169) ಮಾರ್ಗವಾಗಿ ಸಂಚರಿಸಬೇಕು. ರಾಜಹಂಸ, ಐರಾವತ ಬಸ್‌ಗಳು, ಖಾಸಗಿ ಐಷಾರಾಮಿ ಬಸ್‌ಗಳು, ಬುಲೆಟ್‌ ಟ್ಯಾಂಕರ್ಸ್‌, ಷಿಪ್‌ ಕಾರ್ಗೋ, ಕಂಟೈನರ್ಸ್‌, ಲಾಂಗ್‌ ಚಾಸೀಸ್‌ ವಾಹನಗಳು ತೀರ್ಥಹಳ್ಳಿ-ಮಾಸ್ತಿಕಟ್ಟೆ- ಹೊಸಂಗಡಿ- ಸಿದ್ದಾಪುರ- ಕುಂದಾಪುರ- ಉಡುಪಿ(ರಾಜ್ಯ ಹೆದ್ದಾರಿ 52) ಮಾರ್ಗದಲ್ಲಿ ಸಂಚರಿಸಬೇಕು.

ಆಗುಂಬೆಯಲ್ಲಿರುವ ಸರಕಾರಿ ಶಾಲೆ ಮತ್ತು ಎಸ್‌ವಿಎಸ್‌ ಶಾಲೆಗಳಿಗೆ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಓಡಾಡಬೇಕಾಗಿರುವುದರಿಂದ ಮಿನಿ ಬಸ್‌ಗಳನ್ನು ತೀರ್ಥಹಳ್ಳಿ-ಆಗುಂಬೆ-ಬಿದರಗೋಡು- ಶೃಂಗೇರಿ ಮಾರ್ಗವಾಗಿಯೂ ಮತ್ತು ಸಾಮಾನ್ಯ ಬಸ್‌ಗಳನ್ನು ತೀರ್ಥಹಳ್ಳಿ- ಕಲ್ಮನೆ-ಹೆಗ್ಗೋಡು- ರಾಮಕೃಷ್ಣಾಪುರ-ಕಮ್ಮರಡಿ- ಶೃಂಗೇರಿ ಮಾರ್ಗದಲ್ಲಿ ಸಂಚರಿಸಲು ಅನುವು ಮಾಡಿಕೊಡಲಾಗಿದೆ.

ಕಾಮಗಾರಿ ನಡೆಯುವ ವೇಳೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ನಿಷೇಧಿತ ಮಾರ್ಗದಲ್ಲಿ ಯಾವುದೇ ವಾಹನ ಸಂಚರಿಸದಂತೆ ಮತ್ತು ಕಾಮಗಾರಿಗೆ ಅಡಚಣೆಯಾಗದಂತೆ ಸೂಚನಾ ಫಲಕಗಳನ್ನು ಅಳವಡಿಸಬೇಕು. ಘಾಟಿ ರಸ್ತೆಯ ದುರಸ್ತಿಗೆ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಪರಿಷ್ಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈ ಹಿಂದೆ ಮಾರ್ಚ್‌ 1ರಿಂದ 31ರ ವರೆಗೆ ಕಾಮಗಾರಿ ಕೈಗೊಳ್ಳಲು ನಿರ್ಧರಿಸಿ ಘಾಟಿಯಲ್ಲಿ ಸಂಚಾರ ನಿಷೇಧಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಒಮ್ಮೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಮೇಲಧಿಕಾರಿಗಳಿಂದ ಸೂಕ್ತ ನಿರ್ದೇಶನ ಮತ್ತು ಅನುಮತಿ ಪಡೆಯಬೇಕೆಂದು ತಿಳಿಸಿದ ಹಿನ್ನೆಲೆಯಲ್ಲಿ ಎರಡು ಬಾರಿ ದುರಸ್ತಿ ಕಾಮಗಾರಿಯನ್ನು ಮುಂದೂಡಿ ಅಧಿಸೂಚನೆ ಹಿಂತೆಗೆದುಕೊಳ್ಳಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ