ಆ್ಯಪ್ನಗರ

ಸಮರ್ಪಕ ನೀರು ಪೂರೈಕೆಗೆ ಮನವಿ

ನಗರವ್ಯಾಪ್ತಿಯಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಶುಕ್ರವಾರ ಉಪವಿಭಾಗಾಧಿಕಾರಿ ಹಾಗೂ ನಗರಸಭೆ ಆಡಳಿತಾಧಿಕಾರಿ ಎಚ್‌.ವಿ. ದರ್ಶನ್‌ ಅವರಿಗೆ ಮನವಿ ಸಲ್ಲಿಸಲಾಯಿತು.

Vijaya Karnataka 4 Aug 2019, 5:00 am
ಸಾಗರ : ನಗರವ್ಯಾಪ್ತಿಯಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಶುಕ್ರವಾರ ಉಪವಿಭಾಗಾಧಿಕಾರಿ ಹಾಗೂ ನಗರಸಭೆ ಆಡಳಿತಾಧಿಕಾರಿ ಎಚ್‌.ವಿ. ದರ್ಶನ್‌ ಅವರಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web SMR-03SGR4


ಕೆಲವು ದಿನಗಳಿಂದ ನಗರವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ನಗರವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಆಗುತ್ತಿಲ್ಲ. ಜನರು ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನೀರು ಸರಬರಾಜು ಮಾಡುವ ಚೈನಾಗೇಟ್‌ ಜಲಶುದ್ಧೀಕರಣ ಘಟಕದಲ್ಲಿ ತಾಂತ್ರಿಕ ಕಾರಣವೊಡ್ಡಿ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ. ನೀರು ಸರಬರಾಜು ಘಟಕದಲ್ಲಿ ಪದೇಪದೇ ಉಂಟಾಗುತ್ತಿರುವ ತಾಂತ್ರಿಕ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಗತ್ಯ ತಾಂತ್ರಿಕ ತಜ್ಞರನ್ನು ನೇಮಕ ಮಾಡಬೇಕು. ಮುಂದೆ ನೀರಿನ ಸಮಸ್ಯೆ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಆರ್‌.ಜಯಂತ್‌, ನಗರ ಅಧ್ಯಕ್ಷ ತಶ್ರೀಫ್‌, ಮಹಿಳಾ ಘಟಕದ ಅಧ್ಯಕ್ಷೆ ಮಧುಮಾಲತಿ, ಪ್ರಧಾನ ಕಾರ‍್ಯದರ್ಶಿ ಮಹಾಬಲ ಕೌತಿ, ಕಿರಣ್‌ ದೊಡ್ಮನೆ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ