ಆ್ಯಪ್ನಗರ

ಕಾರ್ಯಕರ್ತರ ಮೇಲೆ ಹಲ್ಲೆ: ನಿಷ್ಪಕ್ಷಪಾತ ಕ್ರಮಕ್ಕೆ ಬಿಜೆಪಿ ಮನವಿ

ಶಿಕಾರಿಪುರದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಆದರೆ, ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು ಮಾಡಿರುವುದು ಸರಿಯಲ್ಲ. ಈ ಬಗ್ಗೆ ನಿಷ್ಪಕ್ಷಪಾತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡರು ಮಂಗಳವಾರ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.

Vijaya Karnataka 15 May 2019, 5:00 am
ಶಿವಮೊಗ್ಗ ; ಶಿಕಾರಿಪುರದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಆದರೆ, ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು ಮಾಡಿರುವುದು ಸರಿಯಲ್ಲ. ಈ ಬಗ್ಗೆ ನಿಷ್ಪಕ್ಷಪಾತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡರು ಮಂಗಳವಾರ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.
Vijaya Karnataka Web SMR-14ganesh2


ಪೊಲೀಸ್‌ ಅಧಿಕಾರಿಗಳು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳದೇ ನಿಜವಾದ ತಪ್ಪಿತಸ್ಥರು ಯಾರು ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಶಿಕಾರಿಪುರ ತಾಲೂಕಿನ ಬಿಜೆಪಿ ಹಿರಿಯ ಕಾರ್ಯಕರ್ತರಾದ ಗುರುಮೂರ್ತಿ ಹಾಗೂ ಕೊಳಗಿ ರೇವಣಪ್ಪ ಅವರ ಮೇಲೆ 307 ಪ್ರಕರಣ ದಾಖಲು ಮಾಡಿರುವುದು ಸರಿಯಲ್ಲ. ಪಕ್ಷ ದ ಕಾರ್ಯಕರ್ತ ರಾಜಶೇಖರ್‌ ಮೇಲೆ ಕಾಂಗ್ರೆಸ್‌ನವರು ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ದೂರು ನೀಡಲಾಗಿದೆ. ಇದರ ಬಗ್ಗೆ ಕ್ರಮವಾಗಿಲ್ಲ. ಬದಲಿಗೆ ಬಿಜೆಪಿ ಹಿರಿಯ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಮನವಿ ಮಾಡಿದರು.

40 ವರ್ಷಗಳ ಹಿಂದೆ ಬಿಜೆಪಿ ನಾಯಕ ಯಡಿಯೂರಪ್ಪ ಅವರ ಮೇಲೆಯೂ ಹಲ್ಲೆ ನಡೆದಿತ್ತು. ಆ ಮೂಲಕ ಶಿಕಾರಿಪುರ ಪಟ್ಟಣದಲ್ಲಿ ಶಾಂತಿ ಕದಡುವಂತಹ ಕಾರ್ಯ ನಡೆದಿತ್ತು. ಅಲ್ಲಿಂದ ಇಲ್ಲಿಯವರೆಗೂ ಶಿಕಾರಿಪುರದಲ್ಲಿ ಶಾಂತಿಯುತ ವಾತಾವರಣ ಇದೆ. ಆದರೆ, ಇದನ್ನು ಕದಡುವಂತಹ ಕಾರ್ಯಕ್ಕೆ ಕಾಂಗ್ರೆಸ್‌ನವರು ಮುಂದಾಗಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೆಗೊಳ್ಳಬೇಕೆಂದು ಒತ್ತಾಯಿಸಿದರು.

ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ಎಸ್‌. ರುದ್ರೇಗೌಡ, ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌, ಪಾಲಿಕೆ ಉಪ ಮೇಯರ್‌ ಎಸ್‌.ಎನ್‌.ಚನ್ನಬಸಪ್ಪ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ