ಆ್ಯಪ್ನಗರ

ಮಹಿಳಾ ಸಿಬ್ಬಂದಿಗೆ ಕಿರುಕುಳ ತಪ್ಪಿಸಿ

ಎಪಿಎಂಸಿ ಸ್ವಚ್ಛತಾ ಸಿಬ್ಬಂದಿಗೆ ಟೆಂಡರ್‌ದಾರ ನೀಡುತ್ತಿರುವ ಕಿರುಕುಳ ತಪ್ಪಿಸಬೇಕೆಂದು ಆಗ್ರಹಿಸಿ ಕನ್ನಡ ಕಾರ್ಮಿಕರ ರಕ್ಷ ಣಾ ವೇದಿಕೆ ಕಾರ್ಯಕರ್ತರು ಎಪಿಎಂಸಿ ಅಧ್ಯಕ್ಷ ದುಗ್ಗಪ್ಪಗೌಡ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

Vijaya Karnataka 19 Jan 2019, 5:00 am
ಶಿವಮೊಗ್ಗ: ಎಪಿಎಂಸಿ ಸ್ವಚ್ಛತಾ ಸಿಬ್ಬಂದಿಗೆ ಟೆಂಡರ್‌ದಾರ ನೀಡುತ್ತಿರುವ ಕಿರುಕುಳ ತಪ್ಪಿಸಬೇಕೆಂದು ಆಗ್ರಹಿಸಿ ಕನ್ನಡ ಕಾರ್ಮಿಕರ ರಕ್ಷ ಣಾ ವೇದಿಕೆ ಕಾರ್ಯಕರ್ತರು ಎಪಿಎಂಸಿ ಅಧ್ಯಕ್ಷ ದುಗ್ಗಪ್ಪಗೌಡ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
Vijaya Karnataka Web SMR-18GANESH2


ಎಪಿಎಂಸಿಯಲ್ಲಿ ಕಳೆದ 10 ವರ್ಷಗಳಿಂದ ಸ್ವಚ್ಛತಾ ಸಿಬ್ಬಂದಿಗಳಾಗಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಆದರೆ, ಟೆಂಡರ್‌ದಾರ ಕಿಶೋರ್‌ ಎಂಬಾತ ಕಾರ್ಮಿಕರಿಗೆ ಕಿರುಕುಳ ನೀಡುತ್ತಿದ್ದಾನೆ. ಹೆಣ್ಣು ಮಕ್ಕಳ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದಾನೆ. ನಿಗದಿತ ಅವಧಿಗಿಂತ ಹೆಚ್ಚು ಸಮಯ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಹೆಚ್ಚು ಕೆಲಸ ಮಾಡಿದ್ದಕ್ಕೆ ವೇತನ ಕೂಡ ನೀಡುವುದಿಲ್ಲ ಎಂದು ಆರೋಪಿಸಿದರು.

ಈ ಬಗ್ಗೆ ಪ್ರಶ್ನೆ ಮಾಡಿದರೆ ಕೆಲಸದಿಂದ ತೆಗೆದುಹಾಕುತ್ತಿದ್ದಾರೆ. ಇಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಗುರುತಿನ ಚೀಟಿ ಸಹ ನೀಡಿಲ್ಲ. ಎಟಿಎಂ ಕಾರ್ಡ್‌ ಪಡೆದು ಕಾರ್ಮಿಕರ ಹಣವನ್ನು ಟೆಂಡರ್‌ದಾರರೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಟೆಂಡರ್‌ದಾರರ ಪರವಾನಗಿ ರದ್ದು ಮಾಡಬೇಕು. ಕೆಲಸದಿಂದ ತೆಗೆದ ಸಿಬ್ಬಂದಿಗಳಿಗೆ ಪುನಃ ಕೆಲಸಕ್ಕೆ ಸೇರಿಸಿಕೊಳ್ಳಬೇಕು. ಹೆಣ್ಣು ಮಕ್ಕಳ ಜತೆ ಅಸಭ್ಯವಾಗಿ ವರ್ತಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವೇದಿಕೆ ಅಧ್ಯಕ್ಷ ವಾಟಾಳ್‌ ಮಂಜುನಾಥ್‌, ನಿತಿನ್‌ ರೆಡ್ಡಿ, ಅನ್ವರ್‌, ಶೇಖರ್‌, ಜುಬೇದಾ, ಸುನಿಲ್‌, ಸರೋಜಬಾಯಿ, ಶೋಭಾ, ರುದ್ರಮ್ಮ, ಯಶೋಧಾ, ಯಲ್ಲಮ್ಮ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ