ಆ್ಯಪ್ನಗರ

ಗೃಹ ಸಚಿವರ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

ಪ್ರತಿಪಕ್ಷಗಳನ್ನು ಹತ್ತಿಕ್ಕಿ, ಮಾಧ್ಯಮವನ್ನು ಬೆದರಿಸುತ್ತಿರುವ ಗೃಹ ಸಚಿವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.

Vijaya Karnataka 7 May 2019, 5:00 am
ಶಿವಮೊಗ್ಗ: ಪ್ರತಿಪಕ್ಷಗಳನ್ನು ಹತ್ತಿಕ್ಕಿ, ಮಾಧ್ಯಮವನ್ನು ಬೆದರಿಸುತ್ತಿರುವ ಗೃಹ ಸಚಿವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.
Vijaya Karnataka Web SMR-6ganesh1


ರಾಜ್ಯ ಸಮ್ಮಿಶ್ರ ಸರಕಾರ ಮಾಧ್ಯಮ ಸೇರಿದಂತೆ ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ಸೇಡಿನ ಕ್ರಮ ಕೈಗೊಳ್ಳುತ್ತಿದೆ. ಅನೇಕ ಪ್ರಸಂಗಗಳಲ್ಲಿ ಬಿಜೆಪಿ ತನ್ನ ವಿರುದ್ಧ ನಡೆಯುತ್ತಿರುವ ಸೇಡಿನ ಕ್ರಮಗಳ ವಿರುದ್ಧ ದೂರು ನೀಡಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ. ಬದಲಿಗೆ ರಾಜಕೀಯ ಎದುರಾಳಿಗಳ ವಿರುದ್ಧ ಪ್ರತಿಕಾರದ ಕ್ರಮಕ್ಕೆ ಸರಕಾರ ಮುಂದಾಗಿದೆ ಎಂದು ಆರೋಪಿಸಿದರು.

ಈ ಹಿಂದೆ ಪ್ರಧಾನಿ ಮೋದಿ ಹತ್ಯೆ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ದೂರು ನೀಡಿದ್ದರೂ ರಾಜ್ಯ ಸರಕಾರ ಕ್ರಮ ಕೈಗೊಂಡಿಲ್ಲ. ಮಂಡ್ಯದಲ್ಲಿ ಜೆಡಿಎಸ್‌ ಶಾಸಕ ನಾರಾಯಣಗೌಡ ಅವರು ನಟರಾದ ದರ್ಶನ್‌ ಮತ್ತು ಯಶ್‌ ಅವರಿಗೆ ನೇರವಾಗಿ ಬೆದರಿಕೆ ಹಾಕಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳದ ಸರಕಾರ ಪಕ್ಷ ಪಾತ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಮಾಧ್ಯಮಗಳು ಸರಕಾರ, ಸಚಿವರನ್ನು ಟೀಕಿಸುವುದೇ ಅಪರಾಧ ಎನ್ನುವಂತಾಗಿದೆ. ಪ್ರತಿಪಕ್ಷ ಗಳ ಮುಖಂಡರು, ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿ ಭಯದ ವಾತಾವರಣ ಮೂಡಿಸಲಾಗುತ್ತಿದೆ. ತುರ್ತು ಪರಿಸ್ಥಿತಿಯ ಕರಾಳ ನೆನಪು ಮರುಕಳಿಸುವ ಹಲವು ಪ್ರಕರಣಗಳು ನಡೆದಿವೆ ಎಂದು ದೂರಿದರು.

ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರಕಾರವನ್ನು ಟೀಕಿಸಿದ ಕಾರಣಕ್ಕೆ ಬಿಜೆಪಿ ಹಿತೈಷಿಗಳು ಮತ್ತು ಹಿರಿಯ ಪತ್ರಕರ್ತರನ್ನು ಕಾರಾಗೃಹಕ್ಕೆ ಕಳುಹಿಸಲು ಗೃಹ ಮಂತ್ರಿಗಳೇ ಆಸಕ್ತಿ ವಹಿಸಿದ್ದರು. ಗೃಹ ಸಚಿವ ಎಂ.ಬಿ.ಪಾಟೀಲ್‌ ಬರೆದಿದ್ದರೆನ್ನಲಾದ ಪತ್ರವನ್ನು ಜಾಲತಾಣದಲ್ಲಿ ಪ್ರಕಟಿಸಿದ ಕಾರಣಕ್ಕೆ ಹೇಮಂತ್‌ ಕುಮಾರ್‌ ಅವರನ್ನು ಬಂಧಿಸಲಾಗಿದೆ. ಪೊಲೀಸ್‌ ವ್ಯವಸ್ಥೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಶಾಸಕ ಕೆ.ಎಸ್‌.ಈಶ್ವರಪ್ಪ, ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌, ಎನ್‌.ಜಿ.ನಾಗರಾಜ್‌, ಎಸ್‌.ಎನ್‌. ಚನ್ನಬಸಪ್ಪ, ಮೇಯರ್‌ ಲತಾ ಗಣೇಶ್‌, ಬಿ.ಆರ್‌. ಮಧುಸೂದನ್‌, ಮಾಲತೇಶ್‌, ಸುವರ್ಣ ಶಂಕರ್‌, ಜೆ.ಇ.ವಿರೂಪಾಕ್ಷ ಪ್ಪ, ರಾಮು ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ