ಆ್ಯಪ್ನಗರ

ಸ್ಥಳೀಯ ಸಂಸ್ಥೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಸಂಸದ

ಜಿಲ್ಲೆಯಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಪಡೆಯುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

Vijaya Karnataka 30 May 2019, 5:00 am
ಶಿಕಾರಿಪುರ: ಜಿಲ್ಲೆಯಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಪಡೆಯುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
Vijaya Karnataka Web SMR-29SKP6


ಪಟ್ಟಣದಲ್ಲಿ ಬುಧವಾರ ಪುರಸಭೆ ಚುನಾವಣೆಗೆ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈಚೆಗೆ ನಡೆದ ಸಂಸತ್‌ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಪಡೆದಿರುವುದೂ ಸ್ಥಳೀಯ ಸಂಸ್ಥೆ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆ. ಎಲ್ಲ ಕಡೆ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಉತ್ತಮ ವಾತಾವರಣ ಇದೆ ಎಂದರು.

ಹಿಂದೆ ಪುರಸಭೆಯಲ್ಲಿ ಪೌರ ಕಾರ್ಮಿಕರಿಗೆ ಸಂಬಳ ನೀಡುವುದಕ್ಕೂ ಆಗದ ಸ್ಥಿತಿ ಇತ್ತು. ಬಿಎಸ್‌ವೈ ಮುಖ್ಯಮಂತ್ರಿ ಆದ ಸಂದರ್ಭ ನೀಡಿದ ನಗರೋತ್ಥಾನ ಯೋಜನೆ ಪರಿಣಾಮ ಇಂದು ಪಟ್ಟಣ, ನಗರಗಳ ಅಭಿವೃದ್ಧಿಗೆ ಸಹಕಾರಿ ಆಗಿದೆ. ಕುಡಿಯುವ ನೀರು, ಸ್ವಚ್ಛತೆಗೆ ನಮ್ಮ ಆಡಳಿತ ಇರುವ ಕಡೆ ಆದ್ಯತೆ ನೀಡಿದ್ದು, ಅದರ ಪರಿಣಾಮ ಜಿಲ್ಲೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಪಡೆಯುವ ವಿಶ್ವಾಸವಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ