ಆ್ಯಪ್ನಗರ

ವ್ಯಕ್ತಿತ್ವ ವಿಕಸನಕ್ಕೆ ಸಹಪಠ್ಯ ಸಹಕಾರಿ

ವ್ಯಕ್ತಿತ್ವ ವಿಕಸನಕ್ಕೆ ಸಹಪಠ್ಯ ಚಟುವಟಿಕೆಗಳು ಸಹಕಾರಿಯಾಗಿದ್ದು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಎಂ.ಡಿ.ಉಮೇಶ್‌ ಹೇಳಿದರು.

Vijaya Karnataka 22 Aug 2019, 5:00 am
ಸೊರಬ : ವ್ಯಕ್ತಿತ್ವ ವಿಕಸನಕ್ಕೆ ಸಹಪಠ್ಯ ಚಟುವಟಿಕೆಗಳು ಸಹಕಾರಿಯಾಗಿದ್ದು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಎಂ.ಡಿ.ಉಮೇಶ್‌ ಹೇಳಿದರು.
Vijaya Karnataka Web SMR-21srbp4


ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಕ್ರೀಡಾ ಮತ್ತು ಸಾಂಕೃತಿಕ ವೇದಿಕೆ, ಎನ್ಸೆಸ್ಸೆಸ್‌ ಹಾಗೂ ಸುರಭಿ ರೋವರ್ಸ್‌ ಘಟಕದ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಓದಿನ ಜತೆಗೆ ಸಂಸ್ಕಾರ ಬೆಳೆಸಿಕೊಳ್ಳುವ ಅಗತ್ಯವಿದೆ. ಅಂಕ ಗಳಿಕೆಯೇ ಸಾಧನೆ ಎಂದುಕೊಳ್ಳದೆ ಕಲೆ, ಸಾಹಿತ್ಯ, ಕ್ರೀಡೆ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳುವುದು ಕೂಡ ಸಾಧನೆಯಾಗಿದೆ ಎಂದರು.

ಪ್ರಾಂಶುಪಾಲ ಎಂ.ಸುರೇಶಪ್ಪ ಮಾತನಾಡಿ, ವಿದ್ಯಾರ್ಥಿಗಳು ಸರಕಾರ ನೀಡಿದ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಫಲಿತಾಂಶ ನೀಡುವ ಮೂಲಕ ಕಾಲೇಜಿಗೆ ಕೀರ್ತಿ ತರಬೇಕು ಎಂದರು.

ಭಾವನಾ ಮತ್ತು ಸಂಗಡಿಗರು ಪ್ರಾರ್ಥಿಸಿ, ಉಪನ್ಯಾಸಕರಾದ ಎಂ.ಬಂಗಾರಪ್ಪ ಸ್ವಾಗತಿಸಿದರು. ಜಿ.ಬಂಗಾರಪ್ಪ ನಿರೂಪಿಸಿ, ಜೆ.ಎಸ್‌.ರೇಣುಕಾ ವಂದಿಸಿದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಲತಾ ಗುರುಮೂರ್ತಿ, ಗೀತಾ ಚಂದ್ರಶೇಖರ್‌, ಮಂಜುಳಮ್ಮ ಸುರೇಶ್‌, ಉಪನ್ಯಾಸಕರಾದ ಕೆ.ಆರ್‌.ಶಿವಾನಂದಪ್ಪ, ಎಚ್‌.ಕೆ.ಚಂದ್ರಶೇಖರ್‌, ಕೆ.ವಿಶ್ವನಾಥ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ