ಆ್ಯಪ್ನಗರ

ಯುಪಿ ಸರಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರಿಗೆ ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಸಂತ್ರಸ್ತರ ಅಹವಾಲು ಆಲಿಸಲು ಅವಕಾಶ ನೀಡದಿರುವ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರು ಮಹಾವೀರ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

Vijaya Karnataka 21 Jul 2019, 5:00 am
ಶಿವಮೊಗ್ಗ : ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರಿಗೆ ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಸಂತ್ರಸ್ತರ ಅಹವಾಲು ಆಲಿಸಲು ಅವಕಾಶ ನೀಡದಿರುವ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರು ಮಹಾವೀರ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
Vijaya Karnataka Web SMG-2007-2-15-20SMG3


ಉತ್ತರ ಪ್ರದೇಶದಲ್ಲಿ ಭೂ ವಿವಾದವೊಂದರಲ್ಲಿ 10 ಬಡ ರೈತರನ್ನು ಹತ್ಯೆಗೈಯಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಿಯಾಂಕ ಗಾಂಧಿ ಅವರು ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ನ್ಯಾಯ ಕೇಳಲು ಹೊರಟಿದ್ದಾಗ ಅದಕ್ಕೆ ಅವಕಾಶ ನೀಡಲಿಲ್ಲ. ಇದು ಅಸಂವಿಧಾನಿಕವಾಗಿದೆ. ಬಡವರ ಪರವಾಗಿ ನ್ಯಾಯ ಕೇಳಲು ಹೋದವರಿಗೆ ತಡೆಯೊಡ್ಡುವುದು ಪ್ರಜಾಪ್ರಭುತ್ವದಲ್ಲಿ ಎಷ್ಟರಮಟ್ಟಿಗೆ ಸರಿ ಎಂದು ಪ್ರತಿಭಟನಾಕಾರರು ಪ್ರಶ್ನೆ ಮಾಡಿದರು.

ಪ್ರಜಾಪ್ರಭುತ್ವದ ಮೌಲ್ಯ ದಮನಗೊಳಿಸಲು ಪ್ರಯತ್ನಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಎಲ್‌. ಸತ್ಯನಾರಾಯಣ್‌ರಾವ್‌, ಎಲ್‌.ರಾಮೇಗೌಡ, ರಮೇಶ್‌ ಹೆಗ್ಡೆ, ವೈ.ಎಚ್‌.ನಾಗರಾಜ್‌, ಆರ್‌. ಸತ್ಯನಾರಾಯಣ್‌ , ಚಂದ್ರಭೂಪಾಲ್‌, ಹುಲ್ತಿಕೊಪ್ಪ ಶ್ರೀಧರ್‌, ಡಾ.ಶ್ರೀನಿವಾಸ್‌, ಎಸ್‌.ಪಿ.ದಿನೇಶ್‌, ವಿಜಯಲಕ್ಷ್ಮಿ ಸಿ.ಪಾಟೀಲ್‌, ವಿಶ್ವನಾಥ್‌ ಕಾಶಿ, ನಾಗರಾಜ್‌, ಯಮುನಾ ರಂಗೇಗೌಡ, ಮಂಜುಳಾ ಶಿವಣ್ಣ ಮತ್ತಿತರರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ