ಆ್ಯಪ್ನಗರ

ಪ್ಲಾಸ್ಟಿಕ್‌ ಧ್ವಜ ಮಾರಾಟಕ್ಕೆ ಕಡಿವಾಣ ಹಾಕಿ

ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯುವ ರಾಷ್ಟ್ರಧ್ವಜಕ್ಕೆ ಅಪಮಾನ ಹಾಗೂ ಪ್ಲಾಸ್ಟಿಕ್‌ ಧ್ವಜ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ಕಾರ್ಯಕರ್ತರು ಶನಿವಾರ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.

Vijaya Karnataka 5 Aug 2019, 5:00 am
ಭದ್ರಾವತಿ: ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯುವ ರಾಷ್ಟ್ರಧ್ವಜಕ್ಕೆ ಅಪಮಾನ ಹಾಗೂ ಪ್ಲಾಸ್ಟಿಕ್‌ ಧ್ವಜ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ಕಾರ್ಯಕರ್ತರು ಶನಿವಾರ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.
Vijaya Karnataka Web SMR-3BDVT3


ರಾಷ್ಟ್ರಧ್ವಜ ಗೌರವದ ಸಂಕೇತವಾಗಿದೆ. ದೇಶದ ಜನರು ಕೇವಲ ಆ15 ಹಾಗೂ ಜ26ರ ಗಣರಾಜ್ಯೋತ್ಸವದಂದು ಮಾತ್ರ ರಾಷ್ಟ್ರಧ್ವಜಕ್ಕೆ ಗೌರವ ಸಮರ್ಪಣೆ ಮಾಡಲಾಗುತ್ತದೆ. ಈ ಸಂದರ್ಭ ಕಾಗದ ಮತ್ತು ಪ್ಲಾಸ್ಟಿಕ್‌ ಧ್ವಜಗಳು ಸಂಜೆಯಾಗುತ್ತಿದ್ದಂತೆ ರಸ್ತೆ ಮೇಲೆ ಹರಡುವುದರಿಂದ ಧ್ವಜಕ್ಕೆ ಅಪಮಾನ ಮಾಡಿದಂತಾಗುವುದು, ಅಲ್ಲದೇ ಅಗೌರವ ಮಾಡಿದಂತಾಗುವುದು. ಅಗೌರವ ತಡೆಯಲೆಂದು ಹಿಂದೂ ಜನಜಾಗೃತಿ ಸಮಿತಿ ಮುಂಬೈ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡಿದ್ದರಿಂದ ಅಲ್ಲಿನ ಕೋರ್ಟ್‌ ಪ್ಲಾಸ್ಟಿಕ್‌ ರಾಷ್ಟ್ರ ಧ್ವಜದ ಅಗೌರವ ತಡೆಗೆ ಸರಕಾರಕ್ಕೆ ಆದೇಶ ನೀಡಿತ್ತು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ರಾಜ್ಯ ಸರಕಾರ ಕೂಡ ಪ್ಲಾಸ್ಟಿಕ್‌ ಧ್ಜಜ ಮಾರಾಟ ಕಾನೂನು ಬಾಹಿರ ಎಂದು ಆದೇಶಿಸಿದೆ. ಈ ಆದೇಶ ಉಲ್ಲಂಘಿಸಿ ಧ್ವಜ ಮಾರಾಟ ಮಾಡುವ ಅಂಗಡಿ ಹಾಗೂ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಈ ಸಂದರ್ಭ ಹಿಂದೂ ಜನಜಾಗೃತಿ ಸಮಿತಿಯ ಸುಧಾ ಗುರುಪ್ರಸಾದ್‌, ಪವನ್‌, ವಸಂತ್‌, ಹಾಲೇಶ್‌, ಕೇಸರಿ ಪಡೆಯ ಗಿರೀಶ್‌, ಎಬಿವಿಪಿ ವಿಜಯ ಸಿದ್ದಾರ್ಥ ನವೀನ್‌ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ