ಆ್ಯಪ್ನಗರ

ಶಿವಮೊಗ್ಗ: ಜನರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ಯುವಕರಿಗೆ ಗ್ರಾಮಸ್ಥರಿಂದ ಧರ್ಮದೇಟು

ಕೊರೊನಾ ವೈರಸ್‌ ದೇಶ ಸೇರಿದಂತೆ ಇಡೀ ವಿಶ್ವವನ್ನೇ ಕಾಡುತ್ತಿದ್ದು, ಜನರಲ್ಲಿ ಭೀತಿ ಸೃಷ್ಟಿ ಮಾಡುತ್ತಿದೆ. ಇದನ್ನೇ ಬಂಡವಾಳವಾಗಿಸಿಕೊಂಡ ಕೆಲವು ಕಿಡಿಗೇಡಿಗಳು ಜನರನ್ನು ಬೆದರಿಸುವ ಕೆಲಸ ಮಾಡುತ್ತಿದ್ದು, ಹಣವನ್ನೂ ವಸೂಲಿ ಮಾಡುತ್ತಿದ್ದಾರೆ.

Vijaya Karnataka Web 21 Apr 2020, 5:22 pm
ಶಿವಮೊಗ್ಗ: ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಜನರನ್ನು ಬೆದರಿಸಿ ಹಣ ವಸೂಲಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಎಂದು ಹೇಳಿಕೊಂಡು ಇಬ್ಬರು ಯುವಕರು ಈ ಕೃತ್ಯ ನಡೆಸಿದ್ದಾರೆ.
Vijaya Karnataka Web police station complaint toi


ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಎಂದು ಹೇಳಿಕೊಂಡು ಮೊಹಮ್ಮದ್ ನಕೇರಿ, ಮೊಹಮದ್ ಅತೀಕ್ ಎಂಬುವವರು ಜನರನ್ನು ಬೆದರಿಸಿ ಹಣ ವಸೂಲಿ ಮಾಡಿದ್ದಾರೆ. ಶಿವಮೊಗ್ಗದ ಟಿಪ್ಪು ನಗರದ ಇಬ್ಬರು ಯುವಕರು ಈ ಕೃತ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಎಂದು ಹೇಳಿಕೊಂಡು ಮಾಸ್ಕ್ ಧರಿಸದೆ ವಾಹನ ಓಡಿಸುತ್ತಿದ್ದವರಿಗೆ ತಡೆದು ಮಾಸ್ಕ್ ಏಕೆ ಧರಿಸಿಲ್ಲ ಎಂದು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದರು. ಅನುಮಾನಗೊಂಡ ಗ್ರಾಮಸ್ಥರು ಅವರನ್ನು ವಿಚಾರಿಸಿದಾಗ ಅವರು ನಕಲಿ ಸಿಬ್ಬಂದಿ ಎಂದು ತಿಳಿದುಬಂದಿದೆ. ತಕ್ಷಣ ಗ್ರಾಮಸ್ಥರು ಧರ್ಮದೇಟು ನೀಡಿ ಇಬ್ಬರು ಯುವಕರನ್ನೂ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ಶಿವಮೊಗ್ಗಕ್ಕೆ ಖಾಕಿ ಸರ್ಪಗಾವಲು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ