ಆ್ಯಪ್ನಗರ

ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಅಂಗಾಳ ಗ್ರಾಮದಲ್ಲಿ ಸಮಾಜದ ಎಸ್‌.ಪ್ರಸಾದ್‌ ಹಾಗೂ ಇತರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಅಂಬೇಡ್ಕರ್‌ ಮತ್ತು ಜಗಜೀವನರಾಮ್‌ ಪ್ರತಿಮೆಗೆ ಅವಮಾನ ಮಾಡಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಕರ್ನಾಟಕ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಆಗ್ರಹಿಸಿದೆ.

Vijaya Karnataka 14 Mar 2019, 5:00 am
ಶಿವಮೊಗ್ಗ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಅಂಗಾಳ ಗ್ರಾಮದಲ್ಲಿ ಸಮಾಜದ ಎಸ್‌.ಪ್ರಸಾದ್‌ ಹಾಗೂ ಇತರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಅಂಬೇಡ್ಕರ್‌ ಮತ್ತು ಜಗಜೀವನರಾಮ್‌ ಪ್ರತಿಮೆಗೆ ಅವಮಾನ ಮಾಡಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಕರ್ನಾಟಕ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಆಗ್ರಹಿಸಿದೆ.
Vijaya Karnataka Web SMG-1303-2-15-13SMG6


ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದ ಹೋರಾಟಗಾರರು, ದೌರ್ಜನ್ಯ ಎಸಗಿದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಎಸ್‌.ಪ್ರಸಾದ್‌ ಹಾಗೂ ಇತರರ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಲಾಗಿದೆ. ಅಂಬೇಡ್ಕರ್‌ ಮತ್ತು ಬಾಬು ಜಗಜೀವನರಾಮ್‌ ಪ್ರತಿಮೆಗಳಿಗೆ ಕಲ್ಲುಗಳಿಂದ ಹೊಡೆದು ಅವಮಾನ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ ಇಂತಹ ಘಟನೆಗಳು ಪದೇ ಪದೆ ನಡೆಯುತ್ತಿದ್ದು, ಮರುಕಳುಹಿಸದ ರೀತಿಯಲ್ಲಿ ಕ್ರಮಕ್ಕೆ ಸರಕಾರ ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ. ಸಂಘಟನೆಯ ಸಿ.ಮೂರ್ತಿ, ಎಚ್‌.ಎನ್‌.ಪ್ರಭು, ಎ.ಕೆ. ಹನುಮಂತಪ್ಪ ಮಂಗೋಟೆ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ