ಆ್ಯಪ್ನಗರ

ತಂಗುದಾಣ ಕಲ್ಪಿಸಲು ಆಗ್ರಹ

ನ್ಯೂಮಂಡ್ಲಿ ಪ್ರದೇಶದಲ್ಲಿ ಬಸ್‌ ತಂಗುದಾಣ ನಿರ್ಮಿಸುವಂತೆ ಆಗ್ರಹಿಸಿ ಸ್ತ್ರೀಬಂಧು ಸ್ವಸಹಾಯ ಸಂಘಗಳ ಒಕ್ಕೂಟ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿತು.

Vijaya Karnataka 27 Jun 2019, 5:00 am
ಶಿವಮೊಗ್ಗ: ನ್ಯೂಮಂಡ್ಲಿ ಪ್ರದೇಶದಲ್ಲಿ ಬಸ್‌ ತಂಗುದಾಣ ನಿರ್ಮಿಸುವಂತೆ ಆಗ್ರಹಿಸಿ ಸ್ತ್ರೀಬಂಧು ಸ್ವಸಹಾಯ ಸಂಘಗಳ ಒಕ್ಕೂಟ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿತು.
Vijaya Karnataka Web SMG-2606-2-15-26SMG6


ನ್ಯೂಮಂಡ್ಲಿ, ಹಳೆ ಮಂಡ್ಲಿ, ಪೇಪರ್‌ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗುವ ಸ್ವಸಹಾಯ ಸಂಘದ ಮಹಿಳೆಯರಿಗೆ ಈ ಭಾಗದಲ್ಲೆಲ್ಲೂ ತಂಗುದಾಣಗಳೇ ಇಲ್ಲವಾಗಿದೆ. ಹೀಗಾಗಿ, ರಸ್ತೆ ಬದಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಖಾಸಗಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತಿದ್ದರೂ ಯಾವುದೇ ವಾರ್ಡ್‌ಗಳಲ್ಲಿ ಬಸ್‌ ನಿಲ್ದಾಣಗಳೇ ಇಲ್ಲ. ಬಿಸಿಲು, ಮಳೆಗಾಲದಲ್ಲಿ ತಂಗುದಾಣ ಇಲ್ಲದೇ ಇಲ್ಲಿನ ನಿವಾಸಿಗಳು ಕೂಡ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ, ಈ ಪ್ರದೇಶದಲ್ಲಿ ಸಿಟಿ ಬಸ್‌ ನಿಲ್ದಾಣ ನಿರ್ಮಿಸಬೇಕೆಂದು ಮನವಿ ಮಾಡಿದ್ದಾರೆ. ಒಕ್ಕೂಟದ ಅಧ್ಯಕ್ಷೆ ಶಕುಂತಲಾ, ಪ್ರಮುಖರಾದ ದಾP್ಷಾಯಿಣಿ, ಸವಿತಾ, ಪ್ರಭಾವತಿ, ಜಗದೀಶ್‌, ವಿಜಯ್‌, ಜಮೃದ್‌, ಫರಿದಾ, ರೇಣುಕಮ್ಮ, ಸವಿತಾ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ