ಆ್ಯಪ್ನಗರ

ಡಿಪಿಆರ್‌ ಹಿಂದಕ್ಕೆ ಪಡೆಯಲು ಆಗ್ರಹ

ತಾಲೂಕಿನ ಲಿಂಗನಮಕ್ಕಿ ಅಣೆಕಟ್ಟಿನಿಂದ ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗುವ ಯೋಜನೆಗೆ ಸಂಬಂಧಪಟ್ಟಂತೆ ಡಿಪಿಆರ್‌ ತಯಾರಿಸಲು ಸೂಚಿಸಿದ ಆದೇಶವನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿ ಬುಧವಾರ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಬೆಂಗಳೂರಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

Vijaya Karnataka 27 Jun 2019, 5:00 am
ಸಾಗರ : ತಾಲೂಕಿನ ಲಿಂಗನಮಕ್ಕಿ ಅಣೆಕಟ್ಟಿನಿಂದ ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗುವ ಯೋಜನೆಗೆ ಸಂಬಂಧಪಟ್ಟಂತೆ ಡಿಪಿಆರ್‌ ತಯಾರಿಸಲು ಸೂಚಿಸಿದ ಆದೇಶವನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿ ಬುಧವಾರ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಬೆಂಗಳೂರಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
Vijaya Karnataka Web SMR-26sgr4


ಈ ಸಂದರ್ಭ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಆರ್‌.ಜಯಂತ್‌ ಮಾತನಾಡಿ, ಮಲೆನಾಡು ಭಾಗದಲ್ಲಿ ಇತ್ತೀಚೆಗೆ ಮಳೆ ಪ್ರಮಾಣ ಸಹ ತೀರ ಕುಸಿದಿದೆ. ಗ್ರಾಮೀಣರು ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಹೊತ್ತಿನಲ್ಲಿ ಲಿಂಗನಮಕ್ಕಿ ನೀರನ್ನು ಬೆಂಗಳೂರಿಗೆ ಒಯ್ಯುವ ಯೋಜನೆ ಕಾರ್ಯಸಾಧುವಲ್ಲ, ಜತೆಗೆ ಅವೈಜ್ಞಾನಿಕವಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು.

ಪ್ರಸ್ತುತ ಲಿಂಗನಮಕ್ಕಿ ಅಣೆಕಟ್ಟಿನ ನೀರು ಡೆಡ್‌ ಸ್ಟೋರೇಜ್‌ ತಲುಪಿದೆ. ಡೆಡ್‌ ಸ್ಟೋರೇಜ್‌ ಜತೆಗೆ ಹೂಳು ತುಂಬಿಕೊಂಡು ನೀರು ಮಣ್ಣಿನ ಬಣ್ಣಕ್ಕೆ ತಿರುಗಿದೆ. ಪ್ರತಿ ಬೇಸಿಗೆ ಸಂದರ್ಭದಲ್ಲೂ ಈ ಸ್ಥಿತಿ ಮಾಮೂಲಿಯಾಗಿದೆ. ಇಂತಹ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತೇವೆ ಎನ್ನುವುದೇ ಹಾಸ್ಯಾಸ್ಪದ ಸಂಗತಿ ಎಂದು ಉಪ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.

ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಒಯ್ಯಲು ಮಲೆನಾಡು ಭಾಗದ ಜನರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಕಾಂಗ್ರೆಸ್‌ ಸಹ ಯೋಜನೆ ವಿರೋಧಿಸುತ್ತಿದೆ. ಯೋಜನಾ ವರದಿ ತಯಾರಿಸಲು ನೀಡಿರುವ ಆದೇಶವನ್ನು ತಕ್ಷ ಣ ಹಿಂದಕ್ಕೆ ಪಡೆಯಬೇಕೆಂಬುದು ಕಾಂಗ್ರೆಸ್‌ ಅಭಿಪ್ರಾಯ. ಸರಕಾರ ಮಲೆನಾಡು ಭಾಗದ ಜನರು, ಕಾಂಗ್ರೆಸ್‌ ವಿರೋಧವನ್ನು ಪರಿಗಣಿಸಿ ಯೋಜನೆ ಕೈಬಿಡಬೇಕೆಂದು ಒತ್ತಾಯಿಸಿದರು.

ಮಾಜಿ ಶಾಸಕರಾದ ಚಂದ್ರಶೇಖರಪ್ಪ, ಸಾಗರ ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ತಸ್ರೀಫ್‌ ಇಬ್ರಾಹಿಂ, ಪ್ರಧಾನ ಕಾರ‍್ಯದರ್ಶಿ ಮೈಕೆಲ್‌ ಡಿಸೋಜ, ಉಮೇಶ್‌ ಇತರರು ಇದ್ದರು.

-------
ದೀರ್ಘಾವಧಿ ಯೋಜನೆಯಾಗಿದ್ದು, ಪ್ರಾಥಮಿಕ ಪ್ರಸ್ತಾವನೆಯಾಗಿದೆ. ಯೋಜನೆಯ ಸಾಧಕ ಬಾಧಕಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಇದು ದೊಡ್ಡ ಮೊತ್ತ ವ್ಯಯಿಸಬೇಕಾದ ಯೋಜನೆ ಸಹ ಆಗಿದ್ದು, ಅಷ್ಟು ದೊಡ್ಡ ಮೊತ್ತವನ್ನು ವ್ಯಯಿಸುವ ಮುನ್ನ ಒಟ್ಟೂ ಯೋಜನೆಯ ಕಾರ‍್ಯಸಾಧ್ಯತೆ ಬಗ್ಗೆ ಸಹ ಚಿಂತನೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.
- ತಸ್ರೀಫ್‌ ಇಬ್ರಾಹಿಂ , ಸಾಗರ ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ .

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ