ಆ್ಯಪ್ನಗರ

ಡ್ರಾಮ ಬಿಟ್ಟು ರೈತರ ಸಾಲ ಮನ್ನಾ ಮಾಡಿ

ರಾಜ್ಯ ಸರಕಾರ ನೀಡಿದ್ದ ಭರವಸೆಯಂತೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಪವಿತ್ರಾ ರಾಮಯ್ಯ ಹೇಳಿದರು.

Vijaya Karnataka 22 Jun 2018, 5:00 am
ಶಿವಮೊಗ್ಗ : ರಾಜ್ಯ ಸರಕಾರ ನೀಡಿದ್ದ ಭರವಸೆಯಂತೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಪವಿತ್ರಾ ರಾಮಯ್ಯ ಹೇಳಿದರು.
Vijaya Karnataka Web dont drama clear farmers loan
ಡ್ರಾಮ ಬಿಟ್ಟು ರೈತರ ಸಾಲ ಮನ್ನಾ ಮಾಡಿ


ಸುದ್ದಿಗೋಷ್ಠಿಯಲ್ಲಿ ಗುರುವಾರ ಅವರು ಮಾತನಾಡಿ, ಜೆಡಿಎಸ್‌ಗೆ ಅಧಿಕಾರ ಸಿಕ್ಕರೆ 24 ಗಂಟೆಯೊಳಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇನೆ ಎಂದಿದ್ದ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ತಿಂಗಳು ಕಳೆದರೂ ಸಾಲ ಮನ್ನಾ ಮಾಡುವ ಬಗ್ಗೆ ಯಾವುದೇ ಕಾಳಜಿ ತೋರುತ್ತಿಲ್ಲ ಎಂದು ಆರೋಪಿಸಿದರು.

ಮುಖ್ಯಮಂತ್ರಿಗಳು ಡ್ರಾಮ ಮಾಡುವುದನ್ನು ನಿಲ್ಲಿಸಬೇಕು. ಕೊಟ್ಟ ಮಾತಿನಂತೆ ಸಾಲ ಮನ್ನಾ ಮಾಡಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ವಿಧಾನಸೌಧ ಮುತ್ತಿಗೆ:

ಯಡಿಯೂರಪ್ಪಗೆ ಅಧಿಕಾರ ಬಿಟ್ಟುಕೊಡದೇ ವಚನಭ್ರಷ್ಟ ಪ್ರಶಸ್ತಿ ಪಡೆದುಕೊಂಡಿರುವ ಕುಮಾರಸ್ವಾಮಿ ಮತ್ತೆ ವಚನಭ್ರಷ್ಟರಾಗುವುದು ಬೇಡ. ಬಜೆಟ್‌ ಮಂಡನೆವರೆಗೂ ಕಾದು ನೋಡುತ್ತೇವೆ. ಅದಾಗ್ಯೂ ರೈತರ ಸಾಲ ಮನ್ನಾ ಆಗಲಿಲ್ಲ ಎಂದರೆ ವಿಧಾನಸೌಧ ಮುತ್ತಿಗೆ ಹಾಕುವ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಮೋರ್ಚಾ ಕಾರ್ಯದರ್ಶಿ ಬ್ಯಾಟ ರಂಗೇಗೌಡ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೃಷಿಗೆ ಹೆಚ್ಚಿನ ಒತ್ತು ನೀಡಿದೆ. 60 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌ ರೈತಪರ ಹಾಗೂ ಕೃಷಿಗೆ ನೀಡಿದ್ದ ಕೊಡುಗೆ ಏನೆಂದು ತಿಳಿಸಲಿ. 4 ವರ್ಷದಲ್ಲಿ ಮೋದಿ ಸರಕಾರ ಕೃಷಿ ಕ್ಷೇತ್ರಕ್ಕೆ ನೀಡಿದ್ದ ಕೊಡುಗೆ ಏನೆಂಬುದನ್ನು ನಾವು ತಿಳಿಸುತ್ತೇವೆ. ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಸ್‌.ರುದ್ರೇಗೌಡ, ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌, ಪ್ರಮುಖರಾದ ಎಚ್‌.ಸಿ.ಬಸವರಾಜಪ್ಪ, ಸೀತಾನಾಯ್ಡು, ಗೀತಾ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ