ಆ್ಯಪ್ನಗರ

ಶಿಕ್ಷಣವೇ ಭವಿಷ್ಯ ಬರೆಯುವ ಸಾಧನ

ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷ ಣವೇ ಬದಲಾವಣೆಯ ಪರಮ ಅಸ್ತ್ರ. ಆದ್ದರಿಂದ ಯಾವುದೇ ಕಾರಣಕ್ಕೂ ವ್ಯಾಸಂಗ ಮೊಟಕುಗೊಳಿಸಬಾರದು ಎಂದು ಶಾಸಕ ಬಿ.ಕೆ.ಸಂಗಮೇಶ್ವರ್‌ ಹೇಳಿದರು.

Vijaya Karnataka 4 Jan 2019, 5:00 am
ಭದ್ರಾವತಿ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷ ಣವೇ ಬದಲಾವಣೆಯ ಪರಮ ಅಸ್ತ್ರ. ಆದ್ದರಿಂದ ಯಾವುದೇ ಕಾರಣಕ್ಕೂ ವ್ಯಾಸಂಗ ಮೊಟಕುಗೊಳಿಸಬಾರದು ಎಂದು ಶಾಸಕ ಬಿ.ಕೆ.ಸಂಗಮೇಶ್ವರ್‌ ಹೇಳಿದರು.
Vijaya Karnataka Web SMR-3BDVT4


ಅವರು ನ್ಯೂಟೌನ್‌ ಸರಕಾರಿ ಬಾಲಿಕಾ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕ್ರೀಡೆ, ಕಲಾ ಹಾಗೂ ಸಾಂಸ್ಕೃತಿಕ ಸಂಘಗಳ ಸಮಾರೋಪ, ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

ಪೈಪೋಟಿ ಯುಗದಲ್ಲಿ ವಿದ್ಯಾರ್ಥಿನಿಯರು ಬದಲಾವಣೆಯ ಹರಿಕಾರರಾಗಬೇಕು. ಸಮಾಜದ ಅಭಿವೃದ್ಧಿಗೆ ಮುಕ್ತ ಅಭಿಪ್ರಾಯ ವ್ಯಕ್ತಪಡಿಸುವಲ್ಲಿ ಸಫಲರಾಗಬೇಕು. ಪೋಷಕರು ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸಿ ಅವರಲ್ಲಿರುವ ಸುಪ್ತ ಪ್ರತಿಭೆ ವ್ಯಕ್ತಪಡಿಸಲು ಪ್ರೋತ್ಸಾಹಿಸಬೇಕೆಂದ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿದ ವಿದ್ಯಾರ್ಥಿನಿಯರಿಗೆ ನಗದು ಪ್ರೋತ್ಸಾಹ ನೀಡುವುದಾಗಿ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಉಪ ಪ್ರಾಚಾರ್ಯ ಟಿ.ಎಸ್‌.ಸುಮನಾ ಮಾತನಾಡಿ, ಜೀವನ ಕೌಶಲ ಹಾಗು ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧಿಸಿ ಗೆಲ್ಲುವ ಛಲ, ಧನಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕೆಂದರು. ಎಸ್‌ಡಿಎಂಸಿ ಕಾರಾರ‍ಯಧ್ಯಕ್ಷ ಅಬ್ದುಲ್‌ ಲತೀಫ್‌ ಶಾಲೆಗೆ ಬೇಕಾಗಿರುವ ಭೌತಿಕ ಸೌಲಭ್ಯ ಒದಗಿಸಬೇಕೆಂದು ಶಾಸಕರಿಗೆ ಮನವಿ ಸಲ್ಲಿಸಿದರು. ಪೌರಾಯುಕ್ತ ಮನೋಹರ್‌, ಕಾಲೇಜು ಪ್ರಾಂಶುಪಾಲ ಡಾ.ವಿಜಯಲಕ್ಷ್ಮೀ, ಉಪ ಪ್ರಾಚಾರ್ಯ ಎನ್‌.ಸಿ.ವಿರೂಪಾಕ್ಷ ಪ್ಪ, ರೇವಣಸಿದ್ದಪ್ಪ, ಎನ್‌.ಬಸವರಾಜಪ್ಪ, ಪ್ರೌಢಶಾಲೆ ಶಿಕ್ಷ ಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದಬಸಪ್ಪ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ