ಆ್ಯಪ್ನಗರ

ಶರಾವತಿ ಬೆಂಗಳೂರಿಗೆ ತಿರುಗಿಸಿದರೆ ಹೋರಾಟ

ಶರಾವತಿಯಿಂದ ಬೆಂಗಳೂರಿಗೆ ನೀರು ಹರಿಸುವ ಯೋಜನೆಯನ್ನು ಕೈಬಿಡಬೇಕು. ಇಲ್ಲದಿದ್ದರೆ ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.

Vijaya Karnataka 22 Jun 2019, 6:44 pm
ಶಿವಮೊಗ್ಗ: ಶರಾವತಿಯಿಂದ ಬೆಂಗಳೂರಿಗೆ ನೀರು ಹರಿಸುವ ಯೋಜನೆಯನ್ನು ಕೈಬಿಡಬೇಕು. ಇಲ್ಲದಿದ್ದರೆ ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.
Vijaya Karnataka Web fighting if sharavathi turns to bangalore
ಶರಾವತಿ ಬೆಂಗಳೂರಿಗೆ ತಿರುಗಿಸಿದರೆ ಹೋರಾಟ


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರದ ಹಿನ್ನೆಲೆ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಆದ್ದರಿಂದ, ಈ ಯೋಜನೆ ಮುನ್ನೆಲೆಗೆ ಬಂದಿದೆ. ಪ್ರಸಕ್ತ ಮಲೆನಾಡಿನಲ್ಲಿಯೇ ನೀರಿಗಾಗಿ ಹಾಹಾಕಾರ ಏರ್ಪಟ್ಟಿದ್ದು, ಇಂತಹ ಸ್ಥಿತಿಯಲ್ಲಿ ಬೆಂಗಳೂರಿಗೆ ನೀರು ಹರಿಸುವುದು ಬೇಡ ಎಂದರು.

ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆಗೆ ತಮ್ಮ ಹೆಸರು ಕೇಳಿಬರುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಮಧು, 'ಪಕ್ಷ ಈ ಹಿಂದೆ ನೀಡಿದ್ದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಮುಂದೆ ಯಾವ ಜವಾಬ್ದಾರಿ ನೀಡಿದರೂ ಅದನ್ನು ಸಮರ್ಥವಾಗಿ ನಿಭಾಯಿಸುವೆ. ಎಚ್‌.ವಿಶ್ವನಾಥ್‌ ಅವರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿಯಾಗಿದ್ದು, ಒಂದುವೇಳೆ ಅವರು ರಾಜೀನಾಮೆ ಹಿಂಪಡೆದರೆ ಈ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ