ಆ್ಯಪ್ನಗರ

ಮಾಜಿ ಎಂಎಲ್‌ಸಿ ಮೀರ್‌ ಅಜೀಜ್‌ ಅಹ್ಮದ್‌ ನಿಧನ

ವಿಧಾನ ಪರಿಷತ್‌ ಮಾಜಿ ಸದಸ್ಯ ಜಿಲ್ಲಾ ಕಾಂಗ್ರೆಸ್‌ನ ಹಿರಿಯ ಮುಖಂಡ ಮೀರ್‌ ಅಜೀಜ್‌ ಅಹ್ಮದ್‌(86) ಅವರು ಶುಕ್ರವಾರ ಬೆಳಗಿನ ಜಾವ ನಿಧನ ಹೊಂದಿದರು.

Vijaya Karnataka 1 Dec 2018, 5:00 am
ಶಿವಮೊಗ್ಗ : ವಿಧಾನ ಪರಿಷತ್‌ ಮಾಜಿ ಸದಸ್ಯ ಜಿಲ್ಲಾ ಕಾಂಗ್ರೆಸ್‌ನ ಹಿರಿಯ ಮುಖಂಡ ಮೀರ್‌ ಅಜೀಜ್‌ ಅಹ್ಮದ್‌(86) ಅವರು ಶುಕ್ರವಾರ ಬೆಳಗಿನ ಜಾವ ನಿಧನ ಹೊಂದಿದರು.
Vijaya Karnataka Web 30SMG Meer


ಅವರಿಗೆ ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಜಿಲ್ಲಾ ಕಾಂಗ್ರೆಸ್‌ ಸಮಿತಿಯಲ್ಲಿ 11 ವರ್ಷಗಳ ಕಾಲ ಅಧ್ಯಕ್ಷರಾಗಿ ಅಲ್ಲದೆ ಅದಕ್ಕೂ ಮುನ್ನ ವಿವಿಧ ಘಟಕಗಳಲ್ಲಿ ಜವಾಬ್ದಾರಿ ನಿರ್ವಹಿಸಿದ್ದರು. ರಾಜ್ಯ ನಿರ್ಮಾಣ ನಿಗಮ, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ರಾಗಿಯೂ ಸೇವೆ ಸಲ್ಲಿಸಿದ್ದರು. ಶಿವಮೊಗ್ಗ ನಗರಸಭೆಗೆ 2 ಭಾರಿ ಸದಸ್ಯರಾಗಿ ಚುನಾಯಿತರಾಗಿದ್ದ ಅವರು ಒಮ್ಮೆ ಸಲಹಾ ಸಮಿತಿ ಸದಸ್ಯರಾಗಿಯೂ ನೇಮಕಗೊಂಡಿದ್ದರು. ಸ್ಥಳೀಯ ಸಂಸ್ಥೆಗಳ ಶಿವಮೊಗ್ಗ ಕ್ಷೇತ್ರದಿಂದ ವಿಧಾನ ಪರಿಷತ್‌ಗೂ ಚುನಾಯಿತರಾಗಿದ್ದರು.

ಜಿಲ್ಲಾ ವಕ್ಫ್ ಬೋರ್ಡ್‌ ಅಧ್ಯಕ್ಷ ರಾಗಿ ಅಲ್ಪಸಂಖ್ಯಾತರ ಅಭಿವೃದ್ಧಿ ಚುಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಬಿ.ಎಚ್‌.ರಸ್ತೆ ಸರಕಾರಿ ಫ್ರೌಢÜಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದ ಇವರು ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷ ರಾಗಿ ಕಾರ್ಯನಿರ್ವಹಿಸಿದ್ದರು. ಮುಸ್ಲಿಂ ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣದಲ್ಲಿ ಇವರ ಕೊಡುಗೆ ಅಪಾರವಾಗಿದೆ. ಪಕ್ಷದೊಳಗೆ ಅಲ್ಲದೆ ಪಕ್ಷಾತೀತವಾಗಿಯೂ ಅಪಾರ ಜನಮನ್ನಣೆ ಗಳಿಸಿದ್ದರು.

ಸಂತಾಪ: ಮೀರ್‌ ಅಜೀಜ್‌ ಅವರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್‌ ಸಂತಾಪ ಸೂಚಿಸಿದೆ. ಪಕ್ಷದ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ಸಂತಾಪ ಸೂಚಕ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್‌, ಮುಖಂಡರಾದ ಎನ್‌.ರಮೇಶ್‌, ಸಿ.ಎಸ್‌.ಚಂದ್ರಭೂಪಾಲ, ವಿಶ್ವನಾಥ ಕಾಶಿ, ವಿಜಯಲಕ್ಷ್ಮೀಪಾಟೀಲ್‌, ಎಚ್‌.ಸಿ.ಯೋಗಿಶ್‌, ಆರೀಫ್‌ವುಲ್ಲಾ ಮತ್ತಿತರರು ಭಾಗವಹಿಸಿ ಸಂತಾಪ ಸೂಚಿಸಿದರು.

ಮೀರ್‌ ಅಜೀಜ್‌ ಅವರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ತೀ.ನ.ಶ್ರೀನಿವಾಸ್‌, ಮಾಜಿ ಶಾಸಕ ಎಚ್‌.ಎಂ.ಚಂದ್ರಶೇಖರಪ್ಪ, ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಎಸ್‌.ಪಿ.ಶೇಷಾದ್ರಿ ಸಂತಾಪ ಸೂಚಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ