ಆ್ಯಪ್ನಗರ

ಗೌರವಧನ ಸಕಾಲಕ್ಕೆ ನೀಡಿ

ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸುವಂತೆ ಒತ್ತಾಯಿಸಿ ಶುಕ್ರವಾರ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್‌ (ಎಐಟಿಯುಸಿ) ತಾಲೂಕು ಶಾಖೆ ವತಿಯಿಂದ ತಹಸೀಲ್ದಾರ್‌ ಕಚೇರಿ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.

Vijaya Karnataka 6 Jul 2019, 5:00 am
ಸಾಗರ: ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸುವಂತೆ ಒತ್ತಾಯಿಸಿ ಶುಕ್ರವಾರ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್‌ (ಎಐಟಿಯುಸಿ) ತಾಲೂಕು ಶಾಖೆ ವತಿಯಿಂದ ತಹಸೀಲ್ದಾರ್‌ ಕಚೇರಿ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.
Vijaya Karnataka Web SMR-05SGR1


ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಕ್ತ ತರಬೇತಿ ನೀಡಿ ಪಠ್ಯಪುಸ್ತಕ ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಸದನದಲ್ಲಿ ಪ್ರಸ್ತಾಪಿಸುವ ಭರವಸೆ: ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ಎಚ್‌.ಹಾಲಪ್ಪ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಅಹವಾಲು ಆಲಿಸಿ, ಮನವಿ ಸ್ವೀಕರಿಸಿದರು. ಈ ಸಂದರ್ಭ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಸಹ ಸಕಾಲಕ್ಕೆ ನೀಡುತ್ತಿಲ್ಲ. ಎಲ್‌ಕೆಜಿ ಮತ್ತು ಯುಕೆಜಿಯನ್ನು ಅಂಗನವಾಡಿ ಕೇಂದ್ರಗಳಲ್ಲಿ ಪ್ರಾರಂಭಿಸಿ, ಕಾರ್ಯಕರ್ತೆಯರು, ಸಹಾಯಕಿಯರನ್ನು ನೇಮಕ ಮಾಡಿಕೊಳ್ಳುವಂತೆ ಸರಕಾರಕ್ಕೆ ಸದನದ ಮೂಲಕ ಒತ್ತಾಯಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಸಭೆಗೆ ಮುನ್ನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ರಾಜ್ಯ ಸಂಚಾಲಕ ರವೀಂದ್ರ ಸಾಗರ್‌, ತಾಲೂಕು ಅಧ್ಯಕ್ಷೆ ಕೋಮಲಾಕ್ಷಿ, ಕಾರ‍್ಯದರ್ಶಿ ಸಾವಿತ್ರಿ ಚಕ್ಕೋಡು, ಖಜಾಂಚಿ ಮಹಾಲಕ್ಷ್ಮೀ ಹುತ್ತಾದಿಂಬ, ಉಪಾಧ್ಯಕ್ಷೆ ಪುಷ್ಪಾ ಆವಿನಹಳ್ಳಿ, ಶಾಂತ ದಾಸಕೊಪ್ಪ, ಕಲಾವತಿ, ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಸ್‌.ವಿ.ಹಿತಕರ ಜೈನ್‌ , ಮಧುರಾ, ಮಹಾಲಕ್ಷ್ಮೀ, ಸುಶೀಲ, ವಿನುತಾ, ಉಮಾ, ವಾರಿಜಾ, ಸುಲೋಚನ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ